ಜೆಡಿಎಸ್‌ನ ಮರಿತಿಬ್ಬೇಗೌಡ ನಾಮಪತ್ರ ಸಲ್ಲಿಕೆ
Team Udayavani, May 18, 2018, 12:58 PM IST
ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಗುರುವಾರ ನಾಮಪತ್ರ ಸಲ್ಲಿಸಿದರು.
ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ವಿಧಾನಪರಿಷತ್ ಉಪಸಭಾಪತಿಯೂ ಆಗಿರುವ ಮರಿತಿಬ್ಬೇಗೌಡ, ಶಿಕ್ಷಕರ ಕ್ಷೇತ್ರದಿಂದ ಮರು ಆಯ್ಕೆಬಯಸಿ ಮೈಸೂರು ಪ್ರಾದೇಶಿಕ ಆಯುಕ್ತರಾದ ಪಿ.ಹೇಮಲತಾ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮರಿತಿಬ್ಬೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಆಯ್ಕೆ ಬಯಸಿ, ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ. ಕಳೆದ ಮೂರು ಬಾರಿ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗಿದ್ದ ತಾವು, ಇದೀಗ 4ನೇ ಬಾರಿಗೆ ಸ್ಪರ್ಧಿಸುತ್ತಿದ್ದೇನೆ.
ತಮಗೆ ಜೆಡಿಎಸ್ ವರಿಷ್ಠರ ಕೃಪಕಟಾಕ್ಷವಿದ್ದು, ಎಲ್ಲಾ ಶಿಕ್ಷಕರ ಸಮಸ್ಯೆಗೆ ನಾನು ಸ್ಪಂದಿಸಿದ್ದೇನೆ. ಹೀಗಾಗಿ ಶಿಕ್ಷಕರು ಹಾಗೂ ತಮ್ಮ ನಡುವೆ ಅವಿನಾಭಾವ ಸಂಬಂಧವಿದ್ದು, ಈ ಬಾರಿಯೂ ಶಿಕ್ಷಕರು ನನ್ನನ್ನು ಗೆಲ್ಲಿಸುವ ವಿಶ್ವಾಸವಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆ ಈ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.