ಟಿಕೆಟ್ ಸಿಗದಕ್ಕೆ ಬಿಜೆಪಿ ಬಿಡುತ್ತಿದ್ದೇನೆ
Team Udayavani, Apr 8, 2018, 12:53 PM IST
ತಿ.ನರಸೀಪುರ: ಬಿಜೆಪಿಯಲ್ಲಿ ದಶಕಕ್ಕೂ ಹೆಚ್ಚು ದುಡಿದವರನ್ನು ಕಡೆಗಣಿಸಿ, ಹೊರಗಿನವರಿಗೆ ಮಣೆ ಹಾಕುತ್ತಿರುವ ಕಾರಣ ಮನನೊಂದು ಪಕ್ಷ ತೊರೆಯುತ್ತಿದ್ದೇನೆ ಎಂದು ಜಿಲ್ಲಾ ಮಾಧ್ಯಮ ಪ್ರಮುಖ್ ತೋಟದಪ್ಪ ಬಸವರಾಜು ಹೇಳಿದರು.
ತಮ್ಮ 54ನೇ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದ ಗುಂಜಾ ನರಸಿಂಹಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿ ಮಾತನಾಡಿ, ಮೂರು ಅವಧಿಗೆ ಬಿಜೆಪಿ ಕ್ಷೇತ್ರಾಧ್ಯಕ್ಷನಾಗಿ ನಿಷ್ಠೆಯಿಂದ ದುಡಿದ್ದೇನೆ. ಎರಡು ಚುನಾವಣೆಯಲ್ಲಿ ವರುಣಾದಲ್ಲಿ ಟಿಕೆಟ್ ನೀಡದ್ದಕ್ಕೆ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ.
ಆದರೆ, ಆರ್‌ಎಸ್‌ಎಸ್‌ನಲ್ಲಿ ಮುಂದುವರಿಯುತ್ತೇನೆ ಎಂದು ಹೇಳಿದರು. ಸಚಿವ ಡಾ.ಎಚ್.ಸಿ.ಮಹದೇವಪ್ಪಗೆ ರಾಜಕೀಯ ಭವಿಷ್ಯ ನೀಡಿದ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಪ್ರಜಾnವಂತ, ಸ್ವಾಭಿಮಾನಿ ಮತದಾರರು ಇದ್ದಾರೆ.
ಹೀಗಾಗಿ ಯಾವುದೇ ಕಾರಣಕ್ಕೂ ಹೊರಗಿನವರಿಗೆ ಪಕ್ಷದ ಟಿಕೆಟ್ ಕೊಡಬೇಡಿ. ಸ್ಥಳೀಯರಲ್ಲಿ ಓಡನಾಟ ಇಟ್ಟುಕೊಂಡ ನಿಷ್ಠಾವಂತರಿಗೆ ಅವಕಾಶ ನೀಡಬೇಕು ಎಂದು ಬಸವರಾಜು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.