ಹುಣಸೂರು: ಮದುವೆ ಮುಗಿಸಿ ಮನೆಗೆ ಹೋಗುವಾಗ ಭೀಕರ ಅಪಘಾತ; ಒಂದೇ ಕುಟುಂಬದ 6 ಮಂದಿ ಸಾವು
Team Udayavani, Apr 20, 2022, 5:42 PM IST
ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ವಾಹನ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ 6 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ತಾಲೂಕಿನ ಹರೀನಹಳ್ಳಿಗೇಟ್ ಬಳಿ ನಡೆದಿದೆ.
ಮೃತರೆಲ್ಲರೂ ಕೊಡಗಿನ ಪಾಲಿ ಬೆಟ್ಟದ ಒಂದೆ ಕುಟುಂಬದ ಸದಸ್ಯರೆಂದು ತಿಳಿದು ಬಂದಿದೆ.
ಹುಣಸೂರಿನಲ್ಲಿ ನಡೆದ ಸಂಬಂಧಿಕರ ಮದುವೆ ಕಾರ್ಯದಲ್ಲಿ ಭಾಗವಹಿಸಿ ಪಾಲಿ ಬೆಟ್ಟಕ್ಕೆ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ.
ಪರಿಣಾಮ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ತೀವ್ರತೆಗೆ ವಾಹನ ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಡಿವೈಎಸ್ಪಿ ರವಿಪ್ರಸಾದ್ ಹಾಗೂ ಇನ್ಸ್ ಪೆಕ್ಟರ್ ಚಿಕ್ಕಸ್ವಾಮಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶವಗಳನ್ನು ಹುಣಸೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.