ಬೆಟ್ಟದ ನಂದಿಗೆ 12ನೇ ಮಹಾಭಿಷೇಕ


Team Udayavani, Nov 6, 2017, 12:32 PM IST

m6-nandi.jpg

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ಪ್ರವಾಸಿ ತಾಣ ಚಾಮುಂಡಿಬೆಟ್ಟದ ನಂದಿವಿಗ್ರಹಕ್ಕೆ ಭಾನುವಾರ ನೂರಾರು ಭಕ್ತಾಧಿಗಳ ಸಮ್ಮುಖದಲ್ಲಿ 12ನೇ ವರ್ಷದ ಮಹಾಭಿಷೇಕವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು.

ಬೆಟ್ಟದ ಬಳಗ ಚಾರಿಟಬಲ್‌ ಟ್ರಸ್ಟ್‌ ಚಾಮುಂಡಿಬೆಟ್ಟದ ವತಿಯಿಂದ ಆಯೋಜಿಸಿದ್ದ ಪೂಜಾ ಮಹೋತ್ಸವ, ಮಹಾಭಿಷೇಕ ಕಾರ್ಯಕ್ರಮದ ಪ್ರಯುಕ್ತ ಏಕಶಿಲಾಮೂರ್ತಿ ನಂದಿ ವಿಗ್ರಹಕ್ಕೆ ವಿವಿಧ ಸುಗಂಧ ದ್ರವ್ಯಗಳ ಅಭಿಷೇಕವನ್ನು ಶ್ರದ್ಧಾಭಕ್ತಿಯಿಂದ ನಡೆಸಲಾಯಿತು. ಮೈಸೂರು ಹಾಗೂ ವಿವಿಧೆಡೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆ ಭಕ್ತರು ನಂದಿಯ ಮಜ್ಜನ ಕಂಡು ಪುನೀತರಾದರು.

ಮಹಾಭಿಷೇಕದ ಹಿನ್ನೆಲೆಯಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಗಣಪತಿ ಸಚ್ಚಿದಾನಂದ ಆಶ್ರಮದ ಕಿರಿಯ ಶ್ರೀಗಳಾದ ದತ್ತವಿಜಯಾನಂದ ತೀರ್ಥ ಸ್ವಾಮೀಜಿ, ಹೊಸಮಠದ ಚಿದಾನಂದ ಸ್ವಾಮೀಜಿ ನಂದಿಮೂರ್ತಿಗೆ ನೀರಿನ ಅಭಿಷೇಕ ಮಾಡುವ ಮೂಲಕ ಮಹಾಭಿಷೇಕಕ್ಕೆ ಚಾಲನೆ ನೀಡಿದರು. ಇದಾದ ಬಳಿಕ ನಂದಿಗೆ ಪಾದ್ಯ, ಆಚಮಾನ, ಮಧಪರ್ಕ,

-ಭಸ್ಮ, ಪಂಚಾಮೃತ, ಜೇನು, ಸಕ್ಕರೆ, ಅರಿಶಿನ, ಕುಂಕುಮ, ಶ್ರೀಗಂಧ, ಅರ್ಚನ, ನಿಂಬೆ ರಸ, ಪತ್ರೆಗಳು, ವಿವಿಧ ಪುಷ್ಪ, ಬಿಲ್ವಪತ್ರೆ, ಹಾಲು, ಮೊಸರು, ಬಾಳೆಹಣ್ಣು ಸೇರಿದಂತೆ ಒಟ್ಟು 34 ಬಗೆಯ ದ್ರವ್ಯಗಳಿಂದ 3 ಗಂಟೆಗಳ ಕಾಲ ಅಭಿಷೇಕ ನಡೆಯಿತು. ಬಳಿಕ ಇದೇ ಮೊದಲ ಬಾರಿಗೆ ನಂದಿಗೆ 50 ಮೀಟರ್‌ನ ನೀಲಿಬಣ್ಣದ ಬಟ್ಟೆ ಅಳವಡಿಸಿ ನಂತರ ತೆಗೆಯಲಾಯಿತು.

ಮಹಾಭಿಷೇಕದ ವೇಳೆ ಸಂಗೀತ ವಾದ್ಯಗಳ ಕಂಪು ಮುಳುಗಿದರೆ, ಮತ್ತೂಂದು ಕಡೆ ಭಕ್ತರಿಂದ ಶ್ರೀನಂದಿಗೆ, ಚಾಮುಂಡೇಶ್ವರಿ ಅಮ್ಮನವರಿಗೆ ಜೈಕಾರದ ಘೋಷಣೆಗಳು ಕೇಳಿಬಂತು. ಇದೇ ವೇಳೆ ಅಭಿಷೇಕದಲ್ಲಿ ಭಾಗವಹಿಸಿದ್ದ ನೂರಾರು ಭಕ್ತರಿಗೆ ಬೆಟ್ಟದ ಬಳಗ ಚಾರಿಟಬಲ್‌ ಟ್ರಸ್ಟ್‌ನಿಂದ ಪ್ರಸಾದ ವಿನಿಯೋಗ ಮಾಡಲಾಯಿತು.

ಟಾಪ್ ನ್ಯೂಸ್

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-snehamayi

Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10(1

Mangaluru: ನಗರದ 18 ಕಡೆಗಳಲ್ಲಿ ಪೇ ಪಾರ್ಕಿಂಗ್‌

9(1

Kundapura: ಟಿಟಿ ರೋಡ್‌ನ‌ಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

12-udupi

Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.