ವಿಜೃಂಭಣೆಯ ದೊಡ್ಡಮ್ಮತಾಯಿ ಜಾತ್ರಾ ಮಹೋತ್ಸವ
Team Udayavani, Apr 7, 2018, 12:50 PM IST
ಪಿರಿಯಾಪಟ್ಟಣ: ತಾಲೂಕಿನ ಗ್ರಾಮದೇವತೆ ದೊಡ್ಡಮ್ಮತಾಯಿ ಜಾತ್ರಾ ಮಹೋತ್ಸವವು ಸಹಸ್ರಾರು ಭಕ್ತರ ನಡುವೆ ವಿಜೃಂಭಣೆಯಿಂದ ನೆರವೇರಿತು. ಯುಗಾದಿ ಹಬ್ಬವಾದ 15ನೇ ದಿನಕ್ಕೆ ಈ ಜಾತ್ರೆಯನ್ನು ಆಚರಿಸಲಾಗುತ್ತಿದೆ. ಮೂರು ಗ್ರಾಮಗಳ 7 ಕೋಮಿನ ಜನರು ಆಚರಿಸುತ್ತಾರೆ.
ಕಳೆದ ಭಾನುವಾರ ಪ್ರಾರಂಭವಾದ ಜಾತ್ರೆಯಲ್ಲಿ ತೊಪ್ಪೆ ಓಕುಳಿ, ಕೊಳದ ಓಕುಳಿ, ನೀರಿನ ಓಕುಳಿ ಹೀಗೆ ರಥೋತ್ಸವದವರೆಗೆ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆದವು. ಗ್ರಾಮದೇವತೆ ದೊಡ್ಡಮ್ಮ ವಿಗ್ರಹವನ್ನು 7 ಕೋಮಿನ ಸಮುದಾಯದವರು ಗುರುವಾರ ಮಧ್ಯರಾತ್ರಿ ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆಗೆ ತೆಗೆದುಕೊಂಡು ಹೋಗಿ ಕಾವೇರಿ ನದಿಯಲ್ಲಿ ಶುಚಿ ಮಾಡಿ ಪೂಜಾ ಕೈಂಕರ್ಯ ನಡೆಸಿ, ನಂತರ ದೇವಾಲಯಕ್ಕೆ ತರಲಾಯಿತು.
ಜಾತ್ರೆಗೆ ಆಗಮಿಸಿದ್ದ ಸಹಸ್ರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ರಥೋತ್ಸವದಲ್ಲಿ ತಾಪಂ ಅಧ್ಯಕ್ಷೆ ನಿರುಪಮಾ, ಕೆಪಿಸಿಸಿ ಸದಸ್ಯ ಡಿ.ಟಿ.ಸ್ವಾಮಿ, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.