ಸಿದ್ದು-ವಿಶ್ವನಾಥ್ ನಡುವೆ ‘ಟಾಕ್ ವಾರ್’
ರಾಜ್ಯಾಧ್ಯಕ್ಷ ಸ್ಥಾನವನ್ನೇ ನಿರ್ವಹಿಸಲಿಕ್ಕೆ ಆಗಿಲ್ಲ, ಅವರೇನ್ರಿ ಮಾತನಾಡೋದು: ಸಿದ್ದರಾಮಯ್ಯ ಕಿಡಿ
Team Udayavani, Jul 5, 2019, 5:10 AM IST
ಮೈಸೂರು/ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್ ನಡುವಿನ ವಾಕ್ಸಮರ ಮುಂದುವರಿದಿದೆ.
ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನೇ ನೆಟ್ಟಗೆ ಆರು ತಿಂಗಳು ನಿರ್ವಹಣೆ ಮಾಡಲು ಅವನ ಕೈಯಲ್ಲಿ ಆಗಲಿಲ್ಲ. ಅವರೇನ್ರಿ ನಮ್ಮ ಬಗ್ಗೆ ಮಾತನಾಡೋದು’ ಎಂದು ಎಚ್.ವಿಶ್ವನಾಥ್ ವಿರುದ್ಧ ಏಕವಚನದಲ್ಲೇ ವಾಗ್ಧಾಳಿ ನಡೆಸಿದರು.
‘ಸಮ್ಮಿಶ್ರ ಸರ್ಕಾರವನ್ನು ಮುನ್ನಡೆಸುವಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಫಲರಾಗಿದ್ದಾರೆ. ಸಿದ್ದರಾಮಯ್ಯ ಅವರು ಹೊಣೆಗಾರಿಕೆಯನ್ನು ಸರಿಯಾಗಿ ನಿಭಾಯಿಸಿಲ್ಲ’ ಎಂಬ ವಿಶ್ವನಾಥ್ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದು, ‘ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನೇ 6 ತಿಂಗಳು ನಿರ್ವಹಿಸಲಾಗದೆ ರಾಜೀನಾಮೆ ಕೊಟ್ಟಿದ್ದಾನೆ. ಅವನ ಮಾತಿಗೆ ಏನಂಥ ಪ್ರತಿಕ್ರಿಯೆ ಕೊಡೋದು. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನೇ ನಿರ್ವಹಿಸಲಾಗದೆ ರಾಜೀನಾಮೆ ನೀಡಿದವರಿಗೆ ಸಮನ್ವಯ ಸಮಿತಿ ಬಗ್ಗೆ ಮಾತನಾಡುವ ಅರ್ಹತೆಯಾಗಲಿ, ನೈತಿಕತೆಯಾಗಲಿ ಇಲ್ಲ. ಅವರು ಸದಾ ಇತರರ ಸಾಮರ್ಥ್ಯವನ್ನು ಪ್ರಶ್ನಿಸುತ್ತ ತಮ್ಮ ದೌರ್ಬಲ್ಯವನ್ನು ಮರೆಮಾಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅವರ ಬಗ್ಗೆ ನನಗೆ ಅನುಕಂಪವಿದೆ’ ಎಂದು ಕುಟುಕಿದರು.
ಮೈತ್ರಿ ಸರ್ಕಾರ ಸುಭದ್ರ: ಮೈತ್ರಿ ಸರ್ಕಾರ ಕಲ್ಲು ಬಂಡೆಯಂತೆ ಗಟ್ಟಿಯಾಗಿದ್ದು, ಅವಧಿ ಪೂರ್ಣ ಗೊಳಿಸಲಿದೆ. ಈ ಬಗ್ಗೆ ಯಾವುದೇ ಅನುಮಾನ ಬೇಡ. ಬಿಜೆಪಿಯವರು ಶಾಸಕರನ್ನು ಸೆಳೆಯಲು ಹಣದ ಆಮಿಷ ಒಡ್ಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಆದರೆ, ಇದರಲ್ಲಿ ಅವರು ಯಶಸ್ವಿಯಾಗು ವುದಿಲ್ಲ. ರಾಜ್ಯದ ಬಿಜೆಪಿ ನಾಯಕರು ‘ಆಪರೇಷನ್ ಕಮಲ’ ಮಾಡುತ್ತಿಲ್ಲ ಎನ್ನುತ್ತಿದ್ದರೂ ರಾಜ್ಯದಲ್ಲಿ ‘ಆಪರೇಷನ್ ಕಮಲ’ ಮಾತ್ರ ನಿಂತಿಲ್ಲ. ದೆಹಲಿ ಯಿಂದಲೇ ‘ಆಪರೇಷನ್ ಕಮಲ’ದ ಕಾರ್ಯಾ ಚರಣೆ ನಡೆಯುತ್ತಿದೆ. ಮೋದಿ, ಶಾ ಅವರೇ ಇದರ ಸೂತ್ರಧಾರರು ಎಂದು ಪುನರುಚ್ಚರಿಸಿದರು.
ಪಿರಿಯಾಪಟ್ಟಣ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಮಹದೇವ್‌ಗೆ ಬಿಜೆಪಿಯವರು 30 ಕೋಟಿ ರೂ.ನ ಆಮಿಷ ಒಡ್ಡಿರುವ ವಿಚಾರ ನನಗೆ ತಿಳಿದಿಲ್ಲ. ಅವರನ್ನೇ ಕೇಳಿ ಎಂದು ಜಾರಿಕೊಂಡರು. ಬಿಜೆಪಿಯವರು ‘ಆಪರೇಷನ್ ಕಮಲ’ ಮಾಡುತ್ತಿಲ್ಲ ಎಂಬ ನನ್ನ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ ಎಂಬ ಸಚಿವ ಜಿ.ಟಿ.ದೇವೇಗೌಡರ ಹೇಳಿಕೆ ಕುರಿತು ಪ್ರತಿಕ್ರಿಯೆ ಕೇಳಿದಾಗ ಸಿಡಿಮಿಡಿಗೊಂಡ ಸಿದ್ದರಾಮಯ್ಯ, ‘ಅವರ ಹೇಳಿಕೆಗೆ ಅವರು ಬದ್ಧರಾಗಿರಲಿ ಬಿಡಿ. ಅವರು ಅಮಿತ್ ಶಾ ಜೊತೆ ಮಾತನಾಡಿರಬೇಕು. ನಾನು ಶಾ ಜೊತೆ ಮಾತನಾಡಿಲ್ಲ’ ಎಂದು ತಿರುಗೇಟು ನೀಡಿದರು.
ಹೋಗೋ ಮೂದೇವಿ!: ‘ಅಣ್ಣಾ, ನೀವು ಎವರ್‌ಗ್ರೀನ್ ಸಿಎಂ ಎಂದ ಅಭಿಮಾನಿಗೆ ಸಿದ್ದರಾಮಯ್ಯ, ‘ಏ, ಹೋಗೋ ಮೂದೇವಿ’ ಎಂದು ಕೆನ್ನೆ ತಟ್ಟಿದ ಘಟನೆ ನಡೆಯಿತು. ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲು ಮೈಸೂರಿನ ಖಾಸಗಿ ಹೋಟೆಲ್ಗೆ ಆಗಮಿಸಿದ ಅವರನ್ನು ಸ್ವಾಗತಿಸುವ ವೇಳೆ ಅಭಿಯಾನಿಯೊಬ್ಬ, ‘ಅಣ್ಣಾ, ನೀವು ಎವರ್‌ಗ್ರೀನ್ ಸಿಎಂ’ ಎಂದಾಗ, ‘ಏ, ಹೋಗೋ ಮೂದೇವಿ’ ಎಂದು ಕೆನ್ನೆಗೆ ತಟ್ಟಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.