ಮಂತ್ರಿ ಸ್ಥಾನದ ಚರ್ಚೆ ಜೋರು


Team Udayavani, May 21, 2018, 3:11 PM IST

m1-mantri.jpg

ಮೈಸೂರು: ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಪ್ರಮಾಣ ವಚನಕ್ಕೂ ಮುನ್ನವೇ ಎರಡೂ ಪಕ್ಷಗಳಲ್ಲಿ ಯಾರ್ಯಾರು ಮಂತ್ರಿಗಳಾಗಲಿದ್ದಾರೆ ಎಂಬ ಚರ್ಚೆಗಳು ಜಿಲ್ಲೆಯ ಜೋರಾಗಿವೆ. ಎರಡೂ ಪಕ್ಷಗಳ ಬೆಂಬಲಿಗರು ನಮ್ಮ ಶಾಸಕರು ಮಂತ್ರಿ ಆಗಿಯೇ ಆಗುತ್ತಾರೆ ಎಂದು ತಮ್ಮದೇ ಆದ ವಾದವನ್ನು ಮುಂದಿಡುತ್ತಾರೆ.

ಜಿಲ್ಲೆಯಲ್ಲಿ ಜೆಡಿಎಸ್‌ ಐದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೂ ಹಿರಿತನ ಮತ್ತು ಅನುಭವದ ಆಧಾರದ ಮೇಲೇ ಜಿ.ಟಿ.ದೇವೇಗೌಡ, ಎಚ್‌.ವಿಶ್ವನಾಥ್‌, ಸಾ.ರಾ.ಮಹೇಶ್‌ ಮಂತ್ರಿಗಳಾದರೆ, ಕಾಂಗ್ರೆಸ್‌ ಕೋಟಾದಡಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಮಂತ್ರಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಜಿ.ಟಿ.ದೇವೇಗೌಡರನ್ನು ಜಿಲ್ಲಾ ಉಸ್ತುವಾರಿ ಮಂತ್ರಿ ಮಾಡುವುದಾಗಿ ಸ್ವತಃ ಮುಖ್ಯಮಂತ್ರಿ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಅವರೇ ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರದುದ್ದಕ್ಕೂ ಹೇಳುತ್ತಲೇ ಬಂದಿದ್ದರು. ಹೀಗಾಗಿ ಜಿ.ಟಿ.ದೇವೇಗೌಡರು 12 ವರ್ಷಗಳ ಬಳಿಕ ಮತ್ತೆ ಮಂತ್ರಿಯಾಗುವ ಸಾಧ್ಯತೆ ಇದೆ.

ಜೆಡಿಎಸ್‌-ಬಿಜೆಪಿ ಮೈತ್ರಿ ಸರ್ಕಾರದ ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಜಿ.ಟಿ.ದೇವೇಗೌಡ ಅವರು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಸೇರಿ 2008ರಲ್ಲಿ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡ ಜಿಟಿಡಿ

ಅವರನ್ನು ಬಿಜೆಪಿ ಸರ್ಕಾರದಲ್ಲಿ ಕರ್ನಾಟಕ ಗೃಹಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. 2013ರಲ್ಲಿ ಮರಳಿ ಜೆಡಿಎಸ್‌ಗೆ ಬಂದು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾದವರು, 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ ಅವರಿಗೆ ಭಾರೀ ಅಂತರದ ಸೋಲುಣಿಸಿ, ಗೆಲುವು ಸಾಧಿಸಿದ್ದಾರೆ.

ವಿಶ್ವನಾಥ್‌ಗೂ ಸಚಿವ ಸ್ಥಾನ?: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಗರಡಿಯಲ್ಲಿ ಬೆಳೆದು ಬಂದ ಎಚ್‌.ವಿಶ್ವನಾಥ್‌, 1978ರಲ್ಲೇ ಶಾಸಕರಾದವರು. ಇದು ಅವರಿಗೆ ನಾಲ್ಕನೇ ಗೆಲುವಾದರೂ ಜಿಲ್ಲೆಯ ಅತ್ಯಂತ ಹಿರಿಯ ಶಾಸಕ. ವೀರಪ್ಪ ಮೊಯ್ಲಿ ಸರ್ಕಾರದಲ್ಲಿ ಮೊದಲಿಗೆ ಕನ್ನಡ ಮತ್ತು ಸಂಸ್ಕೃತಿ ಖಾತೆ ರಾಜ್ಯ ಸಚಿವರಾಗಿದ್ದ ವಿಶ್ವನಾಥ್‌ ಅವರನ್ನು ಬಳಿಕ ಸಂಪುಟ ದರ್ಜೆಗೆ ಬಡ್ತಿ ನೀಡಿ ಅರಣ್ಯ ಖಾತೆ ಜವಾಬ್ದಾರಿ ನೀಡಲಾಗಿತ್ತು.

ನಂತರ ಎಸ್‌.ಎಂ.ಕೃಷ್ಣ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು. 2008ರ ವಿಧಾನಸಭಾ ಚುನಾವಣೆಯಲ್ಲಿ ಸೋತ ಅವರು, ಮುಂದಿನ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಆರಿಸಿ ಬಂದಿದ್ದರು.

2014ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ, ಸಿದ್ದರಾಮಯ್ಯ ಅವರ ಮೇಲಿನ ಅಸಮಾಧಾನದಿಂದ ಕಾಂಗ್ರೆಸ್‌ ತ್ಯಜಿಸಿದ ಅವರ ರಾಜಕೀಯ ಜೀವನ ಅಂತ್ಯವಾಯಿತು ಎಂದು ಎಲ್ಲರೂ ಎಣಿಸುತ್ತಿರುವಾಗಲೇ ಜೆಡಿಎಸ್‌ ಸೇರಿ ಕೆ.ಆರ್‌.ನಗರ ಕ್ಷೇತ್ರ ಬಿಟ್ಟು ಹುಣಸೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ವಿಶ್ವನಾಥ್‌ಗೆ 14 ವರ್ಷಗಳ ಬಳಿಕ ಅಧಿಕಾರ ಸಿಗುವ ಸಾಧ್ಯತೆ ಹೆಚ್ಚಿದೆ.

ಇನ್ನು ಕೆ.ಆರ್‌.ನಗರ ಕ್ಷೇತ್ರದಲ್ಲಿ 2008ರಿಂದ ಸತತವಾಗಿ ಚುನಾಯಿತರಾಗಿ ಹ್ಯಾಟ್ರಿಕ್‌ ಸಾಧಿಸಿರುವ, ಎಚ್‌.ಡಿ.ಕುಮಾರಸ್ವಾಮಿ ಅವರ ಆಪ್ತ ವಲಯದಲ್ಲಿರುವ ಸಾ.ರಾ.ಮಹೇಶ್‌ ಅವರೂ ಮಂತ್ರಿಯಾಗುವುದು ಖಚಿತ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್‌ನಿಂದ ಯಾರ್ಯಾರು: ಕಾಂಗ್ರೆಸ್‌ನಿಂದ ತನ್ವೀರ್‌ ಮತ್ತು ಡಾ.ಯತೀಂದ್ರ ಅವರು ಮಾತ್ರ ಗೆದ್ದಿರುವುದರಿಂದ ಕಾಂಗ್ರೆಸ್‌ ಕೋಟಾದಲ್ಲಿ ಒಂದು ಮಂತ್ರಿ ಸ್ಥಾನ ಸಿಗಬಹುದು. ತನ್ವೀರ್‌, ಸಿದ್ದರಾಮಯ್ಯ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರಿಂದ ಅವರ ಕೋಟಾ ಮುಗಿದಿದ್ದು, ಆಡಳಿತ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರನ್ನು ಸಮಾಧಾನಪಡಿಸಲು ಡಾ.ಯತೀಂದ್ರ ಅವರನ್ನು ಮಂತ್ರಿ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.

ಆಯಾ ಶಾಸಕರ ಆಪ್ತರು, ಬೆಂಬಲಿಗರಂತು ತಮ್ಮ ಶಾಸಕರು ಮಂತ್ರಿ ಆಗಿಯೇ ಆಗುತ್ತಾರೆ ಎಂದು ವಾದ ಮಾಡುತ್ತಾ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಬುಧವಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಎದುರು ನೋಡುತ್ತಿದ್ದಾರೆ. 

* ಗಿರೀಶ್ ಹುಣಸೂರು

ಟಾಪ್ ನ್ಯೂಸ್

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.