ಮೊದಲ ಹಂತದ ಪಲ್ಸ್ ಪೋಲಿಯೋ ಯಶಸ್ವಿ
Team Udayavani, Jan 29, 2018, 12:52 PM IST
ಮೈಸೂರು: ಪೋಲಿಯೋ ಮುಕ್ತ ರಾಷ್ಟ್ರವನ್ನಾಗಿಸುವ ಉದ್ದೇಶದಿಂದ ನಡೆಸುವ ಮೊದಲ ಹಂತದ ಪಲ್ಸ್ ಪೋಲಿಯೋ ಮೊದಲ ಹಂತದ ಕಾರ್ಯಕ್ರಮವನ್ನು ಜಿಲ್ಲಾಡಳಿತದ ವತಿಯಿಂದ ಭಾನುವಾರ ಯಶಸ್ವಿಯಾಗಿ ನಡೆಸಲಾಯಿತು.
ಮೈಸೂರು ನಗರ ಹಾಗೂ ಜಿಲ್ಲೆಯ ವಿವಿಧ ಕಡೆಗಳಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಎಂ.ಕೆ.ಸೋಮಶೇಖರ್ ಅವರು ಜಯನಗರದ ಆರೋಗ್ಯ ಕೇಂದ್ರದಲ್ಲಿ ಚಾಲನೆ ನೀಡಿದರು. ಮೂರು ದಿನಗಳ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಜಿಲ್ಲೆಯಲ್ಲಿರುವ ಐದು ವರ್ಷದೊಳಗಿನ 2,63,480 ಮಕ್ಕಳಿಗೆ ಲಸಿಕೆ ಹಾಕಬೇಕೆಂಬ ಗುರಿ ಹೊಂದಿದೆ.
ಇದಕ್ಕಾಗಿ ನಗರದಲ್ಲಿನ 402 ಸೆಂಟರ್‌ಗಳು ಸೇರಿದಂತೆ ಜಿಲ್ಲೆಯಲ್ಲಿ 1,186 ಪಲ್ಸ್ ಪೋಲಿಯೋ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 27 ಮೊಬೈಲ್ ಯೂನಿಟ್‌ಗಳನ್ನು ಸಹ ಆರಂಭಿಸಲಾಗಿದೆ. ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಸಲುವಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಜತೆಗೆ 40 ಸ್ವಯಂಸೇವಕರು ಕೈಜೋಡಿಸಿದ್ದಾರೆ.
ಭಾರತವೂ 2014ರಲ್ಲಿ ಪೋಲಿಯೋ ಮುಕ್ತ ರಾಷ್ಟ್ರವೆಂದು ವಿಶ್ವ ಆರೋಗ್ಯ ಸಂಸ್ಥೆಯಿಂದ ಮನ್ನಣೆ ಪಡೆದಿದ್ದು, ಮುಂದಿನ ವರ್ಷಗಳಲ್ಲೂ ಇದೇ ಹೆಸರನ್ನು ಉಳಿಸಿಕೊಳ್ಳವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಪ್ರಯತ್ನಕೈಗೊಂಡಿದೆ.
ಹುಣಸೂರಿನಲ್ಲಿ ಶೇ.97 ಗುರಿ ಸಾಧನೆ
ಹುಣಸೂರು: ತಾಲೂಕಾದ್ಯಂತ ಭಾನುವಾರದಂದು ನಡೆದ ಮೊದಲ ಹಂತದ ಪಲ್ಸ್ ಪೊಲೀಯೋ ಕಾರ್ಯಕ್ರಮ ಯಶಸ್ವಿಯಾಗಿದ್ದು, ಶೇ 97 ರಷ್ಟು ಗುರಿ ಸಾಧಿಸಲಾಗಿದೆ. ತಾಲೂಕಿನಲ್ಲಿ ಒಟ್ಟು 5 ವರ್ಷದ 23.023 ಮಕ್ಕಳ ಪೈಕಿ 22.308 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಒಟ್ಟು 213 ಬೂತ್‌ಗಳನ್ನು ತೆರೆದಿದ್ದು, ಆರೋಗ್ಯ-ಆಶಾ,ಅಂಗನವಾಡಿ ಕಾರ್ಯಕರ್ತರು, ಸ್ವಯಂಸೇವಕರು ಸೇರಿದಂತೆ 852 ಮಂದಿ ಸಿಬ್ಬಂದಿಗಳು ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಇನ್ನುಳಿದ ಮಕ್ಕಳಿಗೆ ಕಾರ್ಯಕರ್ತರು ಇನ್ನು ಎರಡು ದಿನ ಮನೆ-ಮನೆಗೆ ತೆರಳಿ ಲಸಿಕೆ ಹಾಕುವರೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೇವತಾಲಕ್ಷಿ ತಿಳಿಸಿದರು. ಭಾನುವಾರ ನಡೆದ ಬಾಚಳ್ಳಿ ಜಾತ್ರೆಯಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಹದೇವ್ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಯಿತು.
ತಾಪಂ ಅಧ್ಯಕ್ಷರಿಂದ ಉದ್ಘಾಟನೆ: ಹುಣಸೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ತಾಪಂ ಅಧ್ಯಕ್ಷೆ ಪದ್ಮಮ್ಮ ಬಸವರಾಜು ಉದ್ಘಾಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.