ತಂಬಾಕು ದರ ದಿಢೀರ್ ಕುಸಿತ: ಪ್ರತಿಭಟನೆ,ಲಾಠಿ ಚಾರ್ಜ್

ರೈತರ ಹೋರಾಟಕ್ಕೆ ಮಾಜಿ ಶಾಸಕ ಕೆ.ವೆಂಕಟೇಶ್ ಬೆಂಬಲ

Team Udayavani, Oct 19, 2022, 8:58 PM IST

1-adsa-dad

ಪಿರಿಯಾಪಟ್ಟಣ:ತಾಲೂಕಿನ ಕಗ್ಗುಂಡಿ ಹರಾಜು ಮಾರುಕಟ್ಟೆಯಲ್ಲಿ ಬುಧವಾರ ತಂಬಾಕು ಹರಾಜು ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಉತ್ತಮ ದರ್ಜೆಯ (ಗ್ರೇಡ್ ಒನ್) ತಂಬಾಕಿಗೆ 251 ರಿಂದ 147 ಕ್ಕೆ ದರ ದಿಢೀರ್ ಕುಸಿತ ಕಂಡ ಹಿನ್ನಲೆಯಲ್ಲಿ ಆಕ್ರೋಶಗೊಂಡ ರೈತರು ಹರಾಜು ಪ್ರಕ್ರಿಯೆ ಸ್ಥಗಿತ ಗೊಳಿಸಿ ಪಿರಿಯಾಪಟ್ಟಣ- ಹಾಸನ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಅಕ್ಟೋಬರ್ ತಿಂಗಳ 10 ರಂದು ಹರಾಜು ಪ್ರಕ್ರಿಯೆ ಆರಂಭಗೊಂಡು ಸರಾಸರಿ ರೂ.200 ರಿಂದ 251 ರ ವರೆಗೂ ಹರಾಜು ಪ್ರಕ್ರಿಯೆ ಮಂಗಳವಾರದ ವರೆಗೂ ಗರಿಷ್ಠ 251 ರ ವರೆಗೂ ಮಾರಾಟವಾಗುತ್ತಿತ್ತು. ಆದರೆ ಬುಧವಾರ ಮಧ್ಯಮ ದರ್ಜೆ ತಂಬಾಕಿಗೆ (ಮಧ್ಯಮ ದರ್ಜೆ) 251ರಿಂದ 147 ಕ್ಕೆ ಕುಸಿತಗೊಂಡು ಪ್ರತಿ ಕೆ.ಜಿ.ತಂಬಾಕಿಗೆ ಸರಿಸುಮಾರು 100 ಕಡಿಮೆಯಾಗಿರುವುದಕ್ಕೆ ರೈತರು ಆಕ್ರೋಶ ಭರಿತರಾಗಿ ಮೂರು ಪ್ಲಾಟ್ ಫಾಂ ಗಳ ಹರಾಜು ಪ್ರಕ್ರಿಯೆ ನಿಲ್ಲಿಸಿ ಮಾರುಕಟ್ಟೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಆಕ್ರೋಶಗೊಂಡ ರೈತರನ್ನು ಸಮಾಧಾನಪಡಿಸಲು ಯತ್ನಿಸಿದ ತಂಬಾಕು ಹರಾಜು ಅಧೀಕ್ಷಕರ ಮಾತಿಗೂ ಕ್ಯಾರೆ ಎನ್ನದ ರೈತರು ಪಿರಿಯಾಪಟ್ಟಣ-ಹಾಸನ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಮುಂದಾದರು. ಪ್ರತಿಭಟನಾ ನಿರತ ರೈತರು ಮಾತನಾಡಿ ಅಧಿಕಾರಿಗಳು ಯಾವುದೇ ಸಬೂಬು ಹೇಳದೆ ಹಿಂದಿನ ದಿನದ ದರವನ್ನು ನೀಡಿ, ಇಲ್ಲದಿದ್ದರೆ ಹರಾಜು ಪ್ರಕ್ರಿಯೆಯನ್ನು ನಿಲ್ಲಿಸಿ ಎಂದು ರೈತರು ಆಗ್ರಹಿಸಿದರು.

ಮಾಜಿ ಶಾಸಕರ ಬೆಂಬಲ
ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಸ್ಥಳಕ್ಕೆ ಮಾಜಿ ಶಾಸಕ ಕೆ.ವೆಂಕಟೇಶ್ ಹಾಗೂ ಮಂಡಳಿಯ ಉಪಾಧ್ಯಕ್ಷ ಎಚ್. ಸಿ.ಬಸವರಾಜ್ ಆಗಮಿಸಿ ರೈತರನ್ನು ಸಮಾಧಾನಪಡಿಸಲು ಮುಂದಾದರು.

ಈ ವೇಳೆ ಮಾಜಿ ಶಾಸಕ ಕೆ.ವೆಂಕಟೇಶ್ ಮಾತನಾಡಿ ಅತಿವೃಷ್ಟಿಯಿಂದ ತಂಬಾಕು ಉತ್ಪಾದನೆ ಕಡಿಮೆಯಾಗಿದ್ದು ರೈತರಿಗೆ ಉತ್ಪಾದನಾ ವೆಚ್ಚವೂ ಹೆಚ್ಚಾಗಿದೆ ರೈತರನ್ನು ಉಳಿಸುವ ನಿಟ್ಟಿನಲ್ಲಿ ತಂಬಾಕು ಮಂಡಳಿಯ ರೈತರಿಗೆ ಸಹಕರಿಸಬೇಕು. ಸರಿಯಾದ ಬೆಲೆ ಕೊಡದೆ ಇರುವ ಕಾರಣಕ್ಕೆ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ ಇದಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ ಇಂದಿನ ದಿನಗಳಲ್ಲಿ ಈ ಹಿಂದೆ ನೀಡುತ್ತಿದ್ದ ಬೆಲೆಯನ್ನು ನೀಡಬೇಕು ಏಕಾಏಕಿ ಬೆಲೆ ಕಡಿಮೆ ಮಾಡಿರುವುದು ಸರಿಯಲ್ಲ ಮಾರುಕಟ್ಟೆ ಆರಂಭವಾದ ಕೆಲವೇ ದಿನಗಳಲ್ಲಿ ಏಕಾಏಕಿ ತಂಬಾಕು ಬೆಲೆಯನ್ನು 80 ರಿಂದ 90 ರೂ ಗಳನ್ನು ಕಡಿಮೆ ಮಾಡಿ, ತಂಬಾಕು ಕೈಗೊಳ್ಳಲು ಮುಂದಾಗಿರುವ ಕಂಪನಿಗಳ ಧೋರಣೆ ಸರಿ ಇಲ್ಲ. ಇದರಿಂದ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಕೂಡಲೇ ಮಂಡಳಿ ಮತ್ತು ಖರೀದಿದಾರ ಕಂಪನಿಗಳು ರೈತರಿಗೆ ಸರಾಸರಿ ಬೆಲೆ ನಿಗದಿ ಪಡಿಸಬೇಕು ಎಂದರು.

ಪ್ರಾದೇಶಿಕ ವ್ಯವಸ್ಥಾಪಕ ಲಕ್ಷ್ಮಣ್ ರಾವ್ ಮಾತನಾಡಿ ಮಂಡಳಿಯು ಇಂದಿಗೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ರೈತರ ಸಂಕಷ್ಟವನ್ನು ಅರ್ಥಮಾಡಿಕೊಂಡು ಉತ್ತಮ ದರ ದೊರಕಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಇಂದು ಕಂಪನಿಗಳ ಜೊತೆ ಮೈಸೂರಿನ ಕಚೇರಿಯಲ್ಲಿ ಸಭೆ ನಡೆಸಿ ಎಲ್ಲರಿಗೂ ಪರಿಸ್ಥಿತಿ ಅರ್ಥ ಮಾಡಿಸಿ ಇಂದಿನ ದಿನದ ದರವನ್ನು ನೀಡುವಂತೆ ಮನವೊಲಿಸುವುದಾಗಿ ತಿಳಿಸಿದರು ಹಾಗೂ ನಾಳೆ ಎಂದಿನಂತೆ ಮಾರುಕಟ್ಟೆ ನಡೆಯಲಿದೆ ಎಂದು ರೈತರಿಗೆ ಮಾಹಿತಿ ನೀಡಿದರು.

ವಿಷಯ ತಿಳಿದ ಪೊಲೀಸ್ ಇಲಾಖೆಯು ಸೂಕ್ತ ಬಂದೋಬಸ್ತ್ ಒದಗಿಸಿ ರಸ್ತೆ ತಡೆ ನಡೆಸಿದ ರೈತರನ್ನು ಮನವೊಲಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿದರು.

ಈ ಸಂದರ್ಭದಲ್ಲಿ ತಂಬಾಕು ಮಂಡಳಿಯ ಉಪಾಧ್ಯಕ್ಷ ಎಚ್ ಸಿ ಬಸವರಾಜ್, ತಂಬಾಕು ಹರಾಜು ಅಧೀಕ್ಷಕರಾದ ಪ್ರಭಾಕರನ್, ಶಂಭುಲಿಂಗೇಗೌಡ, ರಾಮಮೋಹನ್ ಸೂರಿ, ರೈತ ಮುಖಂಡರಾದ ರಹಮತ್ ಜಾನ್ ಬಾಬು, ಹೆಮ್ಮಿಗೆ ಮಹೇಶ್, ಶ್ರೀನಿವಾಸ್ ಆರ್ ತುಂಗಾ, ಹರೀಶ್, ಪ್ರತಾಪ’ ನಂದೀಶ ,ರಾಮೇಗೌಡ, ಸೋಮಣ್ಣ, ಕಾಳನಾಯ್ಕ , ಮಹಮದ್, ಯೋಗಣ್ಣ ಸೇರಿದಂತೆ ಸಾವಿರಾರು ರೈತರು ಹಾಜರಿದ್ದರು.

ಟಾಪ್ ನ್ಯೂಸ್

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.