ದೇಶದ ಭವಿಷ್ಯ ಮತದಾರರ ಕೈಲಿದೆ

Team Udayavani, Jan 26, 2020, 3:00 AM IST

deshada

ಮೈಸೂರು: ದೇಶದ ಭವಿಷ್ಯ ಮತದಾರನ ಕೈಯಲ್ಲಿದ್ದು, ಯುವ ಜನತೆ ಮತದಾನದಿಂದ ವಂಚಿತರಾಗಬಾರದು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್‌.ಕೆ. ಒಂಟಿಗೂಡಿ ಹೇಳಿದರು. ಮೈಸೂರು ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ತಾಲೂಕು ಆಡಳಿತದ ವತಿಯಿಂದ ಶನಿವಾರ ನಗರದ ಪುರಭವನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಶೇಖಡವಾರು ಮತದಾನವು ಗ್ರಾಮೀಣ ಭಾಗಕ್ಕಿಂತ‌ ನಗರ ಪ್ರದೇಶಗಳಲ್ಲಿ ಕಡಿಮೆ ಇರುವುದು ಕಂಡುಬರುತ್ತದೆ. ಮತದಾನದ ದಿನ ರಜೆ ಇರುವ ಹಿನ್ನೆಲೆ ನಗರ ಪ್ರದೇಶದ ವಿದ್ಯಾವಂತ ಜನರು ಪ್ರವಾಸ ಕೈಗೊಳ್ಳುವುದು ಅಥವಾ ಮತದಾನದಿಂದ ದೂರು ಉಳಿದು ಬಿಡುತ್ತಾರೆ. ಗ್ರಾಮೀಣ ಭಾಗದ ಜನರಂತೆ ತಮ್ಮ ಹಕ್ಕುಗಳನ್ನು ಚಲಾಯಿಸಿ ಶೇಕಡವಾರು ಮತದಾನವನ್ನು ನೂರಕ್ಕೆ ಏರಿಸುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.

ಪಾಲಿಕೆ ಆಯುಕ್ತ ಗುರುದತ್‌ ಹೆಗ್ಡೆ ಮಾತನಾಡಿ, ಇಂದಿನ ಯುವಕರಿಗೆ ಮತದಾನ ಜಾಗೃತಿ ಮೂಡಿಸುವುದು ಮುಖ್ಯವಾಗಿದೆ. ವಿದ್ಯಾರ್ಥಿಗಳು ಜಾತಿ, ಹಣ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡುಬೇಕು. ಇದನ್ನು ತಮ್ಮ ಪೋಷಕರಿಗೂ ತಿಳಿಸುವ ಮೂಲಕ ಅವರಲ್ಲೂ ಜಾಗೃತಿ ಮೂಡಿಸುವ ಕಾರ್ಯವಾಗಬೇಕು ಎಂದರು.

ಇತ್ತೀಚೆಗೆ ಮತದಾನ ಮಾಡುವವರ ಸಂಖ್ಯೆ ಕಡಿಮೆ ಯಾಗುತ್ತಿದೆ. ರಾಜಕೀಯದಿಂದ ನನಗೇನು, ಯಾವ ಸಲರ್ಕಾರ ಬಂದರೆ ನನಗೇನು ಎಂಬ ಭಾವನೆ ಮೂಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಲಕ್ಷಣ. ಶಿಕ್ಷಣ ಪಡೆದ ವಿದ್ಯಾರ್ಥಿಗಳು ಇದನ್ನು ಬದಲಿಸಬೇಕು. ಮತದಾನದಿಂದ ನನ್ನ ಕೊಡುಗೆ ಏನು ಎಂಬುದನ್ನು ಅರಿತುಕೊಂಡು ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಜಾಥಾ: ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ರಾಷ್ಟ್ರೀಯ ಮತದಾರರ ದಿನದ ಪ್ರಯುಕ್ತ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಎದುರಿಗೆ ಸದೃಢ ಪ್ರಜಾಪ್ರಭುತ್ವಕ್ಕಾಗಿ ಮತದಾರರ ಸಾಕ್ಷರತೆ ಕುರಿತು ಜಾಥಾ ನಡೆಸಲಾಯಿತು. ಅಪರ ಜಿಲ್ಲಾಧಿಕಾರಿ ಬಿ.ಆರ್‌. ಪೂರ್ಣಿಮ ಹಾಗೂ ಜಿಪಂ ಸಿಇಒ ಕೆ.ಜ್ಯೋತಿ ಜಾಥಾಗೆ ಚಾಲನೆ ನೀಡಿದರು. ಜಾಥಾವು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಹೊರಟು ಕೆ.ಆರ್‌.ವೃತ್ತ, ಸಯ್ನಾಜಿರಾವ್‌ ರಸ್ತೆ ಮೂಲಕ ಪುರಭವನ ತಲುಪಿತು.

ಕಾರ್ಯಕ್ರಮದಲ್ಲಿ 18 ವರ್ಷ ತುಂಬಿದ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಇದೇ ಸಂದರ್ಭ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಮತದಾನ ಅರಿವು ಕುರಿತು ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಒಂದು ಮತದಿಂದ ಏನಾಗಬಹುದು?: ರಾಜ್ಯದಲ್ಲಿ ಯಾವುದೇ ಒಂದು ಸರ್ಕಾರ ಆಡಳಿತ ನಡೆಸಲು ಪ್ರತಿಯೊಬ್ಬರು ಮಾಡಿದ ಮತದಾನದಿಂದ ನಿರ್ಧಾರವಾಗಲಿದೆ. ಆದ್ದರಿಂದ ನಮ್ಮ ಒಂದೇ ಮತದಿಂದ ಏನಾಗಬಹುದು, ಒಂದೊಂದು ಬಾರಿ ಒಂದು ಮತದಿಂದ ಸೋಲನ್ನು ಅನುಭವಿಸಿರುವುದು ನಾವು ನೋಡಿದ್ದೇವೆ. ಸರ್ಕಾರ ರಚನೆಗೆ ಬಹುಮತ ದೊರೆಯದೇ ಇರಲು ಮತದಾನದಿಂದ ಆಗುತ್ತದೆ.

ಇದನ್ನೆಲ್ಲಾ ತಿಳಿದು ಎಲ್ಲರೂ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ನ್ಯಾಯಾಧೀಶ ಎಸ್‌.ಕೆ. ಒಂಟಿಗೂಡಿ ತಿಳಿಸಿದರು. ಮತದಾನದ ಮಹತ್ವ ತಿಳಿದು ದೇಶದ ಯುವಕರು ಮತದಾನ ಮಾಡಲು ಮುಂದಾಗಬೇಕು. ಸೂಕ್ತ ವ್ಯಕ್ತಿಗೆ ಹಕ್ಕು ಚಲಾಯಿಸಿ ಉತ್ತಮ ಆಡಳಿತಕ್ಕೆ ಬುನಾದಿ ಹಾಕುವಂತೆ ಹೊಸದಾಗಿ ಮತ ಚಲಾಯಿಸಲಿರುವ ವಿದ್ಯಾರ್ಥಿಗಳಿಗೆೆ ಸಲಹೆ ನೀಡಿದರು.

ಟಾಪ್ ನ್ಯೂಸ್

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.