ದೇಶದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ಯುಗ: ವಿಶ್ವನಾಥ್
Team Udayavani, Apr 9, 2019, 3:00 AM IST
ಕೆ.ಆರ್.ನಗರ: ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬಾರದೇ ದೇಶದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರದ ಯುಗ ಆರಂಭವಾಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಹುಣಸೂರು ಶಾಸಕ ಎಚ್.ವಿಶ್ವನಾಥ್ ಹೇಳಿದರು.
ಪಟ್ಟಣದ ತಮ್ಮ ನಿವಾಸದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೂ ಪಂಚಾಯ್ತಿ ಚುನಾವಣೆಗೂ ವ್ಯತ್ಯಾಸವಿಲ್ಲದಂತಾಗಿದ್ದು, 130 ಕೋಟಿ ಜನರ ಬದುಕಿನ ದಿಕ್ಕನ್ನು ಬದಲಾಯಿಸುವ ಮಹಾ ಚುನಾವಣೆ ಇಷ್ಟೊಂದು ಕೆಳ ಮಟ್ಟಕ್ಕೆ ಇಳಿಯುತ್ತಿರುವುದು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ ಇಟ್ಟಂತಾಗಿದೆ ಎಂದು ವಿಷಾದಿಸಿದರು.
ದುರುಪಯೋಗ: ಇಷ್ಟು ವರ್ಷಗಳ ಕಾಲ ಚುನಾವಣೆಗಳಲ್ಲಿ ಜಾತಿ, ಧರ್ಮ ಮತ್ತು ಬಡತನ ದುರ್ಬಳಕೆಯಾಗುತ್ತಿತ್ತು. ಆದರೆ, ಈಗ ಬಿಜೆಪಿಯವರು ಅದನ್ನು ಮೀರಿ ರಕ್ಷಣಾ ಇಲಾಖೆಯನ್ನು ಚುನಾವಣಾ ಕಾರಣಕ್ಕಾಗಿ ದುರುಪಯೋಗ ಮಾಡಿಕೊಳ್ಳುತ್ತಿದ್ದು, ಇದು ದೇಶದ ದುರಂತ ಎಂದರು.
2014ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರ ಸುಳ್ಳಿನ ಸಾಗರಕ್ಕೆ ಅಣೆಕಟ್ಟೆ ಕಟ್ಟಲು ಕಾಂಗ್ರೆಸ್ ವಿಫಲವಾಯಿತು. ಹೀಗಾಗಿ ಈಗ ಆ ಪಕ್ಷ ಅದರ ಪ್ರತಿಫಲ ಉಣ್ಣುತ್ತಿದೆ ಎಂದರು. ಮೈಸೂರು ಮತ್ತು ಮಂಡ್ಯ ಕ್ಷೇತ್ರಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ಹೊಂದಾಣಿಕೆಯಾಗುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ಪಕ್ಷಗಳವರೇ ತಿಳಿದುಕೊಂಡು ಮತ ಚಲಾಯಿಸಬೇಕು ಎಂದರು.
ಕೆ.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಿಖೀಲ್ ಪರ ಪ್ರಚಾರಕ್ಕೆ ಬರುತ್ತಿಲ್ಲವಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್, ಚುನಾವಣೆ ಎಂದ ಮೇಲೆ ರಾಜಕೀಯ ವೈರಿಗಳು ಒಂದಾಗಬೇಕು. ಇದಕ್ಕೆ ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಉದಾಹರಣೆ. ಆ ಕೆಲಸವನ್ನು ಸ್ಥಳೀಯ ಶಾಸಕರು ಮಾಡಬೇಕು ಎಂದರು.
ಉತ್ತಮ ಭಾಷೆ ಬಳಸಿ: ಚುನಾವಣಾ ಪ್ರಚಾರ ಕಣದಲ್ಲಿ ಮುಖಂಡರು ಬಳಸುವ ಭಾಷೆಯ ಮೇಲೆ ಹಿಡಿತವಿರಬೇಕು. ಪರಸ್ಪರರನ್ನು ಟೀಕಿಸುವಾಗ ಪಕ್ಷದ ವಿಚಾರಗಳನ್ನು ಮಾತ್ರ ಮಾತನಾಡಬೇಕು. ಎಲ್ಲೆ ಮೀರಿದರೆ ಆ ಮೂಲಕ ಕನ್ನಡ ಭಾಷೆಯ ಕೊಲೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಲೋಕಸಭಾ ಚುಣಾವಣೆಯಲ್ಲಿ ರಾಜ್ಯದ 28 ಸ್ಥಾನಗಳ ಪೈಕಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟ ಬಿಜೆಪಿಗಿಂತ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ವಿಶ್ವನಾಥ್ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ನಗರ ಜೆಡಿಎಸ್ ಕಾರ್ಯಾಧ್ಯಕ್ಷ ಎಂ.ಕೆ.ಮಹದೇವ್, ಪುರಸಭೆ ಮಾಜಿ ಉಪಾಧ್ಯಕ್ಷ ಶಿವಶಂಕರ್, ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕ ಕೃಷ್ಣಶೆಟ್ಟಿ, ಜೆಡಿಎಸ್ ಮುಖಂಡ ಶಿವಾಜಿ ಗಣೇಶನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.