ಸಿಂಡಿಕೇಟ್ ಬ್ಯಾಂಕ್ ಶಾಖೆ, ಎಟಿಎಂ ಹೆಚ್ಚಳಕ್ಕೆ ಕ್ರಮ
Team Udayavani, Jan 1, 2019, 5:43 AM IST
ಮೈಸೂರು: ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಮುಂದಿನ ಒಂದು ವರ್ಷದಲ್ಲಿ ಬ್ಯಾಂಕ್ ಶಾಖೆಗಳ ಹೆಚ್ಚಳ ಹಾಗೂ ಹೆಚ್ಚು ಎಟಿಎಂಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಸಿಂಡಿಕೇಟ್ ಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಕೃಷ್ಣನ್ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಬ್ಯಾಂಕ್ನ ಪ್ರಾದೇಶಿಕ ಮುಖ್ಯಸ್ಥರು ಹಾಗೂ ಪ್ರಧಾನ ವ್ಯವಸ್ಥಾಪಕರುಗಳ ಸಭೆ ನಡೆಸಲಾಗುತ್ತಿದೆ. ಪ್ರಸಕ್ತ ಹಣಕಾಸು ವರ್ಷದ 2ನೇ ತ್ತೈಮಾಸಿಕದಲ್ಲಿ ಸಾಲ ನೀಡಿಕೆಗೆ ಆದ್ಯತೆ ಕೊಟ್ಟಿದ್ದು ಹಾಗೂ ಸಂಬಳ ಪರಿಷ್ಕರಣೆಗೆ ಮುಂದಾಗಿದ್ದರಿಂದ ಬ್ಯಾಂಕ್ 1524 ಕೋಟಿ ರೂ. ನಷ್ಟ ಅನುಭವಿಸಿದೆ.
ಮುಂದಿನ 6 ತಿಂಗಳಲ್ಲಿ ಬ್ಯಾಂಕ್ನ ವಹಿವಾಟು 5ಲಕ್ಷ ಕೋಟಿ ತಲುಪಲಿದೆ ಎಂದು ಅವರು ಹೇಳಿದರು. ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ ಕೆ.ಮಂಜುನಾಥ್ ಮಾತನಾಡಿ, ಮೈಸೂರು-ಮಂಡ್ಯ-ಕೊಡಗು ಈ ಮೂರು ಜಿಲ್ಲೆಗಳಲ್ಲಿ ಸಿಂಡಿಕೇಟ್ ಬ್ಯಾಂಕ್ನ 72 ಶಾಖೆಗಳಿದ್ದು,
ಹಾಸನದಲ್ಲಿ ಹೊಸದಾಗಿ ಪ್ರಾದೇಶಿಕ ಕೇಂದ್ರ ಆರಂಭಿಸಲಾಗಿದೆ. ಸರ್ಕಾರದ ಎಲ್ಲಾ ಯೋಜನೆಗಳಿಗೂ ಸಾಲ ನೀಡಲಾಗುತ್ತಿದೆ. ಸರ್ಕಾರಿ ಸಾಲ ಸೌಲಭ್ಯದ ಯಾವುದೇ ಅರ್ಜಿಯನ್ನೂ ತಿರಸ್ಕರಿಸದಂತೆ ಸ್ಥಳೀಯ ಬ್ಯಾಂಕ್ ವ್ಯವಸ್ಥಾಕರುಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.