ಹಸುವಿನಕಾವಲು ಕಲ್ಲು ತುಂಬಿದ್ದ ಲಾರಿಗಳ ವಶ
Team Udayavani, May 19, 2017, 12:19 PM IST
ಪಿರಿಯಾಪಟ್ಟಣ: ಅಪಾರ ಪ್ರಮಾಣದಲ್ಲಿ ಕಲ್ಲು ತುಂಬಿ ರಸ್ತೆಯಲ್ಲಿ ಸಾಗಿಸುತ್ತಿದ್ದ ಲಾರಿಗಳನ್ನು ಹುಣಸೂರು ಉಪವಿಭಾಗಾಧಿಕಾರಿ ಸೌಜನ್ಯ ವಶಕ್ಕೆ ತೆಗೆದುಕೊಂಡಿರುವ ಘಟನೆ ನಡೆದಿದೆ.
ತಾಲೂಕಿನ ಹಸುವಿನಕಾವಲು ಗ್ರಾಮದ ಸಮೀಪದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯ ಸ್ಥಳದಿಂದ ಹಾರಂಗಿ ಕಾಲುವೆಯ ರಸ್ತೆಯ ಮೂಲಕ ಮುಖ್ಯ ರಸ್ತೆಗೆ ತಲುಪಿ ಯಾವುದೇ ಅನುಮತಿ ಪಡೆಯದೆ ಅನಧಿಕೃತವಾಗಿ ಈ ಲಾರಿಗಳು ಸಂಚರಿಸುತ್ತಿದ್ದವು ಎನ್ನಲಾಗಿದೆ.
ಅಷ್ಟೇ ಅಲ್ಲದೆ ಕೇರಳ ರಾಜ್ಯದಲ್ಲಿ ನೋಂದಾಯಿತ ಲಾರಿಗಳಾಗಿದ್ದು ಕರ್ನಾಟಕದಲ್ಲಿ ಯಾವುದೇ ಅನುಮತಿ ಮತ್ತು ನೋಂದಾಯಿಸದೆ ರಾಜಾರೋಷವಾಗಿ ಅಧಿಕವಾಗಿ ಕಲ್ಲು, ಜಲ್ಲಿಗಳನ್ನು ತುಂಬಿ ಸಾಗಿಸಲಾಗುತ್ತಿತ್ತು. ಇದರಿಂದ ರಸ್ತೆಗಳು ಹಾಳಾಗುತ್ತಿದ್ದವು ಎಂದು ದೂರಲಾಗಿದೆ.
ಕುಶಾಲನಗರ ಮೂಲದ ದಿನೇಶ್ ಎಂಬುವರ ಲಾರಿಗಳಾಗಿದ್ದು ಈ ಲಾರಿಗಳನ್ನು ಬೆಟ್ಟದಪುರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದ್ದು ಸರಿಯಾದ ಅನುಮತಿ ಪಡೆಯುವವರೆಗೂ ಲಾರಿಗಳನ್ನು ಮಾಲೀಕರಿಗೆ ಒಪ್ಪಿಸಬಾರದು ಎಂದು ಉಪವಿಭಾಗಾಧಿಕಾರಿ ಸೌಜನ್ಯ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.