ಸಮಸ್ಯೆ ಇದ್ದಲಿ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ 


Team Udayavani, Jun 30, 2017, 12:46 PM IST

mys2.jpg

ನಂಜನಗೂಡು: ಪರಸ್ಪರ ಘರ್ಷಣೆಗೆ ಒಳಗಾಗಿ ಒಬ್ಬರ ವಿರುದ್ಧ ಮತ್ತೂಬ್ಬರ ದೂರಿಗೆ ಕಾರಣವಾದ ತಾಲೂಕಿನ ನವಿಲೂರಿಗೆ ಸಂಸದ ಆರ್‌.ಧ್ರುವನಾರಾಯಣ ಹಾಗೂ ಶಾಸಕ ಕಳಲೆ ಕೇಶವ ಮೂರ್ತಿ ಭೇಟಿ ನೀಡಿ  ಸಭೆ ನಡೆಸಿ ಶಾಂತಿ ಸೌಹಾರ್ಧತೆ ಕುರಿತಂತೆ ಗ್ರಾಮಸ್ಥರಿಗೆ ತಿಳಿವಳಿಕೆ ಹೇಳಿದರು.

ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ಸಭೆಯಲ್ಲಿ ಸಂಸದ ಆರ್‌.ಧ್ರುವನಾರಾಯಣ ಮಾತನಾಡಿ, ವೈಯಕ್ತಿಕವಾಗಿ ಮಾಡಿರುವ ತಪ್ಪಿನ ಕಿಡಿ ಗ್ರಾಮವನ್ನು ವ್ಯಾಪಿಸುವುದು ಸರಿಯಲ್ಲ. ಇಂಥಹ ಘಟನೆಯಿಂದಾಗಿ ಇಬ್ಬರ ಜಗಳಕ್ಕೆ ಗ್ರಾಮದ ಗೌರವವೇ ಮಣ್ಣು ಪಾಲಾಗುವುದು ಆದ್ದರಿಂದ ಏನಾದರೂ ಸಮಸ್ಯೆ ಇದ್ದಲಿ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎಂದರು.

ತನಿಖೆ ಪ್ರಾರಂಭ: ಕಾನೂನು ಮೀರಿ ನಡೆಯುವವರ ವಿರುದ್ಧ ತನಿಖೆ ಮಾಡಿ ಕ್ರಮ ಕೈಗೊಳ್ಳಲು ಪೊಲೀಸರಿದ್ದಾರೆ ನೀವೆ ಕಾನೂನನ್ನು ಕೈ ತೆಗೆದುಕೊಳ್ಳಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಘಟನೆಯ ಕುರಿತಂತೆ ತನಿಖೆ ಪ್ರಾರಂಭವಾಗಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ, ಅಲ್ಲಿಯವರಿಗೆ ಗ್ರಾಮಸ್ಥರು ಶಾಂತಿ ಭಂಗವಾಗದಂತೆ ಎಚ್ಚರ ವಹಿಸಿ ಎಂದರು.

ಧೃತಿಗೆಡುವ ಅಗತ್ಯವಿಲ್ಲ: ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ಘಟನೆ ನಡೆದ ಮರುದಿನವೇ ನಾನು ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದೆ. ಜಾತಿಯ ವಿಷಬೀಜ ಬಿತ್ತುವ ಕೆಲಸವಾಗಿಲ್ಲ. ಆಕಸ್ಮಿಕವಾಗಿ ನಡೆದ ವಿಷಯವೇ ಗಲಾಟೆಯ ರೂಪ ತಾಳಿದೆ ಘಟನೆ ಕುರಿತು ಪೊಲೀಸ್‌ ಠಾಣೆಯಲ್ಲಿ ಎರಡು ಕೋಮಿನಿಂದ ಪ್ರಕರಣ ದಾಖಲಾಗಿದೆ. ಹಾಗಾಗಿ ಗ್ರಾಮಸ್ಥರು ಧೃತಿಗೆಡುವ ಅಗತ್ಯವಿಲ್ಲ. ಹೊಂದಾಣಿಕೆ, ಸಹಬಾಳ್ವೆಯಿಂದ ಜೀವನ ನಡೆಸುವಂತೆ ಮನವಿ ಮಾಡಿದರು.

ನವಿಲೂರು ಮಠದ ಚನ್ನಬಸವಸ್ವಾಮೀಜಿ ಮಾತನಾಡಿ, ಘಟನೆ ನಂತರ ಎರಡು ಕುಟುಂಬದವರೊಂದಿಗೆ ಮಾತುಕತೆ ನಡೆಸಿದ್ದೇನೆ. ಭಿನ್ನಾಭಿಪ್ರಾಯ ಮರೆತು ಸಹಜ ಜೀವನ ನಡೆಸುವುದಾಗಿ ವರು ಭರವಸೆ ನೀಡಿದ್ದಾರೆ. ಘಟನೆ ಬಗ್ಗೆ ಹೆಚ್ಚು ವಿಷಯ ಪ್ರಸ್ತಾಪಿಸಿದಷ್ಟೂ ದೊಡ್ಡದಾಗಿ ಬೆಳೆಯುತ್ತದೆ. ಹಾಗಾಗಿ ಚಿಗುರಿನಲ್ಲೇ ಚಿವುಟಿ ಹಾಕುವ ಪ್ರಯತ್ನ ಮಾಡಬೇಕು ಎಂದರು.

ತಾಪಂ ಅಧ್ಯಕ್ಷ ಬಿ.ಎಸ್‌.ಮಹದೇವಪ್ಪ, ಟಿಎಪಿಸಿಎಂಎಸ್‌ ಅಧ್ಯಕ್ಷ ಕುರಹಟ್ಟಿ ಮಹೇಶ್‌, ಅಖೀಲ ಭಾರತ ವೀರಶೈವ ಮಹಸಭಾ ತಾಲೂಕು ಅಧ್ಯಕ್ಷ ಎಚ್‌.ಕೆ.ಚನ್ನಪ್ಪ, ತಹಶೀಲ್ದಾರ್‌ ಎಂ.ದಯಾನಂದ್‌, ತಾಪಂ ಇಒ ಬಿ.ರೇವಣ್ಣ, ಸದಸ್ಯ ಸಿದ್ದರಾಜೇಗೌಡ, ತಾಪಂ ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶ್‌ರಾಜ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ ಜಿ.ಆರ್‌.ಶಿವಮೂರ್ತಿ, ಪಿಎಸ್‌ಐ ಟಿ.ಎನ್‌.ಪುನೀತ್‌, ಗ್ರಾಪಂ ಅಧ್ಯಕ್ಷ ನಂಜುಂಡಸ್ವಾಮಿ, ವರ್ತಕರ ಸಂಘದ ಅಧ್ಯಕ್ಷ ಗೋವಿಂದರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.