ತಂಬಾಕು ಬೆಳೆ ನಿಲ್ಲಿಸಿ ಸಿರಿ ಧಾನ್ಯ ಬೆಳೆಯಿರಿ
Team Udayavani, Jun 1, 2018, 2:15 PM IST
ಮೈಸೂರು: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಆಸ್ಪತ್ರೆಗಳು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ವತಿಯಿಂದ ಜಾಥಾ, ಬೀದಿ ನಾಟಕ, ಕ್ಯಾನ್ಸರ್ ತಪಾಸಣಾ ಶಿಬಿರ ಸೇರಿದಂತೆ ನಗರದೆಲ್ಲೆಡೆ ಹಲವು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಗುರುವಾರ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜನಜಾಗೃತಿ ಮೂಡಿಸಲಾಯಿತು.
ಬೃಹತ್ ಜಾಗೃತಿ ಜಾಥಾ: ವಿಶ್ವ ತಂಬಾಕು ರಹಿತ ದಿನಾಚರಣೆ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ “ತಂಬಾಕು ಮತ್ತು ಹೃದಯ ಸಂಬಂಧಿ ಕಾಯಿಲೆಗಳು’ ಎಂಬ ಘೋಷಣೆಯೊಂದಿಗೆ ಜಾಗೃತಿ ಜಾಥಾ ನಡೆಸಲಾಯಿತು.
ನಗರದ ಅರಮನೆ ಮುಂಭಾಗದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಆರಂಭಗೊಂಡ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಟಿ.ಯೋಗೀಶ್ ಚಾಲನೆ ನೀಡಿದರು. ಬಳಿಕ “ತಂಬಾಕು ಆರೋಗ್ಯಕ್ಕೆ ಹಾನಿಕಾರ’, “ಹೊಗೆ ಬೀಡ ಬೇಡಿ ನೀವು ಹೊಗೆ ಕಾಕಿಸಿಕೊಳ್ಳುತ್ತೀರಿ’,
“ರೈತರೇ ತಂಬಾಕು ಬೆಳೆ ನಿಲ್ಲಿಸಿ ಸಿರಿ ಧಾನ್ಯ ಬೆಳೆಯಿರಿ’ ಎಂಬಿತ್ಯಾದಿ ಘೋಷಣಾ ಫಲಕಗಳನ್ನು ಹಿಡಿದು ಹೆಜ್ಜೆಹಾಕಿದ ವೈದ್ಯಕೀಯ ವಿದ್ಯಾರ್ಥಿನಿಗಳು ತಂಬಾಕಿನಿಂದ ಉಂಟಾಗುವ ದುಷ್ಪಾರಿಣಾಮದ ಬಗ್ಗೆ ಅರಿವು ಮೂಡಿಸಿದರು.
ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಹೊರಟ ಜಾಥಾ ದೊಡ್ಡ ಗಡಿಯಾರ ವೃತ್ತ, ಗಾಂಧಿಚೌಕ, ಚಿಕ್ಕ ಗಡಿಯಾರ ವೃತ್ತ ಹಾಗೂ ದೇವರಾಜ ಅರಸು ರಸ್ತೆ ಮಾರ್ಗವಾಗಿ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಂತ್ಯಗೊಂಡಿತು. ಇದೇ ವೇಳೆ ಜೆಎಸ್‌ಎಸ್ ಸ್ಕೂಲ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳು ಕಿರುನಾಟಕ ಪ್ರದರ್ಶನದ ಮೂಲಕ ತಂಬಾಕಿನಿಂದಾಗುವ ಸಮಸ್ಯೆಗಳ ಬಗ್ಗೆ ತಿಳಿವಳಿಕೆ ಮೂಡಿಸುವ ಪ್ರಯತ್ನ ಮಾಡಿದರು.
ಶಿಕ್ಷಣ ಸಂಸ್ಥೆಗಳಲ್ಲಿ ಅರಿವು: ವಿಶ್ವತಂಬಾಕು ರಹಿತ ದಿನದ ಅಂಗವಾಗಿ ನಗರದ ವಿವಿಧ ಶಾಲಾ ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮ ನಡೆಸಲಾಯಿತು. ನಗರದ ಬೋಗಾದಿ ಮುಖ್ಯ ರಸ್ತೆಯ ಗಂಗೋತ್ರಿ ಪಬ್ಲಿಕ್ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ತಂಬಾಕು ರಹಿತ ದಿನದ ಪ್ರಯುಕ್ತ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು, ಮೈಮ್, ನಾಟಕ, ನೃತ್ಯ ಹಾಗೂ ಭಾಷಣಗಳ ಮೂಲಕ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಿದರು. ಪ್ರಾಂಶುಪಾಲ ಎಂ.ಶ್ರೀಧರ್, ಶಾಲೆಯ ಆಡಳಿತಾಧಿಕಾರಿ ಕಾಂತಿನಾಯಕ್, ಶಾಲಾ ಮುಖ್ಯಸ್ಥರಾದ ಝರೀನಾ ಬಾಬುಲ್ ಹಾಜರಿದ್ದರು.
ನಗರದ ದಟ್ಟಗಳ್ಳಿಯಲ್ಲಿರುವ ಎಸ್‌ವಿಜಿ ವಿಶ್ವಪ್ರಜ್ಞ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ತಂಬಾಕು ರಹಿತ ದಿನದ ಅಂಗವಾಗಿ ತಂಬಾಕು ಉತ್ಪನ್ನಗಳ ವಿರುದ್ಧ ಜಾಗೃತಿ ಅಭಿಯಾನ ನಡೆಸಲಾಯಿತು. ಕಾಲೇಜಿನ ವ್ಯವಸ್ಥಾಪಕ ಟ್ರಸ್ಟಿ ವಿಶ್ವನಾಥ್ ಶೇಷಾಚಲ ಅವರು, ತಂಬಾಕು ಬೇಡ ಎಂದು ಸಹಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕ್ಯಾನ್ಸರ್ ತಪಾಸಣಾ ಶಿಬಿರ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಕೆ.ಆರ್.ಆಸ್ಪತ್ರೆ ದಂತ ಚಿಕಿತ್ಸಾ ವಿಭಾಗದಿಂದ ವಿಶ್ವ ತಂಬಾಕು ರಹಿತ ದಿನದ ಪ್ರಯುಕ್ತ ಕೆ.ಆರ್.ಆಸ್ಪತ್ರೆ ದಂತ ಚಿಕಿತ್ಸೆ ವಿಭಾಗದಲ್ಲಿ ಬಾಯಿ ಕ್ಯಾನ್ಸರ್‌ನ ಉಚಿತ ತಪಾಸಣೆ ಶಿಬಿರ ನಡೆಸಲಾಯಿತು.
ಅಂತೆಯೇ ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ತಂಬಾಕು ಮುಕ್ತ ದಿನಾಚರಣೆ ಪ್ರಯುಕ್ತ ಹೃದಯ ಕ್ಷಕಿರಣ (ಎಕ್ಸ್‌ರೇ) ಮತ್ತು ಪಲ್ಮನರಿ ಫಂಕ್ಷನ್ ಟೆಸ್ಟ್ ಪಿಎಫ್ಟಿ) ಜತೆಗೆ ತಜ್ಞ ವೈದ್ಯರಿಂದ ಚಿಕಿತ್ಸಾ ಸಲಹೆಗಳನ್ನು ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.