ತ್ರಿಪುರ ಭೈರವಿ ಮಠದ ಪ್ರಸಾದಕ್ಕೆ ಕಣ್ಗಾವಲು
Team Udayavani, Dec 22, 2018, 11:25 AM IST
ಮೈಸೂರು: ಸುಳವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ಪ್ರಸಾದ ಸೇವನೆಯಿಂದ ಸಂಭವಿಸಿದ ಅವಘಡದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ನಗರದ ಐತಿಹಾಸಿಕ ಶ್ರೀ ತ್ರಿಪುರ ಭೈರವಿ ಮಠದಲ್ಲಿ ಅನ್ನಸಂತರ್ಪಣೆ ಹಾಗೂ ಅಡುಗೆ ತಯಾರಿಸುವ ಸ್ಥಳದಲ್ಲಿ ಸಿಸಿಟಿವಿ ಅಳವಡಿಸಲಾಗಿದೆ.
ಹನುಮ ಜಯಂತಿ ಪ್ರಯುಕ್ತ ಪ್ರತಿವರ್ಷ ತ್ರಿಪುರ ಭೈರವಿ ಮಠದಲ್ಲಿ ಅನ್ನಸಂತರ್ಪಣೆ ನಡೆಸಲಾಗುತ್ತದೆ. ಈ ವೇಳೆ ಯಾವುದೇ ದುರ್ಘಟನೆ ನಡೆಯದಂತೆ ಎಚ್ಚರವಹಿಸಿರುವ ದೇವಸ್ಥಾನದ ಆಡಳಿತ ಮಂಡಳಿ, ಭೈರವಿ ಮಠ, ಅಡುಗೆ ಮಾಡುವ ಸ್ಥಳ ಹಾಗೂ ಭಕ್ತಾಧಿಗಳು ಊಟಕ್ಕೆ ಕೂರುವ ಸ್ಥಳದಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಮುಂಜಾಗ್ರತೆವಹಿಸಲಾಗಿದೆ.
ಅಲ್ಲದೇ ಅಡುಗೆ ಮಾಡುವ ಸ್ಥಳಕ್ಕೆ ಕೇವಲ ಅಡುಗೆ ಭಟ್ಟರು ಹಾಗೂ ಪರಿಚಿತ ವ್ಯಕ್ತಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಸಿಸಿ ಕ್ಯಾಮರಾದಲ್ಲಿ ದಾಖಲಾಗುವ ದೃಶ್ಯಾವಳಿಯನ್ನು ಮಠದ ಸ್ವಾಮೀಜಿ ಅವರೇ ಖುದ್ದಾಗಿ ಪರಿಶೀಲಿಸಲಿದ್ದಾರೆ. ದೇವಸ್ಥಾನದಲ್ಲಿ ನಡೆದ ಅನ್ನಸಂತರ್ಪಣೆಯಲ್ಲಿ ನೂರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು, ಭಕ್ತರಿಗೆ ಬಾತ್, ಅನ್ನಸಾಂಬಾರ್, ಪಲ್ಯ, ಮೈಸೂರು ಪಾಕ್, ಉಪ್ಪಿನಕಾಯಿ, ಹಪ್ಪಳ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.