ಬಿಜೆಪಿ-ಕಾಂಗ್ರೆಸ್‌ ಭ್ರಷ್ಟಾಚಾರ ನಾಣ್ಯದ ಎರಡು ಮುಖ


Team Udayavani, Feb 26, 2018, 12:26 PM IST

m1 bjp-kai.jpg

ಕೆ.ಆರ್‌.ನಗರ: ರೈತರ ಉಳಿವಿನ ಬಗ್ಗೆ ಚಿಂತಿಸದೆ ಪರಸ್ಪರ ಟೀಕೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್‌ ಮತ್ತು ಬಿಜೆಪಿ ಭ್ರಷ್ಟಾಚಾರದಲ್ಲಿ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಜೆಡಿಎಸ್‌ ರಾಜಾಧ್ಯಕ್ಷ ಹೆಚ್‌.ಡಿ.ಕುಮಾರಸ್ವಾಮಿ ಟೀಕಿಸಿದರು.

ಪಟ್ಟಣದಲ್ಲಿರುವ ಮಾಜಿ ಸಚಿವ ದಿ.ಎಸ್‌.ನಂಜಪ್ಪ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷ ಬಿಟ್ಟು ಕೆಜೆಪಿ ಅಭ್ಯರ್ಥಿಯಾಗಿ ನಂತರದ ದಿನಗಳಲ್ಲಿ ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳದೆ ತಟಸ್ಥರಾಗಿದ್ದ ನಂಜಪ್ಪ ಅವರ ಪುತ್ರ ಹಾಗೂ ನವನಗರ ಅರ್ಬನ್‌ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ಬಸಂತ್‌ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತುಕತೆ ನಡೆಸಿದರು.

ನಂತರ ಸುದ್ದಿರಾರರಿಂದಿಗೆ ಮಾತನಾಡಿದ ಕುಮಾರಸ್ವಾಮಿ, ಮೈಸೂರು ಜಿಲ್ಲೆಯ ರಾಜಕಾರಣದಲ್ಲಿ ಹಿರಿಯನಾಯಕರಾಗಿ, ಹೆಚ್‌.ಡಿ.ದೇವೇಗೌಡರ ಸಂಪುಟದಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಣೆ ಮಾಡಿದಂತ ನಂಜಪ್ಪ ಅವರ ಮಗ ಬಸಂತ್‌ ಅವರು ನಮ್ಮ ಪಕ್ಷದವರೇ.

ಸ್ಥಳೀಯವಾಗಿ ಕೆಲವು ರಾಜಕೀಯ ಘಟನೆಗಳಿಂದ ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಪಕ್ಷದಿಂದ ದೂರವಾಗಿದ್ದರು. ಆದರೆ, ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶದಿಂದ ಹಾಗೂ ರೈತಪರ ಸರ್ಕಾರವನ್ನು ತರಬೇಕು ಎಂಬ ದೃಷ್ಠಿಯಿಂದ ನಮ್ಮ ಕೈ ಬಲ ಪಡಿಸಲು ಅವರ ಮನೆಯೇ ಆದ ಜೆಡಿಎಸ್‌ ಪಕ್ಷಕ್ಕೆ ವಾಪಸ್‌ ಬಂದಿದ್ದಾರೆ ಎಂದು ಹೇಳಿದರು.

ಬಂಸತ್‌ಗೆ ಸ್ಥಾನಮಾನ ಭರವಸೆ: ಬಸಂತ್‌ ಅವರು ನಮ್ಮಿಂದ ಏನನ್ನು ಸಹ ಅಪೇಕ್ಷೆ ಪಟ್ಟಿಲ್ಲ, ಈ ಕುಟುಂಬ ಇದುವರೆಗೂ ಸಹ ಅಧಿಕಾರವನ್ನು ಹುಡಿಕಿಕೊಂಡು ಹೋಗಿಲ್ಲ, ಜೆಡಿಎಸ್‌ ಪಕ್ಷವನ್ನು ಅವರ ತಂದೆ ಮಾಜಿ ಸಚಿವ ದಿ.ಎಸ್‌.ನಂಜಪ್ಪ ಅವರ ಜೀವಿತಾವಧಿಯ ಕಾಲದಿಂದಲೂ ಪ್ರಾಮಾಣಿಕವಾಗಿ ಬೆಳೆಸಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಅವರಿಗೆ ರಾಜ್ಯ ಮಟ್ಟದಲ್ಲಿ ಸ್ಥಾನ ಮಾನ ನೀಡಲಿದೆ ಎಂದು ಭರವಸೆ ನೀಡಿದರು.

ಲೂಟಿ ಹಣದಲ್ಲೇ ಕೈ ಚುನಾವಣೆ:  2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದು ಜನತೆಯ ಭಾವನೆಯಾಗಿದೆ. ಕಾಂಗ್ರೆಸ್‌ ಪಕ್ಷದ ಜವಾಬ್ದಾರಿಯುತ ಸ್ಥಾನದಲ್ಲಿರುವ ಆರೋಗ್ಯ ಸಚಿವ ರಮೇಶ್‌ಕುಮಾರ್‌ ಅವರೇ ಹೇಳಿರುವಂತೆ ಭ್ರಷ್ಟಾಚಾರ ಮಾಡುವುದು ತಪ್ಪಲ್ಲ.

ಆದರೆ, ಭ್ರಷ್ಟಾಚಾರ ಮಾಡುವಾಗ ಸಿಕ್ಕಿಹಾಕಿಕೊಳ್ಳಬಾರದು ಎಂದಿದ್ದಾರೆ. ಹಾಗೂ ಕಳೆದ ಐದು ವರ್ಷಗಳಲ್ಲಿ ಭ್ರಷ್ಟಾಚಾರವೆಸಗಿ ಲೂಟಿ ಮಾಡಿರುವ ಸಾವಿರಾರು ಕೋಟಿ ರೂ.ಹಣದಲ್ಲಿಯೇ ಮುಂಬರುವ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್‌ ಪಕ್ಷ ಎದುರಿಸಲಿದೆ ಎಂದು ಕಿಡಿಕಾರಿದರು.

ಅಧಿಕಾರದ ವಿಶ್ವಾಸ: ಈಗಾಗಲೇ ಬಿಡುಗಡೆ ಗೊಳಿಸಿರುವ ಜೆಡಿಎಸ್‌ ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಎಲ್ಲಾ ರೀತಿಯಲ್ಲಿ ಪರಿಶೀಲಿಸಿ, ಸಮಾಲೋಚಿಸಿಯೇ ಪಕ್ಷದ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ. ರಾಜ್ಯಾದ್ಯಂತ ಪಕ್ಷದ ಸಂಘಟನೆಗಾಗಿ ಸಮಾವೇಶಗಳು ಮತ್ತು ಸಂವಾದಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಖಂಡಿತ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಇದಕ್ಕೂ ಮುನ್ನ ಪಟ್ಟಣದ ಕೃಷ್ಣರಾಜೇಂದ್ರ ಕ್ರೀಡಾಂಗಣಕ್ಕೆ ಬೆಳಗ್ಗೆ 10.30ರ ಸಮಯದಲ್ಲಿ ಹೆಲಿಕಾಪ್ಟರ್‌ ಮೂಲಕ ಬಂದಿಳಿದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಸಾ.ರಾ.ಮಹೇಶ್‌ ಅವರನ್ನು ತಾಲೂಕು ಜೆಡಿಎಸ್‌ ಅಧ್ಯಕ್ಷ ಚಂದ್ರಶೇಖರ್‌, ನಗರಾಧ್ಯಕ್ಷ ಡಿ.ಸಿ.ಮಂಜುನಾಥ್‌, ಪುರಸಭಾಧ್ಯಕ್ಷೆ  ಕವಿತಾ ವಿಜಯ್‌ಕುಮಾರ್‌ ಮತ್ತು ಮುಖಂಡರು  ಹೂಮಾಲೆ ಹಾಕಿ ಗೌರವಿಸುವ ಮೂಲಕ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಲಲಿತಮ್ಮ ನಂಜಪ್ಪ, ದಿನೇಶ್‌ನಂಜಪ್ಪ, ಜಿಪಂ ಸದಸ್ಯ ಅಮಿತ್‌ ವಿ.ದೇವರಹಟ್ಟಿ, ಮಾಜಿ ಉಪಾಧ್ಯಕ್ಷ ಎ.ಎಸ್‌.ಚನ್ನಬಸಪ್ಪ, ಮೂಳೆ ತಜ್ಞ ಡಾ.ಮೆಹಬೂಬ್‌ ಖಾನ್‌, ಜೆಡಿಎಸ್‌ ವಕ್ತಾರ ಕೆ.ಎಲ್‌.ರಮೇಶ್‌, ಪಿಎಲ್‌.ಡಿ. ಬ್ಯಾಂಕ್‌ ಮಾಜಿ ಅಧ್ಯಕ್ಷ ಹರಿಚಿದಂಬರ, ಪುರಸಭೆ ಸದಸ್ಯರಾದ ಕೆ.ಎಲ್‌.ಜಗದೀಶ್‌, ಸುಬ್ರಮಣ್ಯ, ನಂಜುಂಡ, ಶಿವಕುಮಾರ್‌, ಗೀತಾಮಹೇಶ್‌, ಸರೋಜಮ್ಮಮಾದಯ್ಯ, ಉಮೇಶ್‌, ಕೆ.ಎಲ್‌.ಕುಮಾರ್‌, ಮಾಜಿ ಸದಸ್ಯರಾದ ಕೆ.ಆರ್‌.ಗಿರೀಶ್‌, ವಿಜಯ್‌ ಕುಮಾರ್‌, ರಾಜಾ ಶ್ರೀಕಾಂತ್‌, ತಾ.ಪಂ.ಸದಸ್ಯ ಶ್ರೀನಿವಾಸ್‌ ಪ್ರಸಾದ್‌, ಶೋಭಾ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಅಣ್ಣೇಗೌಡ, ಇನ್ನಿತರರು ಇದ್ದರು.

ಜೆಡಿಎಸ್‌ ಪಕ್ಷದ ಸಂಸ್ಥಾಪಕರಲ್ಲಿ ನಮ್ಮ ತಂದೆಯವರು ಒಬ್ಬರಾಗಿದ್ದರು, ಜೆಡಿಎಸ್‌ ನಮ್ಮ ಸಿದ್ಧಾಂತವನ್ನು ಒಪ್ಪುವ ಪಕ್ಷ, ಸ್ಥಳೀಯ ಭಿನ್ನಾಭಿಪ್ರಾಯಗಳಿಂದ ಬೇರೆ ಪಕ್ಷಕ್ಕೆ ಹೋಗಿದ್ದರು ರಾಜ್ಯ ಮಟ್ಟದಲ್ಲಿ ದೇವೇಗೌಡರ ಸಂಪರ್ಕ ಮತ್ತು ಬಾಂದವ್ಯ ಬಿಟ್ಟಿರಲಿಲ್ಲ.  ರಾಜ್ಯದಲ್ಲಿ ಜೆಡಿಎಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಮತ್ತೂಮ್ಮೆ ಮುಖ್ಯಮಂತ್ರಿಯಾಗಿ ಕಾಣಬೇಕೆಂಬ ಆಶಯದಂತೆ ಈಗ ಜೆಡಿಎಸ್‌ ಪಕ್ಷವನ್ನು ಸೇರಿದ್ದೇನೆ.
-ಕೆ.ಎನ್‌.ಬಸಂತ್‌, ನವನಗರ ಅರ್ಬನ್‌ ಬ್ಯಾಂಕ್‌ ಅಧ್ಯಕ್ಷ.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.