ಇಂದಿನಿಂದ ಮೈಸೂರು-ಬೆಂಗಳೂರು ನಡುವೆ ವಿಮಾನಯಾನ ಆರಂಭ
Team Udayavani, Jun 7, 2019, 8:10 AM IST
ಮೈಸೂರು: ಬೆಂಗಳೂರು ಹೆದ್ದಾರಿಯಲ್ಲಿನ ಸಂಚಾರ ದಟ್ಟಣೆಯಿಂದಾಗಿ ಹೈರಾಣಾಗಿರುವ ಮೈಸೂರು – ಬೆಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರಿಗೆ ಇದು ಸಂತಸದ ಸುದ್ದಿ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಪ್ರಾದೇಶಿಕ ಸಂಪರ್ಕ ಯೋಜನೆ ಉಡಾನ್-3ರಡಿ ಜೂನ್ 7ರಿಂದ ಮೈಸೂರು ವಿಮಾನ ನಿಲ್ದಾಣದಿಂದ 2ನೇ ವಿಮಾನ ಸೇವೆಗೆ ಚಾಲನೆ ನೀಡಲಿದ್ದು, ಈ ವಿಮಾನ ಮೈಸೂರು-ಬೆಂಗಳೂರು ನಡುವೆ ಸಂಚರಿಸಲಿದೆ. ಮೈಸೂರು -ಬೆಂಗಳೂರು ನಡುವಿನ ಪ್ರಯಾಣಕ್ಕೆ 1365 ರೂ.ಟಿಕೆಟ್ ದರ ನಿಗದಿಪಡಿಸಲಾಗಿದೆ.
ಉಡಾನ್ ಯೋಜನೆಯಡಿ ಈಗಾಗಲೇ ಮೈಸೂರು – ಚೆನ್ನೈ ನಡುವೆ ವಿಮಾನಯಾನ ಸೌಲಭ್ಯವಿದ್ದು, ಮೈಸೂರು – ಬೆಂಗಳೂರು ನಡುವಿನ 2ನೇ ವಿಮಾನಯಾನ ಸೌಲಭ್ಯಕ್ಕೆ ಜೂನ್ 7ರ ಬೆಳಗ್ಗೆ 11.15ಕ್ಕೆ ಮೈಸೂರು ವಿಮಾನ ನಿಲ್ದಾಣದಲ್ಲಿ ಚಾಲನೆ ದೊರೆಯಲಿದೆ.
ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಉದ್ಘಾಟನೆ ಮಾಡುವರು. ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್, ಸಂಸದ ಪ್ರತಾಪ್ ಸಿಂಹ ಉಪಸ್ಥಿತರಿರುವರು.
ಉಪಸ್ಥಿತಿ: ಮೈಸೂರು ಮಹಾ ನಗರ ಪಾಲಿಕೆ ಮೇಯರ್ ಪುಷ್ಪಲತಾ ಜಗನ್ನಾಥ್, ಭಾರತೀಯ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಪ್ರದೀಪ್ ಸಿಂಗ್ ಖರೋಲಾ, ರಾಜ್ಯ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಕೆಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಕುಮಾರ್‌ಪುಷ್ಕರ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ದಕ್ಷಿಣ ಕೇಂದ್ರದ ಪ್ರಾದೇಶಿಕ ಕಾರ್ಯನಿರ್ವಾಹಕ ನಿರ್ದೇಶಕ ಆರ್. ಮಾಧವನ್ ಭಾಗವಹಿಸಲಿದ್ದಾರೆ.
2015ರಲ್ಲಿ ದಸರಾ ಸಂದರ್ಭದಲ್ಲಿ ಮೈಸೂರಿಗೆ ಬಂದು ಹೋಗುವ ಪ್ರವಾಸಿಗರ ಅನುಕೂಲಕ್ಕಾಗಿ ಸೆಪ್ಟೆಂಬರ್ ನಿಂದ ನವೆಂಬರ್‌ವರೆಗೆ 3 ತಿಂಗಳ ಕಾಲ ಮೈಸೂರು – ಬೆಂಗಳೂರು ನಡುವೆ ವಿಮಾನಯಾನ ಸೌಲಭ್ಯ ಒದಗಿಸಲಾಗಿತ್ತು. 3 ತಿಂಗಳ ಹಾರಾಟದ ನಂತರ ಏರ್ ಇಂಡಿಯಾ ಸಂಸ್ಥೆ ವಿಮಾನ ಹಾರಾಟ ಸ್ಥಗಿತಗೊಳಿಸಿತ್ತು. 2018ರ ದಸರಾ ಸಂದರ್ಭದಲ್ಲಿ ಸರ್ಕಾರ ಮೈಸೂರು-ಬೆಂಗಳೂರು ನಡುವೆ 20 ದಿನ ಕಲ್ಪಿಸಿದ್ದ ವಿಮಾನಯಾನ ಸೌಲಭ್ಯಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಉಡಾನ್ ಯೋಜನೆಯಡಿ ಕಡಿಮೆ ದರದಲ್ಲಿ ಮೈಸೂರು – ಬೆಂಗಳೂರು ನಡುವೆ ವಿಮಾನಯಾನ ಸೌಲಭ್ಯ ಕಲ್ಪಿಸಿರುವುದರಿಂದ ಪ್ರವಾಸೋದ್ಯಮದ ಬೆಳವಣಿಗೆಗೆ ಅನುಕೂಲವಾಗಲಿದೆ. ಜೊತೆಗೆ ಮಧ್ಯಮ ವರ್ಗದ ಜನತೆಯೂ ವಿಮಾನಯಾನ ಮಾಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.