ಮೈತ್ರಿ ಧರ್ಮ ಪಾಲನೆಯಲ್ಲಿ ಎಡವಟ್ಟು; ಹಿನ್ನಡೆ

Team Udayavani, May 26, 2019, 3:00 AM IST

maitri

ನಂಜನಗೂಡು: ಮೈತ್ರಿಧರ್ಮ ಪಾಲನೆ ಕ್ಷೇತ್ರದ ಕೆಲ ಕಡೆ ಆಗಿದ್ದು, ಇನ್ನು ಕೆಲವೆಡೆ ಆಗಿಲ್ಲ. ಸಂಘಟನೆಯಲ್ಲಿ ವ್ಯತ್ಯಾಸವಾಗಿದ್ದರಿಂದ ಹಿನ್ನಡೆ ಉಂಟಾಯಿತು. ಹೀಗಾಗಿ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಆರ್‌.ಧ್ರುವನಾರಾಯಣ ಹೇಳಿದರು.

ನಗರಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿಧರ್ಮ ಪಾಲನೆ ಮಾಡುವ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲೇ ತಹಬದಿಗೆ ತರಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ ಜೆಡಿಎಸ್‌ ಒಮ್ಮತದ ಅಭ್ಯರ್ಥಿ ಆಯ್ಕೆ ಗೊಂದಲವೂ ಕೆಲಕಡೆ ಉಂಟಾಯಿತು. ಮತದಾರರ ತೀರ್ಪನ್ನು ಗೌರವಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆ ಲಕ್ಷಣ.

ಹೀಗಾಗಿ ಫ‌ಲಿತಾಂಶವನ್ನು ಗೌರವಿಸುತ್ತೇನೆ ಎಂದು ಹೇಳಿದರು. ಅಭಿವೃದ್ಧಿ ಕೆಲಸ ಮಾಡುವುದು ನಮ್ಮ ಆತ್ಮತೃಪ್ತಿಗಾಗಿ ಹೊರತು ಚುನಾವಣೆಯಲ್ಲಿ ಮತ ಗಳಿಸುವ ಸಲುವಾಗಿ ಅಲ್ಲ. ಚುನಾವಣೆಗಳು ಕೆಲವು ವಿಷಯಗಳ ಮೇಲೆ ನಡೆಯುತ್ತದೆ.

ನನ್ನ ಅವಧಿಯಲ್ಲಿನ ಅಭಿವೃದ್ಧಿ ಕೆಲಸ ಹಾಗೂ ನನ್ನ ಕಾರ್ಯವೈಖರಿ ನೋಡಿ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದ್ದೆ. 5.6 ಲಕ್ಷ ಮತದಾರರು ನನಗೆ ಮತ ನೀಡಿದ್ದಾರೆ. ಹೀಗಾಗಿ ಮತದಾರರ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಕಳೆದ ಬಾರಿ ವರುಣ ಕ್ಷೇತ್ರದಲ್ಲಿ 37 ಸಾವಿರ ಮತಗಳ ಮುನ್ನಡೆ ಬಂದಿತ್ತು. ಈ ಬಾರಿ 9 ಸಾವಿರಕ್ಕೆ ಇಳಿದಿದೆ. ಉಳಿದ ಕ್ಷೇತ್ರಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುನ್ನಡೆ ಬಂದಿಲ್ಲ. ಸೋಲಿನಿಂದ ಧೃತಿಗೆಟ್ಟಿಲ್ಲ. ಫ‌ಲಿತಾಂಶ ಮರುದಿನವೇ ನಗರಸಭೆ ಚುನಾವಣೆ ಸಂಬಂಧ ಅಭ್ಯರ್ಥಿಗಳ ಸಭೆ ನಡೆಸಿ ಚರ್ಚಿಸಿದ್ದೇನೆ.

ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ. ನನಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ಇರಾದೆಯಿಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲೆ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದನಾಗುವುದಷ್ಟೆ ನನ್ನ ಗುರಿ ಎಂದು ಸ್ಪಷ್ಟಪಡಿಸಿದರು.

ಮಾಜಿ ಶಾಸಕ ಕಳಲೆ ಎನ್‌.ಕೇಶವಮೂರ್ತಿ, ಕೆಪಿಸಿಸಿ ಕಾರ್ಯದರ್ಶಿ ಎಸ್‌.ಸಿ.ಬಸವರಾಜು, ತಾಪಂ ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶ್‌ ರಾಜ್‌, ಕೆಪಿಸಿಸಿ ಸದಸ್ಯ ಅಕºರ್‌ ಅಲಿ, ಬ್ಲಾಕ್‌ ಅಧ್ಯಕ್ಷ ಪಿ.ಶ್ರೀನಿವಾಸ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.