ಆರ್ಥಿಕತೆಗೆ ಅವಳಿ ಕಟ್ಟಡಗಳ ಕೊಡುಗೆ ಅಪಾರ


Team Udayavani, Aug 25, 2019, 3:00 AM IST

mys-abhiyaan

ಮೈಸೂರು: ಕಳೆದ ಹತ್ತಿಪ್ಪತ್ತು ವರ್ಷಗಳ ಹಿಂದೆ ವಾಣಿಜ್ಯಾತ್ಮಕವಾಗಿ ಉತ್ತುಂಗದಲ್ಲಿದ್ದ ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್‌ಡೌನ್‌ ಬಿಲ್ಡಿಂಗ್‌ ಮೈಸೂರು ಆರ್ಥಿಕತೆಯ ಕೇಂದ್ರವಾಗಿದ್ದವು. ನಗರದಲ್ಲಿ ಶತಮಾನದಿಂದ ವಾಣಿಜ್ಯಾತ್ಮಕವಾಗಿ ನಗರದ ಅರ್ಥಿಕತೆ ಸದೃಢಗೊಳಿಸುವಲ್ಲಿ ಈ ಎರಡೂ ಕಟ್ಟಡಗಳದ್ದು ಸಿಂಹಪಾಲು. ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಹಾಗೂ ವಾಣಿಜ್ಯಾತ್ಮಕವಾಗಿ ಮೈಸೂರಿಗೆ ಕಾಣಿಕೆ ನೀಡಿದ ಅವಳಿಕಟ್ಟಡಗಳಾಗಿವೆ. ಏಕೆಂದರೆ 20 ವರ್ಷಗಳ ಹಿಂದೆ ಮಾಲ್‌, ವಾಣಿಜ್ಯ ಮಳಿಗೆಗಳು ಇಲ್ಲದ ಸಂದರ್ಭ ಈ ಕಟ್ಟಡಗಳಲ್ಲಿ ನಡೆಯುತ್ತಿದ್ದ ವಾಣಿಜ್ಯ ವ್ಯವಹಾರಗಳು ಮೈಸೂರಿನ ಆರ್ಥಿಕತೆಯ ವೇಗ ಹೆಚ್ಚಿಸಿದ್ದವು.

ಈ ಎರಡೂ ಕಟ್ಟಡಗಳು ನಗರದ ಹೃದಯ ಭಾಗದಲ್ಲಿರುವುದರಿಂದ ವ್ಯಾಪಾರ ವಹಿವಾಟು ಹೆಚ್ಚಾಗಲು ಕಾರಣವಾಗಿದ್ದಲ್ಲದೇ, ಆರ್ಥಿಕತೆಯ ಬೆಳವಣಿಗೆ ನೆರವಾಯಿತು. ಡಿ. ದೇವರಾಜ ಅರಸು ರಸ್ತೆ, ಸಯ್ನಾಜಿರಾವ್‌ ರಸ್ತೆ ಸೇರಿದಂತೆ ಅಕ್ಕಪಕ್ಕದ ಪ್ರದೇಶಗಳು ಪ್ರಮುಖವಾಗಿ ವಾಣಿಜ್ಯ ಕಟ್ಟಡಗಳು ಇಂದು ಮುನ್ನೆಲೆಗೆ ಬರಲು ಈ ಅವಳಿ ಕಟ್ಟಡಗಳೇ ಕಾರಣ. ಒಂದು ವೇಳೆ ಈ ಕಟ್ಟಡಗಳು ಇಲ್ಲದಿದ್ದರೆ, ದೇವರಾಜ ಅರಸು ರಸ್ತೆ, ಸಯ್ನಾಜಿ ರಾವ್‌ ರಸ್ತೆ, ಧನ್ವಂತಿರಿ ರಸ್ತೆ ಈ ಮಟ್ಟಕ್ಕೆ ಅಭಿವೃದ್ಧಿಯಾಗುತ್ತಿರಲಿಲ್ಲ ಎಂಬುದು ಇತಿಹಾಸ ತಜ್ಞರ ಅಭಿಪ್ರಾಯ.

ಲ್ಯಾನ್ಸ್‌ಡೌನ್‌ ಕಟ್ಟಡದಲ್ಲಿ ಇದ್ದ 200ಕ್ಕೂ ಹೆಚ್ಚು ಮಳಿಗೆಗಳಲ್ಲಿ ವ್ಯಾಪಾರ ವಹಿವಾಟು ಜೋರಾಗಿತ್ತು. ಬೆಳಗ್ಗೆಯಿಂದ ರಾತ್ರಿವರೆಗೆ ಸದಾ ಜನದಟ್ಟಣೆಯಿಂದ ಕೂಡಿದ್ದ ಪ್ರದೇಶವಾಗಿತ್ತು. ಇದರಂತೆ ದೇವರಾಜ ಮಾರುಕಟ್ಟೆಯೂ ವಾಣಿಜ್ಯ ದೃಷ್ಟಿಯಿಂದ ಹೆಚ್ಚು ಮಹತ್ವ ಪಡೆದುಕೊಂಡ ಸ್ಥಳ. ಆದರೆ ಈ ಎರಡೂ ಅವಳಿ ಕಟ್ಟಡಗಳು ಸಮರ್ಪಕ ನಿರ್ವಹಣೆ ಕೊರತೆಯಿಂದ ಶಿಥಿಲಗೊಂಡು ಬೀಳುವ ಸ್ಥಿತಿಯಲ್ಲಿವೆ.

ಅವಳಿ ಕಟ್ಟಡ ಉಳಿವಿಗೆ ಯದುವೀರ್‌ ಬೆಂಬಲ: ಈ ಎರಡೂ ಅವಳಿ ಕಟ್ಟಡಗಳ ಅಳಿವು-ಉಳಿವು ಚರ್ಚೆಯ ಕಾವು ಹೆಚ್ಚಾಗಿದ್ದು, ಒಂದೆಡೆ ಕಟ್ಟಡವನ್ನು ನೆಲಸಮಗೊಳಿಸಿ, ಅದೇ ಮಾದರಿಯಲ್ಲಿ ಕಟ್ಟಡ ಕಟ್ಟಬೇಕು ಎಂಬ ಅಭಿಪ್ರಾಯ ವ್ಯಕ್ತವಾದರೆ, ಈಗಿರುವ ಕಟ್ಟಡವನ್ನು ಹಂತ ಹಂತವಾಗಿ ನವೀಕರಿಸಿ ಸಂರಕ್ಷಣೆ ಮಾಡಬೇಕು ಎಂಬುದು ಮತ್ತೂಂದು ಬಣದ ಒತ್ತಾಯ. ಇವೆರೆಡರ ಮಧ್ಯೆ ಕಟ್ಟಡವನ್ನು ಉಳಿಸಿಕೊಳ್ಳಬೇಕು ಎಂಬ ಹೋರಾಟವೂ ರೂಪುಗೊಂಡಿದೆ. ಇದಕ್ಕೆ ರಾಜವಂಶಸ್ಥ ಕೃಷ್ಣದತ್ತ ಚಾಮರಾಜ ಒಡೆಯರ್‌ ಕೂಡ ಬೆಂಬಲ ನೀಡಿದ್ದಾರೆ.

ಇತ್ತೀಚೆಗೆ ಮಾರುಕಟ್ಟೆಗೆ ದಂಪತಿ ಭೇಟಿ ನೀಡಿ ಕಟ್ಟಡವನ್ನು ಪೂರ್ಣ ವೀಕ್ಷಿಸುವುದರ ಜೊತೆಗೆ, ಅಲ್ಲಿನ ವ್ಯಾಪಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ಯಾವುದೇ ಕಾರಣಕ್ಕೂ ಮಾರುಕಟ್ಟೆ ಕೆಡವಿ ಹೊಸ ಕಟ್ಟಡ ನಿರ್ಮಿಸಕೂಡದು. ಮಾರುಕಟ್ಟೆಯನ್ನು ನವೀಕರಿಸಿದರೆ, ಕನಿಷ್ಠ 100 ವರ್ಷಗಳ ಕಾಲ ಬಾಳಿಕೆ ಬರುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಪಾರಂಪರಿಕ ತಜ್ಞರು ಕಟ್ಟಡವನ್ನು ಸೂಕ್ತವಾಗಿ ಪರಿಶೀಲನೆ ನಡೆಸಬೇಕು. ಮಾರುಕಟ್ಟೆ ಮೈಸೂರಿನ ಪ್ರಮುಖ ಗುರುತು. ಹೀಗಾಗಿ ಇದನ್ನು ಉಳಿಸಿಕೊಳ್ಳುವ ಅಗತ್ಯವಿದೆ. ಸರ್ಕಾರದ ತೀರ್ಮಾನದ ಬಳಿಕ ನಮ್ಮ ನಿರ್ಧಾರ ಪ್ರಕಟಿಸುತ್ತೇವೆ. ಜೊತೆಗೆ ಯಾವುದೇ ಕಾರಣಕ್ಕೂ ವ್ಯಾಪಾರಿಗಳ ಕೈಬಿಡುವುದಿಲ್ಲ ಎಂದು ಹೇಳಿದ್ದರು. ಇದರಿಂದ ಕಟ್ಟಡ ಉಳಿಸಿಕೊಳ್ಳುವ ಹೋರಾಟಕ್ಕೆ ಮತ್ತಷ್ಟು ಚೈತನ್ಯ ಸಿಕ್ಕಿದಂತಾಗಿದೆ.

ತಂತ್ರಜ್ಞಾನದಿಂದ ಕಟ್ಟಡ ಉಳಿಸಿ: ಜನಪ್ರತಿನಿಧಿಗಳು ಹೆಚ್ಚಿನ ಆಸಕ್ತಿ ವಹಿಸಿ ಸರ್ಕಾರದಿಂದ ಹಣ ತಂದು ಸದ್ಯ ಇರುವ ಕಟ್ಟಡವನ್ನು ಉಳಿಸಿಕೊÛಬೇಕು. ಈಗಾಗಲೆ ವಿಶ್ವದಾದ್ಯಂತ ನಾನಾ ತಾಂತ್ರಜ್ಞಾನವನ್ನು ಅಳವಡಿಸಿಕೊಂಡು ಕಟ್ಟಡಗಳನ್ನು ಇರುವ ಸ್ಥಿತಿಯಲ್ಲಿಯೆ ಅಭಿವೃದ್ಧಿಪಡಿಸಿ¨ªಾರೆ. ಅದನ್ನೆ ನಾವೂ ಮಾದರಿಯಾಗಿಟ್ಟುಕೊಂಡು ಎರಡೂ ಕಟ್ಟಡಗಳನ್ನು ನವೀಕರಿಸಬಹುದು. ಇಚ್ಛಾಶಕ್ತಿ ಇದ್ದರೆ ಯಾವುದೂ ಅಸಾಧ್ಯವಲ್ಲ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ನಮ್ಮ ಪರಂಪರೆಯನ್ನು ಉಳಿಸಿಕೊಳ್ಳಬೇಕು ಎಂಬ ಕನಿಷ್ಠ ಪ್ರಜ್ಞೆ ಬೇಕು ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಟ್ಟಡ ನಿರ್ವಹ‌ಣೆಯಾದರೆ ಇನ್ನೂ 100 ವರ್ಷ ಬಾಳಿಕೆ…
1886ರಲ್ಲಿ ಗವರ್ನರ್‌ ಲ್ಯಾನ್ಸ್‌ಡೌನ್‌ ಭೇಟಿ ನೆನಪಿಗಾಗಿ ನಿರ್ಮಿಸಿದ ಲ್ಯಾನ್ಸ್‌ಡೌನ್‌ ಕಟ್ಟಡ ಇಂದಿನ ಶಿವರಾಂಪೇಟೆವರೆಗೂ ಹಬ್ಬಿತ್ತು. ನಂತರ ರಸ್ತೆಗಾಗಿ ಕಟ್ಟಡವನ್ನು ತೆರವುಗಳಿಸಲಾಗಿತ್ತು. ಜೊತೆಗೆ ಚಿಕ್ಕದೇವರಾಜ ಒಡೆಯರ್‌ ಕಾಲದಲ್ಲಿ ಸಂತೆಯಾಗಿದ್ದ ದೇವರಾಜ ಮಾರುಕಟ್ಟೆ, 10ನೇ ಚಾಮರಾಜ ಒಡೆಯರ್‌ ಕಾಲದಲ್ಲಿ ಓಪನ್‌ ಮಾರ್ಕೆಟ್‌ ಆಗಿ ಪರಿವರ್ತನೆಯಾಯಿತು. ನಂತರ ನಾಲ್ವಡಿ ಕೃಷ್ಣರಾಜ ಒಡೆಯರ್‌ ವಾಣಿಜ್ಯದ ದೃಷ್ಟಿಯಿಂದ ದೇವರಾಜ ಮಾರುಕಟ್ಟೆ ನಿರ್ಮಿಸಿದರು. ಆದರೆ ಈ ಎರಡೂ ಕಟ್ಟಡಗಳು ನಿರ್ವಹಣೆ ಇಲ್ಲದೇ ಶಿಥಿಲಗೊಳ್ಳುತ್ತಿವೆ. ಸಮರ್ಪಕವಾಗಿ ನಿರ್ವಹಣೆ ಮತ್ತು ಸಂರಕ್ಷಣೆ ಮಾಡಿದರೆ ಇನ್ನೂ ನೂರು ವರ್ಷಗಳ ಕಾಲ ಗಟ್ಟಿಯಾಗಿರುತ್ತವೆ. ಆದರೆ ಕೆಲವರಿಗೆ ಈ ಎರಡೂ ಕಟ್ಟಡಗಳನ್ನು ಕೆಡವಿ ಹೊಸ ಕಟ್ಟಡ ನಿರ್ಮಿಸಬೇಕೆಂಬ ಹಠ. ಮಾರುಕಟ್ಟೆ ಕಟ್ಟಡ ಕುಸಿತ ಮಾನವ ಪ್ರೇರಿತವಾದುದು.
-ಈಚನೂರು ಕುಮಾರ್‌, ಇತಿಹಾಸ ತಜ್ಞ

* ಸತೀಶ್‌ ದೇಪುರ

ಟಾಪ್ ನ್ಯೂಸ್

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-snehamayi

Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

20-health

Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್‌; ಹೆತ್ತವರು ತಿಳಿದಿರಬೇಕಾದ ಅಂಶಗಳು

19-health

Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.