ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಧರಣಿ 


Team Udayavani, Feb 9, 2018, 11:51 AM IST

m6-guttige.jpg

ಹುಣಸೂರು: ನಗರಸಭೆಯ ಗುತ್ತಿಗೆ ಪೌರಕಾರ್ಮಿಕರಿಗೆ ಕಳೆದ 5 ತಿಂಗಳಿಂದ ವೇತನ ನೀಡದಿರುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರು ಹಾಗೂ ಗುತ್ತಿಗೆ ನೌಕರರು ಗುರುವಾರ ಹುಣಸೂರು ನಗರಸಭೆ ವಿರುದ್ಧ ಪ್ರತಿಭಟನೆ ನಡೆಸಿದರು.

ನಗರದ ಮುನೇಶ್ವರಕಾವಲ್‌ ಮೈದಾನದಲ್ಲಿ ಪ್ರತಿಭಟನಾ ಧರಣಿ ನಡೆಸಿದ ಪೌರಕಾರ್ಮಿಕರು ನಗರಸಭೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಧರಣಿಯಲ್ಲಿ ಮಾತನಾಡಿದ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಮುರುಗೇಶ್‌, ನಗರದ ಸ್ವತ್ಛತೆಗೆ ಹಗಲಿರುಳು ದುಡಿಯುವ ನಮಗೆ ಕಳೆದ 5 ತಿಂಗಳಿನಿಂದ ವೇತನ ನೀಡದೇ ನಗರಸಭೆ ನಮ್ಮನ್ನು ದುಡಿಸಿಕೊಳ್ಳುತ್ತಿದೆ.

ನಮ್ಮ ಕುಟುಂಬ ಸಾಗಿಸುವುದು ಕಷ್ಟವಾಗಿದೆ. ಈ ಕುರಿತಂತೆ ಹಲವಾರು ಬಾರಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ನಗರಸಭೆಯಲ್ಲಿ ನಿವೃತ್ತರಾದ ಪೌರಕಾರ್ಮಿಕರನ್ನು ಗೌರವಯುತವಾಗಿ ಸನ್ಮಾನಿಸಿಯೂ ಕಳಹಿಸದೇ ನಗರಸಭೆ ನಮ್ಮನ್ನು ಅಪಮಾನಿಸಿದೆ. ನಗರಸಭೆಯ ಅಧಿಕಾರಿಗಳು ಅನುಸರಿಸುತ್ತಿರುವ ಈ ತಾರತಮ್ಯ ನಿಲ್ಲಬೇಕು ಹಾಗೂ ಕೂಡಲೇ ನಮಗೆ ಬಾಕಿಯಿರುವ ವೇತನವನ್ನು ನೀಡಬೇಕೆಂದು ಆಗ್ರಹಿಸಿದರು.

ಸೂಕ್ತ ಕ್ರಮದ ಭರವಸೆ: ಸ್ಥಳಕ್ಕಾಗಮಿಸಿ ಮನವಿ ಸ್ವೀಕರಿಸಿದ ನಗರಸಭಾಧ್ಯಕ್ಷ ಎಂ.ಶಿವಕುಮಾರ್‌ ಮಾತನಾಡಿ, ರಾಜಾÂದ್ಯಂತ ಈ ಸಮಸ್ಯೆ ಎದುರಾಗಿದ್ದು, ಪ್ರತಿಭಟನಾಕಾರರು ಸಲ್ಲಿಸಿರುವ ಮನವಿಯನ್ನು ಕೂಡಲೇ ಜಿಲ್ಲಾಧಿಕಾರಿಗಳಿಗೆ ಕಳುಹಿಸಿ ನಂತರ ಅವರ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುವುದೆಂದರು. ಪೌರಾಯುಕ್ತ ಶಿವಪ್ಪನಾಯ್ಕ ಇದ್ದರು. ಪ್ರತಿಭಟನೆಯಲ್ಲಿ ಸಂಘದ ಗೌರವಾಧ್ಯಕ್ಷ ರಾಮ, ಉಪಾಧ್ಯಕ್ಷ ರಮೇಶ್‌, ಮುಖಂಡರಾದ ನಾಗರಾಜ್‌, ಮುತ್ತಯ್ಯ, ಮಾಗಳಿ ದಿನೇಶ್‌, ಸುನಿಲ್‌ ಕುಮಾರ್‌, ಕೆ.ರವಿ, ಎಚ್‌.ಎಂ.ಕೃಷ್ಣ ಸೇರಿದಂತೆ ವಾಹನ ಚಾಲಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.