ಉಚಿತ ಬಸ್‌ಪಾಸ್‌ಗೆ ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Jul 10, 2018, 12:22 PM IST
ಮೈಸೂರು: ವಿದ್ಯಾರ್ಥಿಗಳಿಗೆ ಉಚಿತ ಬಸ ಪಾಸ್ ನೀಡದ ರಾಜ್ಯಸರ್ಕಾರದ ಕ್ರಮವನ್ನು ಖಂಡಿಸಿ ಎಐಡಿಎಸ್‌ಒ, ಎಐಎಂಎಸ್‌ಎಸ್ ಹಾಗೂ ಎಐಡಿವೈಒ ಸಂಘಟನೆಗಳ ಆಶ್ರಯದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಗರದ ಮೆಟ್ರೋಪೋಲ್ ವೃತ್ತದಿಂದ ಜೆಎಲ್‌ಬಿ ರಸ್ತೆಯಲ್ಲಿ ಮೆರವಣಿಗೆ ನಡೆಸಿ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಂಧ್ಯಾ, ಈ ಹಿಂದೆ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದಾಗ ಪ್ರತಿಭಟನೆಗೆ ಮಣಿದಿದ್ದ ಸಾರಿಗೆ ಸಚಿವರು ಉಚಿತ ಬಸ್‌ಪಾಸ್ ನೀಡುವ ಭರವಸೆ ನೀಡಿದ್ದರು.
ಆದರೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್‌ನಲ್ಲಿ ಈ ವಿಷಯ ಪ್ರಸ್ತಾಪಿಸದೆ ಮಾತು ತಪ್ಪಿದ್ದಾರೆ. ಸರ್ಕಾರದ ಈ ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ವಚನ ಭ್ರಷ್ಟ ನೀತಿಯನ್ನು ಖಂಡಿಸಿ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು,
ವಿದ್ಯಾರ್ಥಿಗಳ ಹೋರಾಟಕ್ಕೆ ರಾಜ್ಯಸರ್ಕಾರ ಮಣಿಯದಿದ್ದಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿ ಮುಖಂಡರಾದ ಸೀಮಾ, ಹರೀಶ್, ಸುಮಾ, ಬಸವರಾಜ್,ಆಶಾ, ಅವಿನಾಶ್ ಸೇರಿದಂತೆ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ
Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್ ಇರಾನಿವರೆಗೆ
Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್: 21 ವರ್ಷದ ಹಿಂದೆ ನಡೆದಿದ್ದೇನು?
Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.