ಕಬಿನಿ ಡ್ಯಾಂ ಬಳಿ ಬೃಂದಾವನ ನಿರ್ಮಾಣಕ್ಕೆ ಕ್ರಮ

Team Udayavani, Sep 8, 2019, 3:00 AM IST

kabini-dam

ಎಚ್‌.ಡಿ.ಕೋಟೆ: ವರುಣನ ಕೃಪೆಯಿಂದ ಈ ಬಾರಿ ಅಗತ್ಯಕ್ಕಿಂತ ಹೆಚ್ಚು ಮಳೆಯಾಗಿ ರೈತರಿಗೆ ಹರ್ಷವನ್ನುಂಟು ಮಾಡಿದೆ. ಇನ್ನೊಂದು ಕಡೆ ರಾಜ್ಯದಲ್ಲಿ ಹೆಚ್ಚಿನ ಮಳೆಯಿಂದ ತೀವ್ರ ಹಾನಿ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು. ತಾಲೂಕಿನ ಕಬಿನಿ ಜಲಾಶಯಕ್ಕೆ ಶನಿವಾರ ವಿಶೇಷ ಪೂಜೆ ಸಲ್ಲಿಸಿ, ಸಾಂಪ್ರದಾಯಕ ಬಾಗಿನ ಅರ್ಪಿಸಿ ಮಾತನಾಡಿದರು.

ಮಳೆಯಿಂದ ಆಗಿರುವ ಹಾನಿಯನ್ನು ತುಂಬಿಸಲು ಅಭಿವೃದ್ಧಿ ಹಣವನ್ನು ಬಳಸಲಾಗುವುದು ಎಂದರು. ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಹಿರಿಮೆ ಹೊಂದಿರುವ ಕಬಿನಿ ಜಲಾಶಯ, ತಮಿಳುನಾಡಿಗೆ ನೀರಿನ ಸಮಸ್ಯೆ ಉಂಟಾದಾಗ ಈ ಜಲಾಶಯದಿಂದ ಹೆಚ್ಚು ನೀರನ್ನು ಹರಿಸಿ ಸಮಸ್ಯೆ ಬಗೆಹರಿಸಲಾಗಿತ್ತು ಎಂದು ಸ್ಮರಿಸಿದರು.

ಸೇತುವೆ ಮುಳುಗಡೆ: ಮಳೆಗಾಲದ ಸಂದರ್ಭ ಹೆಚ್ಚಿನ ಮಳೆ ಸುರಿದಾಗ ಕಬಿನಿ ಜಲಾಶಯದಿಂದ ಹೆಚ್ಚಿನ ನೀರನ್ನು ಮುಂಭಾಗದ ನದಿಗೆ ಹರಿಸಿದಾಗ ಜಲಾಶಯದ ಮುಂಭಾಗ ಈಗ ಇರುವ ಸೇತುವೆ ಮುಳುಗಡೆಯಾಗಿ ತಾಲೂಕಿನ 30ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಡಿತಗೊಂಡಿವೆ. ಶೀಘ್ರ ಸೇತುವೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸಂಪುಟ ಸಭೆಯಲ್ಲಿ ತೀರ್ಮಾನಿಸಿ 20 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಮುಂದಾಗುವುದಾಗಿ ಭರವಸೆ ನೀಡಿದರು.

ಬೃಂದಾವನ ನಿರ್ಮಾಣ: ಜೊತೆಗೆ ಕಬಿನಿ ಜಲಾಶಯದ ಮುಂಭಾಗ ಸುಮಾರು 300 ಎಕೆರೆಯಷ್ಟು ವಿಶಾಲವಾದ ಜಾಗ ಇದ್ದು, ಈ ಜಾಗದಲ್ಲಿ ಕೆಆರ್‌ಎಸ್‌ ಮಾದರಿಯ ಬೃಂದಾವನ ನಿರ್ಮಾಣ ಮಾಡುವ ಮೂಲಕ ಜಲಾಶಯ ಸೇರಿದಂತೆ ತಾಲೂಕಿನ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ, ಸಂಸದ ವಿ.ಶ್ರೀನಿವಾಸ್‌ಪ್ರಸಾದ್‌, ಗೃಹ ಸಚಿವ ಬಸವರಾಜು ಬೊಮ್ಮಾಯಿ, ಜಿಪಂ ಅಧ್ಯಕ್ಷೆ ಪರಿಮಳಾ, ಶಾಸಕರಾದ ಅನಿಲ್‌ ಕುಮಾರ್‌, ಹರ್ಷವರ್ಧನ್‌, ನಿರಂಜನ್‌ಕುಮಾರ್‌, ಮಾಜಿ ಸಚಿವ ಎಂ.ಶಿವಣ್ಣ, ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ಬಸವರಾಜು, ಜಲ ಸಂಪನ್ಮೂಲ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌, ಪೊಲೀಸ್‌ ಐಜಿಪಿ ವಿಫುಲ್‌ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಶ್ಯಂತ್‌, ತಹಶೀಲ್ದಾರ್‌ ಆರ್‌. ಮಂಜುನಾಥ್‌, ಇಒ ರಾಮಲಿಂಗಯ್ಯ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.