ಮೈಸೂರಿನಲ್ಲಿ ನಿಯಮಗಳು ಮತ್ತಷ್ಟು ಕಠಿಣ: ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ
Team Udayavani, Apr 16, 2020, 3:38 PM IST
ಮೈಸೂರು: ಕೋವಿಡ್-19 ಸೋಂಕು ತಡೆಗಟ್ಟಲು ಪೊಲೀಸ್ ಇಲಾಖೆ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ. ಮೈಸೂರು ಕೊವಿಡ್-19 ವೈರಸ್ ನ ಹಾಟ್ ಸ್ಪಾಟ್ ಆಗಿ ಮಾರ್ಪಾಟ್ಟಿದೆ. ಹಾಗಾಗಿ ಬೆಳಿಗ್ಗೆ 6ರಿಂದ 12ರವರೆಗೆ ಅಗತ್ಯ ವಸ್ತುಗಳನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜನರುದ್ವಿಚಕ್ರ ವಾಹನದಲ್ಲಿ ಸವಾರ ಮಾತ್ರ ಸಂಚರಿಸಬೇಕು. ಹಿಂಬದಿಯಲ್ಲಿ ಯಾರನ್ನು ಕೂರಿಸಿಕೊಂಡು ಸಾಗುವಂತಿಲ್ಲ. ನಾಲ್ಕು ಚಕ್ರದ ವಾಹನದಲ್ಲಿ ಚಾಲಕನ ಜೊತೆಗೆ ಮತ್ತೊಬ್ಬರು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
ಮಧ್ಯಾಹ್ನ ಹನ್ನೆರಡು ಗಂಟೆಯ ನಂತರ ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳುವವರು ಕಾಲ್ನಡಿಗೆಯಲ್ಲೇ ಹೋಗಬೇಕು. ಮಧ್ಯಾಹ್ನ 12ಗಂಟೆಯ ನಂತರ ಅನಗತ್ಯವಾಗಿ ವಾಹನದಲ್ಲಿ ಸಂಚರಿಸುವಂತಿಲ್ಲ. ಸಂಜೆ ಆರು ಗಂಟೆಯಿಂದ ಬೆಳಗಿನ ಜಾವ ಆರು ಗಂಟೆಯವರೆಗೆ ಯಾರು ಕೂಡ ರಸ್ತೆಗಿಳಿಯುವಂತಿಲ್ಲ ಎಂದರು.
ಮನೆಯಿಂದ ಹೊರಬರುವವರು ಮಾಸ್ಕ್ ಧರಿಸುವುದು ಕಡ್ಡಾಯ. ಗುರುತಿನ ಪತ್ರಗಳನ್ನು ತರಬೇಕು. ಪಾಸ್ ಹೊಂದಿರುವವರು ತೋರಿಸಬೇಕು. ಔಷಧಿ ಕೊಂಡುಕೊಳ್ಳಲು ಬರುವವರು ವೈದ್ಯರು ನೀಡಿರುವ ಚೀಟಿ ತೋರಿಸಬೇಕು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.