ಮತದಾರರಿಗೆ ಕೇಂದ್ರದ ವೈಫ‌ಲ್ಯ ತಿಳಿಸಿ


Team Udayavani, Mar 11, 2019, 7:41 AM IST

m3-matadara.jpg

ಕೆ.ಆರ್‌.ನಗರ: ಕೇಂದ್ರದ ಎನ್‌ಡಿಎ ಸರ್ಕಾರದ ವೈಫ‌ಲ್ಯಗಳನ್ನು ಜನರಿಗೆ ತಿಳಿಸಿ, ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಮುಖಂಡರು ಮತ್ತು ಕಾರ್ಯಕರ್ತರು ಮತ ಯಾಚಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ವಿಷ್ಣುನಾಧನ್‌ ಮನವಿ ಮಾಡಿದರು.

ತಾಲೂಕಿನ ಅಂಕನಹಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಜನಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳ ಅವಧಿಯಲ್ಲಿ  ಕೇವಲ ಪ್ರಚಾರದಲ್ಲಿ ಕಾಲ ಕಳೆದಿರುವ ನರೇಂದ್ರ ಮೋದಿ ನಾಯಕತ್ವಕ್ಕೆ ದೇಶದ ಮತದಾರರು ಅಂತ್ಯ ಹಾಡಲಿದ್ದಾರೆ. ಸುಳ್ಳು ಹೇಳಿ ಹೆಚ್ಚು ದಿನ ಜನರನ್ನು ವಂಚಿಸಲು ಸಾಧ್ಯಲ್ಲ ಎಂದು ವಾಗ್ಧಾಳಿ ನಡೆಸಿದರು.

ದೇಶದ ಮತದಾರರು ರಾಹುಲ್‌ಗಾಂಧಿ ನಾಯಕತ್ವಕ್ಕೆ ಮನ್ನಣೆ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ರೈತ ಮತ್ತು ಜನ ವಿರೋಧಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಅಂತಿಮ ದಿನಗಳು ಸಮೀಪಿಸುತ್ತಿದ್ದು, ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದರು. ಕೆ.ಆರ್‌.ನಗರ ವಿಧಾನಸಭಾ ಕ್ಷೇತ್ರದಲ್ಲಿ ಡಿ.ರವಿಶಂಕರ್‌ ಅತ್ಯಂತ ಜನಾನುರಾಗಿ ನಾಯಕರಾಗಿದ್ದು, ಮುಂಬರುವ ಚುನಾವಣೆಯಲ್ಲಿ ಇವರನ್ನು ಗೆಲ್ಲಿಸಬೇಕು ಎಂದು ಕೋರಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ಜಯಕುಮಾರ್‌ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಅಂತರದ ಮತಗಳಿಂದ ಸೋತಿರುವ ಡಿ.ರವಿಶಂಕರ್‌ ಅವರಿಗೆ ಮುಂದೆ ಉಜ್ವಲ ರಾಜಕೀಯ ಭವಿಷ್ಯವಿದ್ದು, ಅವರನ್ನು ಶಾಸಕರನ್ನಾಗಿ ಮಾಡುವವರೆಗೂ ನಾವು ವಿರಮಿಸುವುದು ಬೇಡ ಎಂದರು.

ಸಭೆಯಲ್ಲಿ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ಜಿಪಂ ಸದಸ್ಯ ಡಿ.ರವಿಶಂಕರ್‌, ಮಾಜಿ ಸದಸ್ಯ ಡಿ.ಬಿ.ತಮ್ಮೇಗೌಡ, ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಮಾಜಿ ಉಪಾಧ್ಯಕ್ಷ ಹಾಡ್ಯಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ರಾಮಾಚಾರಿ, ಹೊಸಕೋಟೆ ಗ್ರಾಪಂ ಮಾಜಿ ಅಧ್ಯಕ್ಷ ಸಿ.ಕೆ.ಬಸವರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಎಂ.ಎಸ್‌.ಮಹದೇವ್‌,

ಉದಯಶಂಕರ್‌, ತಾಲೂಕು ಕಾಂಗ್ರೆಸ್‌ ವಕ್ತಾರ ಸೈಯದ್‌ಜಾಬೀರ್‌, ಎಪಿಎಂಸಿ ಮಾಜಿ ಉಪಾಧ್ಯಕ್ಷ ಹೆಚ್‌.ಹೆಚ್‌.ನಾಗೇಂದ್ರ, ಪಿಕಾರ್ಡ್‌ ಬ್ಯಾಂಕ್‌ ನಿರ್ದೇಶಕ ಎನ್‌.ಸಿ.ಪ್ರಸಾದ್‌, ಕಾಂಗ್ರೆಸ್‌ ಮುಖಂಡರಾದ ಪ್ರಕಾಶ್‌, ವಿಶ್ವೇಶ್ವರಯ್ಯ, ಅಶ್ವಥ್‌, ಪರಮೇಶ್‌, ಜಯಪ್ಪ, ಅಣ್ಣೇಗೌಡ, ಮಹೇಶ್‌, ಮಹದೇವ್‌ ಮತ್ತಿತರರು ಹಾಜರಿದ್ದರು.  

ಟಾಪ್ ನ್ಯೂಸ್

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.