ಹುಣಸೂರು : ಕಾರಿನ ಟೈರ್ ಪಂಚರ್ ಆಗಿ ಟ್ಯಾಂಕರ್ ಗೆ ಢಿಕ್ಕಿ; ಯುವತಿಯರಿಬ್ಬರ ಸಾವು
ವಾರಾಂತ್ಯದ ವಿಹಾರಕ್ಕೆ ತೆರಳಿದ ಸ್ನೇಹಿತೆಯರ ದಾರುಣ ಅಂತ್ಯ
Team Udayavani, Jun 18, 2022, 9:22 PM IST
ಹುಣಸೂರು : ಮೈಸೂರು-ಹುಣಸೂರು ಹೆದ್ದಾರಿ 275ರ ರಂಗಯ್ಯನಕೊಪ್ಪಲು ಗೇಟ್ ಬಳಿ ಹಾಲಿನ ಟ್ಯಾಂಕರ್ ಮತ್ತು ಕಾರಿನ ನಡುವೆ ನಡೆದ ಶನಿವಾರ ಸಂಜೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವತಿಯರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ದಾಖಲೆಯಿಂದ ಮೃತರ ಗುರುತು ಪತ್ತೆಯಾಗಿದ್ದು,ಮೈಸೂರು ನಗರದ ಚಂದ್ರಶೇಖರ್ ಮೂರ್ತಿ ಪುತ್ರಿ, ಸಾಫ್ಟ್ ವೇರ್ ಇಂಜಿನಿಯರ್ ಜೀವಿತಾ(24) ಹಾಗೂ ಆಕೆಯ ಸ್ನೇಹಿತೆ ಕೆ.ಪಿ.ಅಗ್ರಹಾರದ ಪ್ರಸನ್ನರ ಪುತ್ರಿ ಪ್ರತಿಕ್ಷಾ(24) ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ.
ಘಟನೆ ವಿವರ
ವಾರಾಂತ್ಯವಾದ ಹಿನ್ನೆಲೆಯಲ್ಲಿ ಇಬ್ಬರೂ ಕಾರಿನಲ್ಲಿ ಮೈಸೂರು ಕಡೆಯಿಂದ ಶನಿವಾರ ಸಂಜೆ ವೇಳೆ ಹುಣಸೂರು ಕಡೆಗೆ ಬರುತ್ತಿದ್ದ ವೇಳೆ ಮುಂಬದಿಯ ಟೈರ್ ಪಂಚರ್ ಆಗಿ ಹುಣಸೂರು ಕಡೆಯಿಂದ ಬರುತ್ತಿದ್ದ ಹಾಲಿನ ಟ್ಯಾಂಕರ್‌ಗೆ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ತೀವ್ರಗಾಯಗೊಂಡ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ಕಂಡ ವಾಹನ ಸವಾರರು ಬಿಳಿಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿ ಶವಗಳನ್ನು ಮೈಸೂರು ಕೆ.ಆರ್.ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿ, ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯಿಂದ ಕೆಲಹೊತ್ತು ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಸಂಚಾರ ಅಸ್ತವ್ಯಸ್ಥವಾಗಿತ್ತು. ಪೊಲೀಸರು ಸಕಾಲಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.