ಹದಗೆಟ್ಟ ರಸ್ತೆ ದುರಸ್ತಿ ಗೆ ಇಲಾಖೆ ನಿರಾಸಕ್ತಿ

Team Udayavani, Nov 8, 2019, 4:39 PM IST

mysore-tdy-1

ಕೆ.ಆರ್‌.ನಗರ: ಎರಡು ತಾಲೂಕುಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು ಹದಗೆಟ್ಟಿದ್ದು, ಉಪಯೋಗಕ್ಕೆ ಬಾರದಂತಹ ಸ್ಥಿತಿ ನಿರ್ಮಾಣವಾಗಿದ್ದರೂ ಇದನ್ನು ಅಭಿವೃದ್ಧಿ ಪಡಿಸಲು ಅಧಿಕಾರಿಗಳು ಹಾಗೂ ಜನಪ್ರತಿ ನಿಧಿಗಳು ನಿರ್ಲಕ್ಷ್ಯವಹಿಸಿದ್ದಾರೆ.

ಕೆ.ಆರ್‌.ನಗರ ತಾಲೂಕಿನಿಂದ ಪಿರಿಯಾ ಪಟ್ಟಣ ತಾಲೂಕಿಗೆ ಸಂಪರ್ಕ ಕಲ್ಪಿಸುವ ಹೊಸಕೋಟೆ-ಕೆಲ್ಲೂರು ರಸ್ತೆ ಸುಮಾರು2 ಕಿ.ಮೀ. ಉದ್ದವಿದ್ದು, ಈ ರಸ್ತೆ ಲೋಕೋಪ ಯೋಗಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಗಾಗಿ ಪ್ರಯಾಣಿಕರು ಹಾಗೂ ವಾಹನ ಸವಾರರು ನರಕಯಾತನೆ ಅನುಭವಿಸುವಂತಾಗಿದೆ.

ಈ ರಸ್ತೆಯು ಕೆ.ಆರ್‌.ನಗರ ಹಾಗೂ ಪಿರಿಯಾಪಟ್ಟಣ ತಾಲೂಕಿಗೆ ಸಂಬಂಧಿಸಿದ್ದಾಗಿದ್ದು, ಎರಡೂ ತಾಲೂಕಿನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ. ಈ ರಸ್ತೆ ತಮಗೆ ಸಂಬಂಧಿಸಿದ್ದಲ್ಲ ಎಂದು ಅಂತರ ಕಾಯ್ದುಕೊಳ್ಳುತ್ತಿರುವುದರಿಂದ ಈ ಅವ್ಯವಸ್ಥೆ ಉಂಟಾಗಿದೆ. ಇವರುಗಳ ಈ ಧೋರಣೆಯಿಂದ ರಸ್ತೆ ಅಭಿವೃದ್ಧಿ ಆಗುತ್ತಿಲ್ಲ. ಇದರಿಂದ ಎರಡೂ ತಾಲೂಕಿನ ವಾಹನ ಸವಾರರು ರೋಸಿ ಹೋಗಿದ್ದಾರೆ. ತಾಲೂಕಿನ ಹೊಸಕೋಟೆ, ನಿಜಗನಹಳ್ಳಿ, ಮಾವತ್ತೂರು ಸೇರಿದಂತೆ ಇನ್ನೂ ಹತ್ತು ಹಲವು ಗ್ರಾಮಗಳ ಜನತೆ ಪಿರಿಯಾಪಟ್ಟಣ ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಲು ಈ ರಸ್ತೆಯನ್ನೇ ಬಹುತೇಕವಾಗಿ ಅವಲಂಬಿಸಿದ್ದಾರೆ.

ಆದರೆ, ರಸ್ತೆ ತೀರಾ ಹದಗೆಟ್ಟಿದ್ದು, ಎಲ್ಲಿ ನೋಡಿದರೂ ಗುಂಡಿಗಳು ಬಿದ್ದಿರುವುದು ಕಂಡು ಬರುತ್ತದೆ. ಈ ಅವ್ಯವಸ್ಥೆಗೆ ಪ್ರತಿದಿನ ಸಾರ್ವಜನಿಕರು ಹಿಡಿಶಾಪ ಹಾಕುವುದು ಸಾಮಾನ್ಯವಾಗಿದೆ. ರಸ್ತೆಯಲ್ಲಿ ಕೆಲವು ಕಡೆ ಡಾಂಬರು ಇಲ್ಲದಂತೆ ಕಿತ್ತು ಬಂದು ಕಲ್ಲುಮಯ ರಸ್ತೆಯಾಗಿ ಮಾರ್ಪಟ್ಟಿರುವುದರಿಂದ ಹಗಲಿನ ವೇಳೆ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಮಾಡಬೇಕಿದೆ. ರಾತ್ರಿ ವೇಳೆ ಸ್ವಲ್ಪ ಮೈ ಮರೆತರೂ ಅಪಘಾತ ತಪ್ಪಿದ್ದಲ್ಲ. ಕಾಲಕಾಲಕ್ಕೆ ಇಲಾಖೆಯ ಅಭಿಯಂತರರು ಈ ರಸ್ತೆ ಹದಗೆಟ್ಟ ಸಂದರ್ಭದಲ್ಲಿ ದುರಸ್ತಿಪಡಿಸಲು ಸಕಾಲದಲ್ಲಿ ಗಮನಹರಿಸದ ಪರಿಣಾಮ ರಸ್ತೆ ಇಂತಹ ದುಸ್ಥಿತಿ ತಲುಪಿದೆ. ಕೂಡಲೇ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಹದಗೆಟ್ಟಿರುವ ಕೆ.ಆರ್‌.ನಗರ ತಾಲೂಕಿನಿಂದ ಪಿರಿಯಾಪಟ್ಟಣ ತಾಲೂಕಿಗೆ ಸಂಪರ್ಕ ಕಲ್ಪಿಸುವ ಹೊಸಕೋಟೆ-ಕೆಲ್ಲೂರು ರಸ್ತೆಗೆ ಅಭಿವೃದ್ಧಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

-ಗೇರದಡ ನಾಗಣ್ಣ

ಟಾಪ್ ನ್ಯೂಸ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.