ಶ್ರೀಕಂಠನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ
Team Udayavani, Mar 5, 2019, 7:51 AM IST
ನಂಜನಗೂಡು: ಮಹಾಶಿವರಾತ್ರಿ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇಗುಲಕ್ಕೆ ಸೋಮವಾರ ಭಕ್ತ ಸಮೂಹ ಸಾಗರೋಪಾದಿಯಲ್ಲಿ ಹರಿದು ಬಂದಿತು. ಕಪಿಲೆ ನದಿಯಲ್ಲಿ ಮಿಂದೆದ್ದು, ಸರದಿಯಲ್ಲಿ ನಿಂತು ಶ್ರೀಕಂಠನ ದರ್ಶನ ಪಡೆದು ಧನ್ಯತೆ ಮೆರೆದರು.
ಶಿವರಾತ್ರಿ ಪ್ರಯುಕ್ತ ದೇವಸ್ಥಾನದಲ್ಲಿ ಬೆಳಗಿನ ಜಾವ 4.30ರಿಂದ ರುದ್ರಾಭಿಷೇಕ, ಬಿಲ್ವಪತ್ರೆ ಅಭಿಷೇಕ, ಪಂಚತೀರ್ಥಗಳ ಅಭಿಷೇಕ, ಪಂಚಾಮೃತಾಭಿಷೇಕ, ಶಾಲ್ಯಾನ್ನ ಅಭಿಷೇಕ ಮತ್ತಿತರ ಧಾರ್ಮಿಕ ಕೈಂಕರ್ಯಗಳು ಜರುಗಿದವು.
ದೇವಾಲಯದಲ್ಲಿ 30 ಹಾಗೂ 100 ರೂ. ಗಳ ವಿಶೇಷ ದರ್ಶನವನ್ನು ಸೋಮವಾರ ರದ್ದುಪಡಿಸಲಾಗಿತ್ತು. ಭಕ್ತರಿಗೆ ದೇವರ ದರ್ಶನಕ್ಕೆ ಸಕಲ ವ್ಯವಸ್ಥೆ ಕಲ್ಪಿಸಲಾಗಿತ್ತು. ದೇವಸ್ಥಾನದ ಆಡಳಿತ ಮಂಡಳಿ ಮತ್ತು ಇಒ ಕುಮಾರಸ್ವಾಮಿ, ಗಂಗಯ್ಯ ಸ್ವತಃ ತಾವೇ ಮುಂದೆ ನಿಂತು ಭಕ್ತರ ನೇರ ದರ್ಶನಕ್ಕೆ ಅನುಕೂಲ ಕಲ್ಪಿಸಿದರು.
ನಂಜನಗೂಡಿನ ಹೊರವಲಯದ ಶರಣ ಸಂಘ ಮಠದಲ್ಲಿ ರುದ್ರಾಕ್ಷಿಯಿಂದ ಅಲಂಕೃತಗೊಂಡ 108 ಶಿವಲಿಂಗಗಳು ಭಕ್ತರ ಮನಸೂರೆಗೊಂಡವು. ಚಿಕ್ಕಯ್ಯನ ಛತ್ರದ ಶ್ರೀ ಪ್ರಸನ್ನ ನಂಜುಂಡೇಶ್ವರ, ಕಪಿಲಾ ತೀರದ ಲಿಂಗಾಭಟ್ಟರ ಕಾಶಿ ವಿಶ್ವನಾಥ ದೇವಾಲಯ, ಕಪಿಲೆ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.