ಫೆ.1ರಿಂದ ಸುತ್ತೂರು ಜಾತ್ರಾ ಮಹೋತ್ಸವ


Team Udayavani, Jan 30, 2019, 7:30 AM IST

m1-feb1.jpg

ಮೈಸೂರು: ಮೈಸೂರು ಜಿಲ್ಲೆಯ ಸುತ್ತೂರು ಶ್ರೀಕ್ಷೇತ್ರದಲ್ಲಿ ಫೆ.1ರಿಂದ 6ರವರೆಗೆ ಆದಿಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ನಡೆಯಲಿದೆ. ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ 6 ದಿನಗಳ ಕಾಲ ನಡೆಯುವ ಈ ಜಾತ್ರಾ ಮಹೋತ್ಸವದಲ್ಲಿ ಫೆ.3ರಂದು ರಥೋತ್ಸವ, ಫೆ. 5 ರಂದು ತೆಪ್ಪೋತ್ಸವ ಹಾಗೂ ಕೊಂಡೋತ್ಸವ,

ಹಾಲ್ಹರವಿ ಉತ್ಸವ, ಲಕ್ಷ ದೀಪೋತ್ಸವ ಮುಂತಾದ ಧಾರ್ಮಿಕ ಕಾನ್ಯಕ್ರಮಗಳ ಜೊತೆಗೆ ವೈವಿಧ್ಯಮಯ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳು ಜರುಗಲಿವೆ ಎಂದು ಜೆಎಸ್‌ಎಸ್‌ ಮಹಾ ವಿದ್ಯಾಪೀಠದ ಕಾರ್ಯ ದರ್ಶಿ ಎಸ್‌.ಪಿ.ಮಂಜುನಾಥ್‌ ತಿಳಿಸಿದರು.

ಮಂಗಳವಾರ ಸುತ್ತೂರು ಶ್ರೀಕ್ಷೇತ್ರದಲ್ಲಿ ಸುದ್ದಿ ಗೋಷ್ಠಿ ನಡೆಸಿ ಜಾತ್ರಾ ಮಹೋತ್ಸವದ ಸಿದ್ಧತೆಗಳನ್ನು ವಿವರಿಸಿದ ಅವರು, ಈ ವರ್ಷ 27ನೇ ರಾಜ್ಯಮಟ್ಟದ ಭಜನಾ ಸ್ಪರ್ಧೆ ನಡೆಯಲಿದ್ದು, ಎಲ್ಲಾ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದಲೂ ಪುರುಷ, ಮಹಿಳಾ, ಮಕ್ಕಳ ಭಜನಾ ತಂಡಗಳು ಮತ್ತು ಏಕನಾದ ಸೇರಿದಂತೆ ಸುಮಾರು 800ಕ್ಕೂ ಹೆಚ್ಚು ತಂಡಗಳು ಭಾಗವಹಿಸುವ ನಿರೀಕ್ಷೆ ಇದ್ದು, ಈವರೆಗೆ 755 ಭಜನಾ ತಂಡಗಳು ನೋಂದಾಯಿಸಿಕೊಂಡಿವೆ. ಒಟ್ಟು ಏಳು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಪ್ರತಿ ವಿಭಾಗಕ್ಕೂ ಪ್ರತ್ಯೇಕ ಬಹುಮಾನಗಳನ್ನು ನೀಡಲಾಗುವುದು ಎಂದರು.

ವಸ್ತುಪ್ರದರ್ಶನ: ವಸ್ತುಪ್ರದರ್ಶನದಲ್ಲಿ ಕರಕುಶಲ, ಕೈಮಗ್ಗ, ಗ್ರಹೋಪಯೋಗಿ ಪದಾರ್ಥಗಳ ಪ್ರದರ್ಶನ ಹಾಗೂ ಮಾರಾಟದ ವ್ಯವಸ್ಥೆ ಇತ್ತುದೆ. ಜೆಎಸ್‌ಎಸ್‌ ಪ್ರೌಢಶಾಲೆಗಳ ವಿದ್ಯಾರ್ಥಿಗಳು ತಯಾರಿಸಿರುವ 200ಕ್ಕೂ ಹೆಚ್ಚು ಶಿಕ್ಷಣ ಮತ್ತು ವಿಜ್ಞಾನಕ್ಕೆ ಸಂಬಂಧಿಸಿದ ಪ್ರಾತ್ಯಕ್ಷಿಕೆಗಳು, ವೈದ್ಯಕೀಯ ಹಾಗೂ ತಾಂತ್ರಿಕ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ.

ಚಿತ್ರ ಸ್ಪರ್ಧೆ: ಫೆ.3ರಂದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗಾಗಿ ಸ್ಥಳದಲ್ಲೇ ಚಿತ್ರ ಬರೆ ಯುವ ರಾಜ್ಯಮಟ್ಟದ ಸ್ಪರ್ಧೆಯನ್ನು ಏರ್ಪಡಿಸ ಲಾಗಿದೆ. ಇದೇ ಮೊದಲ ಬಾರಿಗೆ ರಾಜ್ಯ ಸೇರಿದಂತೆ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದ ಕಲಾವಿದರುಗಳ ಕಲಾ ಕೃತಿಗಳ ಪ್ರದರ್ಶನ ಮತ್ತು ಮಾರಾಟ ಮಾಡುವ ಚಿತ್ರಸಂತೆ ಆಯೋಜಿಸಲಾಗಿದೆ.

ಗ್ರಾಮೀಣ ಕ್ರೀಡೆ: ಫೆ.1ರಂದು ಗ್ರಾಮೀಣ ಕಲೆ ಗಳಾದ ಸೋಬಾನೆ ಪದ ಹಾಗೂ ರಂಗೋಲಿ ಸ್ಪರ್ಧೆ ಗಳನ್ನು, ಫೆ.3ರಂದು ಮಕ್ಕಳಿಗಾಗಿ ಗಾಳಿಪಟ ಸ್ಪರ್ಧೆ ಯನ್ನು ಏರ್ಪಡಿಸಲಾಗಿದೆ. ಫೆ.5ರಂದು 39ನೇ ರಾಷ್ಟ್ರ ಮಟ್ಟದ ನಾಡ ಕುಸ್ತಿ ಪಂದ್ಯಾವಳಿ ನಡೆಯಲಿದೆ. ಈ ಬಾರಿ ಎಡರು ಮಾರ್ಪಿಟ್ ಕುಸ್ತಿಗಳು ನಡೆಯಲಿದ್ದು, ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಗೆ ಸುತ್ತೂರು ಕೇಸರಿ ಪ್ರಶಸ್ತಿ ಹಾಗೂ ಸ್ಥಳೀಯ ಉತ್ತಮ ಕುಸ್ತಿ ಸ್ಪರ್ಧೆಗೆ ಸುತ್ತೂರು ಕುಮಾರ ಪ್ರಶಸ್ತಿ ನೀಡಲಾಗುವುದು ಎಂದರು.

ದೇಸಿ ಆಟ: ಜೆಎಸ್‌ಎಸ್‌ ಸಂಸ್ಥೆಯ ವಿದ್ಯಾರ್ಥಿಗಳಿ ಗಾಗಿ ವಿವಿಧ ದೇಸಿ ಆಟಗಳ ಸ್ಪರ್ಧೆಗಳು ನಡೆಯಲಿವೆ. ಫೆ.3ರಂದು ಗ್ರಾಮೀಣ ಭಾಗದ ಪುರುಷರಿಗೆ ಮತ್ತು 4ರಂದು ಮಹಿಳೆಯರಿಗೆ ಕೆಸರು ಗದ್ದೆ ಓಟ, ಹಗ್ಗ ಜಗ್ಗಾಟ, ಅಳಿಗುಳಿ ಮಣೆ, ಅಣ್ಣೆಕಲ್ಲು ಮುಂತಾದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ದನಗಳ ಜಾತ್ರೆ: ಜಾತ್ರಾ ಮಹೋತ್ಸವದ ಅಂಗವಾಗಿ 51ನೇ ವರ್ಷ ದನಗಳ ಜಾತ್ರೆ ನಡೆಯಲಿದ್ದು, ಉತ್ತಮ ರಾಸುಗಳಿಗೆ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸ ಲಾಗುವುದು. ಜೆಎಸ್‌ಎಸ್‌ ಅಂತರಸಂಸ್ಥೆಗಳ ಸಾಂಸ್ಕೃತಿಕ ಮೇಳದಲ್ಲಿ ಭರತನಾಟ್ಯ, ಸಾಮೂಹಿಕ ನೃತ್ಯ, ವಚನಾಧಾರಿತ ನೃತ್ಯ, ಸಾಮೂಹಿಕ ಗಾಯನ ಸ್ಪರ್ಧೆಗಳಲ್ಲಿ ಸುಮಾರು 3500ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಭಾಗವಹಿಸುತ್ತಿದ್ದು, 450ಕ್ಕೂ ಹೆಚ್ಚು ಕಾರ್ಯ ಕ್ರಮಗಳನ್ನು ನಡೆಸಿಕೊಡುತ್ತಾರೆ. ಪ್ರತಿ ದಿನ ಸಂಜೆ 7 ರಿಂದ 9 ಗಂಟೆವರೆಗೆ ವಿಶೇಷ ಸಾಂಸ್ಕೃತಿಕ ಕಾರ್ಯ ಕ್ರಮಗಳನ್ನು ಸಹ ವಿದ್ಯಾರ್ಥಿಗಳು ನಡೆಸಿ ಕೊಡಲಿದ್ದಾರೆ.

ಪ್ರಸಾದ ವ್ಯವಸ್ಥೆ: ಗ್ರಾಮೀಣ ಹಾಗೂ ನಗರಪ್ರದೇಶ ಗಳ ವೃತ್ತಿಪರ ಹಾಗೂ ಹವ್ಯಾಸಿ ಕಲಾವಿದರಿಂದ 15ಕ್ಕೂ ಹೆಚ್ಚು ನಾಟಕಗಳು ಪ್ರದರ್ಶನಗೊಳ್ಳಲಿವೆ. ಜೊತೆಗೆ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ರಾಜ್ಯಗಳ ಕಲಾ ತಂಡಗಳಿಂದ ವರ್ಣರಂಜಿತ ಕಲಾ ಪ್ರದರ್ಶನ ಗಳು ನಡೆಯುತ್ತವೆ. ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವ ಲಕ್ಷಾಂತರ ಭಕ್ತಾದಿಗಳಿಗೆ ಪ್ರತಿ ನಿತ್ಯವೂ ಪ್ರಸಾದದ ವ್ಯವಸ್ಥೆ ಇದೆ. ವಾಸ್ತವ್ಯಕ್ಕೆ ಅವಕಾಶವಿರುವ ಎಲ್ಲ ಕಾಯಂ ಅತಿಥಿಗೃಹಗಳ ಜೊತೆಗೆ ಸಾವಿರಾರು ಮಂದಿಗೆ ತಾತ್ಕಾಲಿಕ ಕುಟೀರ ವ್ಯವಸ್ಥೆಯನ್ನೂ ಮಾಡ ಲಾಗಿದೆ ಎಂದು ಅವರು ತಿಳಿಸಿದರು.

ಕೃಷಿ ಮೇಳದಲ್ಲಿ ಇಥಿಯೋಪಿಯಾದ ವಿಶೇಷ ಆಹಾರ: ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಕೃಷಿ ಹಾಗೂ ಕೃಷಿ ಸಂಬಂಧಿ ತಾಂತ್ರಿಕತೆಯ ಬಗ್ಗೆ ರೈತರಿಗೆ ಮಾಹಿತಿ ನೀಡಲು ಆಯೋಜಿಸಿರುವ ಕೃಷಿಮೇಳದಲ್ಲಿ ಈ ವರ್ಷ ಸಾಂಪ್ರದಾಯಿಕ ಹಾಗೂ ಆಧುನಿಕ ಕೃಷಿ ಪದ್ಧತಿಗಳ ಕುರಿತಂತೆ ರೈತರಿಗೆ ಮಾಹಿತಿ ನೀಡಲು ವ್ಯವಸ್ಥೆ ಮಾಡ ಲಾಗಿದೆ.

ಈ ಕೃಷಿಮೇಳದಲ್ಲಿ ಇಥಿಯೋಪಿಯಾದಲ್ಲಿ ಬೆಳೆಯಲಾಗುವ ಟೆಫ್ ಸೂಪರ್‌ ಫ‌ುಡ್‌ (ವಿಶೇಷ ಆಹಾರ) ಬೆಳೆಯನ್ನು ಬೆಳೆದು ಪ್ರದರ್ಶಿಸಲಾಗುತ್ತಿದೆ. ಸಿರಿಧಾನ್ಯಗಳು, ಒಣ ಬೇಸಾಯದಲ್ಲಿ ಬೆಳೆಯುವ ದ್ವಿದಳ ಧಾನ್ಯಗಳ ಪ್ರಾತ್ಯಕ್ಷಿಕೆ, ತಾಂತ್ರಿಕ ಮಾಹಿತಿ ಹಾಗೂ ಮಾರಾ ಟದ ವ್ಯವಸ್ಥೆಗೆ ವಿಶೇಷ ಗಮನ ನೀಡಲಾಗಿದೆ ಎಂದು ಜೆಎಸ್‌ಎಸ್‌ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಅರುಣ್‌ ಬಳಮಟ್ಟಿ ತಿಳಿಸಿದರು.

ಕಡಿಮೆ ನೀರು ಹಾಗೂ ಕಡಿಮೆ ವೆಚ್ಚ, ಕಡಿಮೆ ಅವಧಿ ಹಾಗೂ ಕನಿಷ್ಠ ನಿರ್ವಹಣೆಯಲ್ಲಿ ಹುಲುಸಾಗಿ ಬೆಳೆದು ಉತ್ತಮ ಆರೋಗ್ಯ ನೀಡುವ ಸಿರಿಧಾನ್ಯಗಳಾದ ಸಾಮೆ, ನವಣೆ, ಸಜ್ಜೆ, ಬರಗು, ಹಾರಕ, ಊದಲು ಬೆಳೆಗಳ ಪ್ರಾತ್ಯಕ್ಷಿಕೆ, ಸತ್ವ ವರ್ಧನೆ, ಸಂಸ್ಕರಣೆ ಹಾಗೂ ಮಾರಾಟ ನಡೆಯಲಿದೆ. ವಿವಿಧ ದೇಸಿ ತಳಿ-ಬೆಳೆಗಳ ಪ್ರಾತ್ಯಕ್ಷಿಕೆ, ಒಂದು ಎಕರೆಯಲ್ಲಿ 90 ಬೆಳೆಗಳ ಕೃಷಿ ಬ್ರಹ್ಮಾಂಡ ಮತ್ತು ಕೃಷಿ ವಸ್ತು ಪ್ರದರ್ಶನ ಈ ಕೃಷಿ ಮೇಳದ ಆಕರ್ಷಣೆಯಾಗಿದೆ.

ಟಾಪ್ ನ್ಯೂಸ್

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.