ನಾಡಿದ್ದು ಶ್ರೀ ದುರ್ಗಾ ಪರಮೇಶ್ವರಿ ಕಿತ್ತೂರಮ್ಮನ ಜಾತ್ರಾ ಮಹೋತ್ಸವ
Team Udayavani, Mar 5, 2017, 12:28 PM IST
ಪಿರಿಯಾಪಟ್ಟಣ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿತ್ತೂರು ಗ್ರಾಮದ ಹಾಗೂ ಸುತ್ತಮುತ್ತಲ 18 ಗ್ರಾಮಗಳ ಗ್ರಾಮ ದೇವತೆ ಶ್ರೀ ದುರ್ಗಾ ಪರಮೇಶ್ವರಿ ಕಿತ್ತೂರಮ್ಮನವರ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವು ಮಂಗಳವಾರ (ಮಾ.7)ದಂದು ಬೆಳಗ್ಗೆ 11 ಗಂಟೆಗೆ ದಶಮಿ ಲಗ್ನದಲ್ಲಿ ವಿಜೃಂಭಣೆಯಿಂದ ನೆರವೇರಲಿದೆ.
ಸೋಮವಾರ ಕಿತ್ತೂರಮ್ಮನ ದೇವರನ್ನು ದೇವಸ್ಥಾನದಿಂದ ಚುಂಚನಕಟ್ಟೆ ಹೊಳೆಗೆ ಭಕ್ತಾದಿಗಳು ತೆಗೆದುಕೊಂಡು ಹೋಗಿ ದೇವರನ್ನು ಮಡಿ ಮಾಡಿಕೊಂಡು ನಂತರ ದಾರಿಯುದ್ದಕ್ಕೂ ಕಿತ್ತೂರಮ್ಮ ದೇವರನ್ನು ಪೂಜಿಸಿಕೊಂಡು ದೇವಸ್ಥಾನಕ್ಕೆ ತರುತ್ತಾರೆ.
ಮಂಗಳವಾರ ಕಿತ್ತೂರು ಹಾಗೂ ಸುತ್ತಮುತ್ತಲ 18 ಕೊಪ್ಪಲುಗಳ ವಿವಿಧ ಕೋಮುಗಳ ಮುಖಂಡರ ಮುಂದಾಳತ್ವದಲ್ಲಿ ದೇವರನ್ನು ದೇವಸ್ಥಾನ ದಿಂದ ಮೆರವಣಿಗೆಯಲ್ಲಿ ಹೊತ್ತು ತಂದು ಅಲಂಕರಿಸಿದ ರಥದಲ್ಲಿ ಕುಳ್ಳರಿಸಿದ ನಂತರ ರಥೋತ್ಸವ ನಡೆಯಲಿದೆ.
1928ರಲ್ಲಿ ಮೈಸೂರಿನ ಮಹಾರಾಜ ರಾದ ಕೃಷ್ಣರಾಜೇಂದ್ರ ಒಡೆಯರ್ ಅವರಿಂದ ಗ್ರಾಮದಲ್ಲಿ ಪ್ರತಿಷ್ಠಾಪನೆಗೊಂಡ ಕಿತ್ತೂರಮ್ಮ ದೇವತೆಯ ರಥೋತ್ಸವವನ್ನು ಅಂದಿನಿಂದ ಪ್ರತಿ ವರ್ಷ ನಡೆಸಿಕೊಂಡು ಬರಲಾಗುತ್ತಿದೆ. ಜಾತ್ರಾ ಮಹೋತ್ಸವಕ್ಕೆ ಬರುವ ಸಹಸ್ರಾರು ಭಕ್ತರಿಗೆ ಅನ್ನ ಸಂತರ್ಪಣೆ, ಪಾನಕ, ಮಜ್ಜಿಗೆ ಮತ್ತಿತರ ವಿತರಣೆಯನ್ನು ಏರ್ಪಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.