ಶಾಸಕರ ಮನೆ ಮೇಲೆ ಕಲ್ಲು ತೂರಾಟ: ಪ್ರತಿಭಟನೆ
Team Udayavani, Feb 16, 2019, 7:27 AM IST
ತಿ.ನರಸೀಪುರ: ಹಾಸನ ಶಾಸಕ ಪ್ರೀತಂ ಜೆ.ಗೌಡ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ತೂರಿ, ಬೆಂಬಲಿಗನ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟಿಸಿದರು.
ಪಟ್ಟಣದ ತಾಲೂಕು ಕಚೇರಿ ಮಿನಿ ವಿಧಾನಸೌಧದ ಮುಂಭಾಗ ಸೇರಿದ ಮುಖಂಡರು, ಕಾರ್ಯಕರ್ತರು, ಮುಖ್ಯ ಮಂತ್ರಿ ಕುಮಾರಸ್ವಾಮಿ, ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವರುಣಾ ವಿಧಾನಸಭಾ ಕ್ಷೇತ್ರದ ಹಿರಿಯ ಮುಖಂಡ ತೋಟದಪ್ಪ ಬಸವರಾಜು ಮಾತನಾಡಿ, ಶಾಸಕರೊಬ್ಬರ ಮನೆ ಮೇಲೆ ದಾಳಿ ನಡೆಸಿ, ಕಲ್ಲು ತೂರಾಟ ಮಾಡಿರುವುದು ಖಂಡನೀಯ ಎಂದರು.
ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ರೇವಣ್ಣ ಗೂಂಡಾಗಿರಿಗೆ ಕುಮ್ಮಕ್ಕು ನೀಡುವ ಮೂಲಕ ತಮ್ಮಲ್ಲಿನ ಹೀನ ಸಂಸ್ಕೃತಿ ಪ್ರದರ್ಶಿಸಿದ್ದಾರೆ. ಇಂತಹ ಜನ ವಿರೋಧಿ ಸರ್ಕಾರ ಕಿತ್ತೂಗೆಯಬೇಕಾಗಿದೆ ಎಂದು ಹೇಳಿದರು.
ಪ್ರಧಾನ ಕಾರ್ಯದರ್ಶಿ ಕೆ.ಎಸ್.ಬಸವರಾಜು, ಸ್ಲಂ ಮೋರ್ಚಾಧ್ಯಕ್ಷ ಕೆ.ಗಣೇಶ್, ದಯಾ ನಂದ ಪಟೇಲ್, ಮುಖಂಡರಾದ ಎನ್.ಲೋಕೇಶ್, ಯೋಗೇಶ್, ಕಾರ್ ಮಲ್ಲಪ್ಪ, ಬಿ.ಮಹೇಶ್, ಎಂ.ಮೋಹನ್, ದೀಪು, ರಘು, ಮಹೇಶ್, ಸ್ವಾಮಿ, ಹುಳಿಮಾವು ಮಹೇಂದ್ರ, ತುಂಬಲ ನಂದೀಶ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.