30 ಸಾವಿರ ಮನೆಗಳಿಗೆ ಸ್ಟಿಕರ್‌ ಅಳವಡಿಕೆ


Team Udayavani, Mar 20, 2019, 7:23 AM IST

m3-30saviras.jpg

ಹುಣಸೂರು: ಚುನಾವಣಾ ಸಾಕ್ಷರತಾ ಕ್ಲಬ್‌ ವತಿಯಿಂದ ತಾಲೂಕಿನ 30 ಸಾವಿರ ಮನೆಗಳಿಗೆ ಭೇಟಿ ನೀಡಿ ಮತದಾನ ಜಾಗೃತಿ ಕುರಿತಾದ ಸ್ಟಿಕರ್‌ ಅಂಟಿಸುವ ಅಭಿಯಾನ ಮಂಗಳವಾರದಿಂದ ಆರಂಭಗೊಳ್ಳಲಿದೆ ಎಂದು ಸ್ವೀಪ್‌ ಸಮಿತಿ ಅಧ್ಯಕ್ಷ ಹಾಗೂ ತಾಲೂಕು ಚುನಾವಣಾ ನೋಡಲ್‌ ಅಧಿಕಾರಿ ಸಿ.ಆರ್‌.ಕೃಷ್ಣಕುಮಾರ್‌ ತಿಳಿಸಿದರು. 

ಪಟ್ಟಣದ ಶಿಕ್ಷಕರ ಭವನದಲ್ಲಿ ಸ್ವೀಪ್‌ ಸಮಿತಿ ವತಿಯಿಂದ ಚುನಾವಣಾ ಸಾಕ್ಷರತಾ ಕ್ಲಬ್‌ ಸದಸ್ಯರಿಗಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಕಳೆದ ವಿಧಾನಸಭಾ ಚುನಾವಣೆ ವೇಳೆ 20ಕ್ಕೂ ಮತಗಟ್ಟೆಗಳು ಅತ್ಯಂತ ಕಡಿಮೆ ಮತದಾನಗೊಂಡ ಮತಗಟ್ಟೆಗಳಾಗಿವೆ. ಈ ಪೈಕಿ ನಲ್ಲೂರುಪಾಲ ಮೊದಲ ಸ್ಥಾನದಲ್ಲಿದ್ದು, ಎಂ.ಆರ್‌.ಹೊಸಳ್ಳಿ ಎರಡನೇ ಸ್ಥಾನದಲ್ಲಿದೆ.

ಹುಣಸೂರು ಪಟ್ಟಣ ವ್ಯಾಪ್ತಿಯ 8 ಮತಗಟ್ಟೆಗಳು ಕಡಿಮೆ ಮತದಾನ ಹೊಂದಿವೆ. ಇದಲ್ಲದೇ ಸೂಕ್ಷ್ಮ ಮತಗಟ್ಟೆಗಳು, ಹಾಡಿಗಳು, ಕುಗ್ರಾಮಗಳು ಮುಂತಾದ ಸ್ಥಳಗಳನ್ನು ಗುರುತಿಸಲಾಗಿದೆ. ಮಾ.19ರಿಂದ ಮಾ.23ರವರೆಗೆ ತಾಲೂಕಿನಾದ್ಯಂತ ಈ ಎಲ್ಲಾ ಭಾಗದ 30 ಸಾವಿರ ಕುಟುಂಬದ ಮನೆಗಳಿಗೆ ಆಶಾ, ಆಂಗನವಾಡಿ ಕಾರ್ಯಕರ್ತೆಯರು ಹಾಗು ನೀರುಗಂಟಿಗಳ ಮೂಲಕ ತೆರಳಿ ಮನೆ ಬಾಗಿಲಿಗೆ ಸ್ಟಿಕ್ಕರ್‌ಗಳನ್ನು ಅಂಟಿಸಲಾಗುವುದು ಎಂದು ಹೇಳಿದರು.

ಎಚ್ಚರವಹಿಸಿ: ಈ ಅಭಿಯಾಣಕ್ಕೆ ಮತಗಟ್ಟೆ ಅಧಿಕಾರಿಗಳು(ಬಿಎಲ್‌ಒ) ಸಾಥ್‌ ನೀಡಲಿದ್ದಾರೆ. ಮತಗಟ್ಟೆ ಅಧಿಕಾರಿಗಳು ಅತ್ಯಂತ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕಿದೆ. ಯಾವುದೇ ರಾಜಕೀಯ ಪಕ್ಷ, ವ್ಯಕ್ತಿಯೊಂದಿಗೆ ಹೆಚ್ಚಿನ ಸಂಬಂಧ ಬೇಡ. ಇದರಿಂದ ಹುದ್ದೆಯನ್ನೇ ಕಳೆದುಕೊಳ್ಳುವ ಉದಾಹರಣೆ ಮೈಸೂರಿನಲ್ಲಿ ಸಂಭವಿಸಿದೆ ಎಚ್ಚರಿಕೆಯಿಂದ  ಅಧಿಕಾರಿಯಾಗಿ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸುವತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಪಿ.ನಾಗರಾಜ್‌, ಸಿಡಿಪಿಒ ನವೀನ್‌ಕುಮಾರ್‌,  ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಂತೋಷ್‌ಕುಮಾರ್‌, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಶಿಕುಮಾರ್‌ ಹಾಗೂ ಬಿಎಲ್‌ಒಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮನೆಗಳ ಬಾಗಿಲಿಗೆ ಅಂಟಿಸುವ ಸ್ಟಿಕ್ಕರ್‌ಗಳನ್ನು ಬಿಡುಗಡೆಗೊಳಿಸಲಾಯಿತು. 

ಟಾಪ್ ನ್ಯೂಸ್

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

11

Manipal: ಡಂಪಿಂಗ್‌ ಯಾರ್ಡ್‌ ಆದ ಮಣ್ಣಪಳ್ಳ!

10

Udupi: ಒಂದೇ ವೃತ್ತ; ಪೊಲೀಸ್‌ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.