ಅಸ್ವಸ್ಥಗೊಂಡಿದ್ದ ಆನೆ ಚಿಕಿತ್ಸೆ ಫಲ ನೀಡದೆ ಸಾವು
Team Udayavani, Apr 28, 2019, 3:00 AM IST
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಹೊಂದಿಕೊಂಡಿರುವ ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗಕ್ಕೆ ಸೇರಿದ ಆನೆ ಚೌಕೂರು ಸೆಕ್ಷನ್‌ನಲ್ಲಿ ಶುಕ್ರವಾರ ನಿತ್ರಾಣ ಗೊಂಡಿದ್ದ ಕಾಡಾನೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯಹ್ನ ಸಾವನ್ನಾಪ್ಪಿದೆ.
ಹುಣಸೂರು-ವಿರಾಜಪೇಟೆ ರಸ್ತೆಯ ಪ್ರಾದೇಶಿಕ ಅರಣ್ಯ ವಿಭಾಗದ ಆನೆ ಚೌಕೂರು ಸೆಕ್ಷನ್‌ನ ಪಿರಿಯಾಪಟ್ಟಣ ವಲಯದ ಜೋಡಿಕಟ್ಟೆ ಕಳ್ಳ ಬೇಟೆ ತಡೆ ಶಿಬಿರದ ಬಳಿ ಸುಮಾರು 45-50 ವರ್ಷದ ಹೆಣ್ಣಾನೆಯೊಂದು ಶುಕ್ರವಾರ ಅಸ್ವಸ್ಥಗೊಂಡು ಬಿದ್ದಿದ್ದನ್ನು ಗಮನಿಸಿದ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕಾಗಮಿಸಿದ ಹುಣಸೂರು ಡಿಸಿಎಫ್ ವಿಜಯಕುಮಾರ್ ತಕ್ಷಣವೇ ನಾಗರಹೊಳೆ ಪಶುವೈದ್ಯ ಡಾ.ಮುಜೀಬ್ ರೆಹಮಾನ್‌ರನ್ನು ಕರೆಸಿ ಚಿಕಿತ್ಸೆ ಕೊಡಿಸಿದ್ದರು.
ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯಾಹ್ನದ ವೇಳೆಗೆ ಅಸುನೀಗಿದೆ. ಸಂಜೆ ವೇಳೆಗೆ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಆನೆಯ ಸಾವಿಗೆ ಕಲುಷಿತ ನೀರು ಸೇವನೆ ಹಾಗೂ ಆಹಾರ ಕೊರತೆಯಿಂದ ಡೀ ಹೈಡ್ರೇಷನ್‌ನಿಂದ ಬಳಲುತ್ತಿರಬಹುದೆಂದು ಶಂಕಿಸಲಾಗಿದೆ. ಆದರೆ, ನಿಖರವಾದ ಕಾರಣ ಶವ ಪರೀಕ್ಷೆ ವರದಿ ಬಂದ ನಂತರವೇ ಗೊತ್ತಾಗಲಿದೆ ಎಂದು ಡಿಸಿಎಫ್ ವಿಜಯಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.