ಮೈಸೂರಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ
Team Udayavani, May 16, 2017, 12:26 PM IST
ಮೈಸೂರು: ಸೆಪ್ಟೆಂಬರ್ ಅಥವಾ ನವೆಂಬರ್‌ನಲ್ಲಿ ಜಿಲ್ಲಾಡಳಿತದವತಿಯಿಂದ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸುವುದಾಗಿ ಶಾಸಕ ವಾಸು ಹೇಳಿದರು. ಕೌಶಲ್ಯ ಕರ್ನಾಟಕ ಯೋಜನೆಯಡಿ ಕೌಶಲ್ಯ ಅಭಿವೃದ್ಧಿ ಇಲಾಖೆ, ವಾಣಿಜ್ಯೋದ್ಯಮ ಮತ್ತು ಜೀವನೋಪಾಯ ಮತ್ತು ಜಿಲ್ಲಾಡಳಿತದ ಸಹಯೋಗದೊಂದಿಗೆ ಜೆ.ಕೆ.ಮೈದಾನದಲ್ಲಿ ಆಯೋಜಿಸಿದ್ದ ನಿರುದ್ಯೋಗಿ ಯುವ ಜನರ ಬೇಡಿಕೆ ಸಮೀಕ್ಷೆ ಮತ್ತು ನೋಂದಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾಭ್ಯಾಸ ಇಲ್ಲವೇ ತರಬೇತಿ ಮುಗಿದ ಕೂಡಲೇ 18 ರಿಂದ 30 ವರ್ಷ ಒಳಪಟ್ಟವರಿಗೆ ಉದ್ಯೋಗ ದೊರಕಬೇಕು. ಇದಕ್ಕೆ ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಸಹಕಾರ ನೀಡಬೇಕು ಎಂದರು. ಐಟಿಐ, ಡಿಪ್ಲೋಮೋ, ಎಂಜಿನಿಯರಿಂಗ್ ಮಾಡಿದ ವಿದ್ಯಾವಂತ ಯುವ ಜನರು ನೌಕರಿ ಹುಡುಕುತ್ತಾ ಕೂರುವ ಬದಲಿಗೆ ಕೈಗಾರಿಕೋದ್ಯಮಿಗಳಾಗಿ ಉದ್ಯೋಗದಾತರಾಗುವತ್ತ ಚಿಂತಿಸಬೇಕು. ನಮ್ಮ ಕಣ್ಣ ಮುಂದೆಯೇ ಅಂತಹ ಸಾಕಷ್ಟು ನಿದರ್ಶನಗಳಿವೆ. ಉದ್ಯೋಗಕ್ಕಾಗಿ ಅಲೆಯದೆ ದೊಡ್ಡ ಕೈಗಾರಿಕೋದ್ಯಮಿಗಳಾಗಿ ಸಾವಿರಾರು ಉದ್ಯೋಗ ಸೃಷ್ಟಿ ಮಾಡಿರುವುದನ್ನು ಕಾಣಬಹುದು ಎಂದು ತಿಳಿಸಿದರು.
ಈ ಹಿಂದೆ ಕೂಡ ಮೈಸೂರಿನಲ್ಲಿ ಉದ್ಯೋಗ ಮೇಳ ನಡೆದಾಗ ನೋಂದಣಿ ಮಾಡಿಸಿಕೊಂಡಿದ್ದ ಬಹಳಷ್ಟು ಜನರಿಗೆ ಉದ್ಯೋಗ ದೊರೆತಿದೆ. ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರು ಅವರು ಪಂಚವಾರ್ಷಿಕ ಯೋಜನೆಗಳ ಮೂಲಕ ದೇಶದಲ್ಲಿ ದೊಡ್ಡ ದೊಡ್ಡ ಉದ್ದಿಮೆಗಳು ಸ್ಥಾಪನೆಯಾಗುವಂತೆ ಮಾಡಿದರು. ಜನ ಸಂಖ್ಯೆ ಹೆಚ್ಚಳದಿಂದ ಎಲ್ಲರಿಗೂ ಉದ್ಯೋಗ ದೊರೆಯುವುದಿಲ್ಲ. ಹೀಗಾಗಿ ಉದ್ಯೋಗದಾತರಾಗುವತ್ತ ಹೆಚ್ಚಿನ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.
ಮೈಸೂರು ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಜಿಲ್ಲಾಧಿಕಾರಿ ಡಿ.ರಂದೀಪ್, ಜಿಪಂ ಸಿಇಒ ಪಿ.ಶಿವಶಂಕರ್, ಕೌಶಲ್ಯ ಇಲಾಖೆ ಜಂಟಿ ನಿರ್ದೇಶಕ ನಾಗರಾಜು, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ವಿಶ್ವನಾಥ್ ಭರಣಿ ಇತರರು ಇದ್ದರು.
ಏನಿದು ಉದ್ಯೋಗ ನೋಂದಣಿ
ಉದ್ಯೋಗಾವಕಾಶ ಹೆಚ್ಚಳ ಮತ್ತು ಎಲ್ಲಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನ ಒಂದೇ ಸೂರಿನಡಿ ತರುವ ಉದ್ದೇಶದಿಂದ ರಚಿಸಲಾಗಿರುವ ಕೌಶಲ್ಯ ಅಭಿವೃದ್ಧಿ ಇಲಾಖೆ ನಿರುದ್ಯೋಗಿ ಯುವ ಜನರ ಸಮೀಕ್ಷೆ ಆರಂಭಿಸಿದೆ. ಈ ಯೋಜನೆಯಡಿ ನಿರುದ್ಯೋಗಿಗಳ ನೋಂದಣಿಗಾಗಿ ರೂಪಿಸಲಾಗಿರುವ www.Kaushalkar.com ವೆಬ್‌ಸೈಟ್‌ನಲ್ಲಿ ವಿದ್ಯಾಭ್ಯಾಸದ ನಂತರ ಆಧಾರ್ ಸಂಖ್ಯೆ, ಇ-ಮೇಲ್ ಐಡಿ ಹಾಗೂ ದೂರವಾಣಿ ಸಂಖ್ಯೆ ನೀಡಿ ಹೆಸರು ನೋಂದಣಿ ಮಾಡಿಕೊಂಡಲ್ಲಿ, ಕಾಲ್‌ಸೆಂಟರ್, ಸೇಲ್ಸ್‌ಮನ್, ಸೇಲ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಯೋಜನೆಗೆ ಸೇರಿಸಿರುವ 59 ಕೌಶಲ್ಯಗಳ ಪೈಕಿ ನಿಮ್ಮ ಆಸಕ್ತಿಗೆ ಅನುಗುಣವಾಗಿ ಶಿಷ್ಯವೇತನ ಸಹಿತ ಎರಡು ವಾರಗಳಿಂದ ಒಂದೂವರೆ ವರ್ಷಗಳ ವರೆಗೆ ತರಬೇತಿ ನೀಡಿ ಉದ್ಯೋಗ ಭರ್ತಿಯ ಅವಕಾಶ ಕಲ್ಪಿಸಲಾಗುತ್ತದೆ.
ಸರ್ವರ್ ಕಾಟ
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮೊದಲ ದಿನವೇ ಸರ್ವರ್ ಮಂದಗತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರಿಂದ ಉತ್ಸಾಹದಿಂದ ಬಂದವರು ನಿರಾಶೆಯಿಂದ ಹಿಂತಿರುಗುವಂತಾಯಿತು. ಬೆಳಗ್ಗೆ 11 ಗಂಟೆಗೆ ಶಾಸಕ ವಾಸು ಚಾಲನೆ ನೀಡಿದ ನಂತರ ಸುಮಾರು 15 ಮಂದಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡು ಅಷ್ಟರಲ್ಲಾಗಲೆ ಕೈಕೊಟ್ಟ ಸರ್ವರ್ ಮತ್ತೆ ಸರಿ ಆಗಿದ್ದು ಮಧ್ಯಾಹ್ನ 2 ಗಂಟೆ ನಂತರವೇ. ಆ ನಂತರವು ಅರ್ಧಗಂಟೆಗೊಮ್ಮೆ ಸರ್ವರ್ ಕೈಕೊಡುತ್ತಿದ್ದುದರಿಂದ ಮೊದಲ ದಿನ ಕೇವಲ 84 ಮಂದಿಯಷ್ಟೆ ನೋಂದಣಿ ಮಾಡಿಸಿಕೊಳ್ಳಲು ಸಾಧ್ಯವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.