ಕಾಂಗ್ರೆಸ್‌ ಕಿತ್ತೂಗೆಯಲು ಬಿಜೆಪಿಗೆ ಮಾತ್ರ ಸಾಮರ್ಥ್ಯ


Team Udayavani, Mar 31, 2018, 6:00 AM IST

IMG-20180330-WA0100.jpg

ಮೈಸೂರು: ಭ್ರಷ್ಟಾಚಾರ ಮತ್ತು ಹಿಂಸಾಚಾರದ ಪ್ರತಿರೂಪವಾದ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೂಗೆಯಲು ಜೆಡಿಎಸ್‌ಗೆ ಸಾಮರ್ಥ್ಯವಿಲ್ಲ. ಹೀಗಾಗಿ ಬಿಜೆಪಿ ಗೆಲ್ಲಿಸಿ, ಕರ್ನಾಟಕದ ವಿಕಾಸಕ್ಕೆ ಸಹಕರಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮನವಿ ಮಾಡಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ  ನಗರದ ಮೂರು ವಿಧಾನಸಭಾ ಕ್ಷೇತ್ರಗಳ ಬೂತ್‌ ಪ್ರಮುಖರ ನವಶಕ್ತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರ ದ ಬಗ್ಗೆ ಬರೆಯುವುದಾದರೆ ಕರ್ನಾಟಕದಲ್ಲಷ್ಟೇ ಅಲ್ಲ, ಕೇರಳದ ಗಡಿವರೆಗೂ ಬರೆಯಬಹುದು ಎಂದು ದೂರಿದ ಅವರು, ಕರ್ನಾಟಕದ ವಿಕಾಸಕ್ಕೆ ಕೆಲಸ ಮಾಡುವ ಬಿಜೆಪಿ ಸರ್ಕಾರ ಬೇಕಾ? ಕಾಂಗ್ರೆಸ್‌ ನೇತೃತ್ವದ ಕಮೀಷನ್‌ ಸರ್ಕಾರ ಬೇಕಾ ನೀವೇ ತೀರ್ಮಾನಿಸಿ ಎಂದರು.

ಜೆಡಿಎಸ್‌ಗೆ ಬೆರಳೆಣಿಕೆ ಶಾಸಕರನ್ನು ಗೆಲ್ಲಿಸಿಕೊಳ್ಳಬಹುದು. ಇಲ್ಲಾ ಒಂದೆರಡು ಕಾಂಗ್ರೆಸ್‌ ಶಾಸಕರನ್ನು ಸೋಲಿಸಬಹುದು. ಆದರೆ, ಅವರಿಂದ ರಾಜ್ಯದಲ್ಲಿ ಕಾಂಗ್ರೆಸ್‌ ಸೋಲಿಸಲು ಆಗಲ್ಲ ಎಂದು ಹೇಳಿದರು.

ಚಿತ್ರದುರ್ಗದಲ್ಲಿ ಬಾಯ್ತಪ್ಪಿನಿಂದ ಆಡಿದ ಮಾತಿಗೆ ಸಿದ್ದರಾಮಯ್ಯ ಅವರಿಂದ ರಾಹುಲ್‌ ಗಾಂಧಿವರೆಗೆ ಸಾಮಾಜಿಕ ಜಾಲತಾಣದಲ್ಲಿ ಜಾಡಿಸಿದರು. ಆದರೆ, ನಾನು ಬಾಯ್ತಪ್ಪಿ ಮಾತನಾಡಬಹುದು. ರಾಜ್ಯದ ಜನತೆ ಈ ಬಾರಿ ಕಾಂಗ್ರೆಸ್‌ ಗೆಲ್ಲಿಸುವ ತಪ್ಪು ನಿರ್ಣಯ ಮಾಡಲಾರರು ಎಂಬ ವಿಶ್ವಾಸವಿದೆ ಎಂದರು.

ಸಿದ್ದರಾಮಯ್ಯ ರಾಜ್ಯದ ಅಸ್ಮಿತೆಯನ್ನೇ ಬದಲಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಮುನ್ನುಡಿ ಬರೆದ ಸರ್‌ ಎಂ.ವಿಶ್ವೇಶ್ವರಯ್ಯ, ನಾಡಗೀತೆ ರಚಿಸಿದ ಮಹಾ ಕವಿ ಕುವೆಂಪು ಅವರ ಜಯಂತಿ ಆಚರಿಸುವುದು ಬೇಕಿಲ್ಲ. ಟಿಪ್ಪು ಜಯಂತಿ ಮಾಡುತ್ತಾರೆ ಎಂದು ಟೀಕಿಸಿದರು.

ರಾಜ್ಯಸಭೆಗೆ ಪ್ರಮೋದಾದೇವಿ?
ಈ ಮಧ್ಯೆ, ರಾಜವಂಶಸ್ಥರನ್ನು ಭೇಟಿ ಮಾಡಿದ ಅಮಿತ್‌ ಶಾ ಅವರು, ಈ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ರಾಜವಂಶಸ್ಥರಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ, ಮುಂದೆ ಕರ್ನಾಟಕದಿಂದಲೇ ರಾಜವಂಶ ಸ್ಥರನ್ನು ರಾಜ್ಯ ಸಭೆಗೆ ಕಳುಹಿಸುವ ಬಗ್ಗೆಯೂ ಪ್ರಸ್ತಾಪ ಮಾಡಿ ದ್ದಾರೆ ಎನ್ನಲಾಗಿದೆ. ಮೈಸೂರು ಭಾಗದಲ್ಲಿ ರಾಜವಂಶಸ್ಥರ ಮೇಲೆ ಜನ ಇರಿಸಿರುವ ಪೂಜ್ಯ ಭಾವನೆಯನ್ನು ಮತವಾಗಿ ಪರಿ ವರ್ತಿಸಿಕೊಳ್ಳಲು ಬಿಜೆಪಿ, ಯದುವೀರ್‌ ಅವರನ್ನೇ ಪಕ್ಷಕ್ಕೆ ಸೆಳೆಯಲು ಯತ್ನಿಸುತ್ತಿದೆ.
ಆದರೆ,ಅವರು ನಿರಾಸಕ್ತಿ ತೋರುತ್ತಿ ರುವುದರಿಂದ ಪ್ರಮೋದಾದೇವಿ ಒಡೆಯರ್‌ ಅವರನ್ನೇ ಪಕ್ಷಕ್ಕೆ ಸೆಳೆಯುವ ಪ್ರಯತ್ನ ನಡೆದಿವೆ ಎನ್ನಲಾಗಿದೆ.

ಪಾತಾಳದಲ್ಲಿದ್ದರೂ ಹಂತಕರ ಬಿಡೆವು
ರಾಜ್ಯದಲ್ಲಿನ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರ ಹತ್ಯೆಗೆ ಕಾರಣವಾಗಿರುವ ಹಂತಕರು ಪಾತಾಳದಲ್ಲಿ ಅಡಗಿ ದ್ದರೂ ಅವರನ್ನು ಬಿಡೆವು ಎಂದು ಅಮಿತ್‌ ಶಾ ಎಚ್ಚರಿಕೆ ನೀಡಿ ದ್ದಾರೆ. ಕ್ಯಾತಮಾರನಹಳ್ಳಿ ರಾಜು ಕುಟುಂಬದವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 24 ಮಂದಿ ಹತ್ಯೆಯಾಗಿದ್ದು, ಮುಂದೆ ಬಿಜೆಪಿ ಅಧಿಕಾರಕ್ಕೆ ಬಂದರೆ ಹಂತಕರನ್ನು ಜೈಲಿಗೆ ತಳ್ಳಿ ಶಿಕ್ಷೆ ಕೊಡಿಸಲಾಗುವುದು ಎಂದರು.

ಟಾಪ್ ನ್ಯೂಸ್

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.