ಕನಸು ನನಸು ಮಾಡಿದವರ ಋಣ ತೀರಿಸುವೆ
Team Udayavani, May 27, 2018, 12:31 PM IST
ಮೈಸೂರು: ರಾಜಕೀಯದಲ್ಲಿ ನನ್ನ ಕನಸಿನ ಹುದ್ದೆಯನ್ನು ಪಡೆಯಲು ಶ್ರಮಿಸಿದ ನಿಮ್ಮೆಲ್ಲರ ಋಣ ನನ್ನ ಮೇಲಿದ್ದು, ನನ್ನ ಬದುಕಿನ ಕೊನೆಯವರೆಗೂ ನಿಮ್ಮ ಸೇವೆ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಎಲ್.ನಾಗೇಂದ್ರ ಹೇಳಿದರು.
ಚಾಮರಾಜ ಕ್ಷೇತ್ರದ ಬಿಜೆಪಿ ವತಿಯಿಂದ ವಿಜಯನಗರದ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕ್ಷೇತ್ರದ ನೂತನ ಶಾಸಕರಿಗೆ ಅಭಿನಂದನೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷದಿಂದ ರಾಜಕೀಯದಲ್ಲಿ ತೊಡಗಿಸಿಕೊಂಡಿರುವ ನನ್ನ ಕನಸಿನ ಪದವಿಯನ್ನು ಪಡೆಯಲು ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಶ್ರಮಿಸಿದ್ದಾರೆ.
ಹೀಗಾಗಿ ನಿಮ್ಮ ಸೇವಕನಾಗಿ ಮುಂದಿನ ದಿನಗಳಲ್ಲಿ ಕೆಲಸ ನಿರ್ವಹಿಸಲಿದ್ದು, ಆ ಮೂಲಕ ನೀವು ನೀಡಿರುವ ಅಧಿಕಾರಕ್ಕೆ ಯಾವುದೇ ಚ್ಯುತಿ ಬಾರದಂತೆ ಹಾಗೂ ಶಂಕರಲಿಂಗೇಗೌಡರ ಮಾದರಿಯಲ್ಲಿ ಅಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇನೆ ಎಂದರು.
ಮುಂದೆಯೂ ಬೆಂಬಲಿಸಿ: ಈ ಬಾರಿಯ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದಂತೆ ಮುಂದೆ ನಡೆಯುವ ನಗರ ಪಾಲಿಕೆ ಹಾಗೂ ಪದವೀಧರರ, ಶಿಕ್ಷಣ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕಿದೆ. ಅಲ್ಲದೆ ಮುಂದಿನ ವರ್ಷದಲ್ಲಿ ನಡೆಯುವ ಲೋಕಸಬಾ ಚುನಾವಣೆಯಲ್ಲೂ ಸಹ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಬೇಕಿದೆ ಎಂದು ಹೇಳಿದರು.
ಬಿಎಸ್‌ವೈ ಸಿಎಂ: ರಾಜದ 104 ಕ್ಷೇತ್ರಗಳಲ್ಲಿ ಮತದಾರರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ. ಆದರೆ ಜೆಡಿಎಸ್-ಕಾಂಗ್ರೆಸ್ ಮಾಡಿಕೊಂಡ ಅಪವಿತ್ರ ಮೈತ್ರಿಯಿಂದಾಗಿ ಬಿ.ಎಸ್.ಯಡಿಯೂರಪ್ಪಮುಖ್ಯಮಂತ್ರಿಯಾಗುವುದು ಕೈ ತಪ್ಪಿದೆ. ಆದರೆ ಇದರಿಂದ ಪಕ್ಷದ ಕಾರ್ಯಕರ್ತರು ನಿರಾಶೆಯಾಗದೆ, ಪಕ್ಷದ ಏಳಿಗೆಗಾಗಿ ಕೆಲಸ ಮಾಡಬೇಕಿದೆ. ಇನ್ನೂ ಆರು ತಿಂಗಳಲ್ಲಿ ಮತ್ತೆ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದರು.
ಎನ್.ಆರ್.ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಸಂದೇಶ್‌ಸ್ವಾಮಿ ಮಾತನಾಡಿ, ಕಳೆದ 15 ವರ್ಷದಿಂದ ನಗರಪಾಲಿಕೆ ಸದಸ್ಯರಾಗಿದ್ದ ದಿನದಿಂದಲೂ ನಾಗೇಂದ್ರ ಹಾಗೂ ತಾವು ಉತ್ತಮ ಸ್ನೇಹಿತರಾಗಿದ್ದೇವೆ. ಆದರೆ ದುರಾದೃಷ್ಟವಶಾತ್ ನಾನು ಶಾಸಕನಾಗಿ ಆಯ್ಕೆ ಆಗಲು ಸಾಧ್ಯವಾಗಲಿಲ್ಲ.
ಆದರೂ ಬೇಸರವಿಲ್ಲ ನಾಗೇಂದ್ರ ಅವರು ಶಾಸಕರಾಗಿರುವ ಸಂತಸವಿದೆ. ಮುಂದೆಯೂ ಕಾರ್ಯಕರ್ತರು ಪಕ್ಷ ಸಂಘಟನೆಗೆ ಇದೇ ರೀತಿ ಬೆಂಬಲವಾಗಿ ನಿಂತು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಮುಂದಿನ 30 ವರ್ಷ ಕ್ಷೇತ್ರದ ಶಾಸಕರಾಗಿ ಕ್ಷೇತ್ರದ ಜನರ ಸಮಸ್ಯೆ ಆಲಿಸಿ ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ನಗರಾಧ್ಯಕ್ಷ ಡಾ.ಎಚ್.ಬಿ.ಮಂಜುನಾಥ್, ಮಾಜಿ ವಿಧಾನಪರಿಷತ್ ಸದಸ್ಯ ಡಿ.ಮಾದೇಗೌಡ, ತೋಂಟದಾರ್ಯ, ಮೈ.ವಿ.ರವಿಶಂಕರ್, ಮುಖಂಡರಾದ ಸಿ.ಬಸವೇಗೌಡ, ಮಲ್ಲಪ್ಪಗೌಡ, ಪಾಲಿಕೆ ಸದಸ್ಯರಾದ ವನಿತಾ ಪ್ರಸನ್ನ, ಶಿವಕುಮಾರ್, ಗಿರೀಶ್‌ಪ್ರಸಾದ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಹೊಸ ಸೇರ್ಪಡೆ
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.