ಬರ ಪರಿಹಾರ ನೀಡುವಲ್ಲಿ ಸರ್ಕಾರ ವಿಫ‌ಲ: ಆರೋಪ

Team Udayavani, Feb 15, 2017, 12:53 PM IST

mys7.jpg

ಮೈಸೂರು: ಬರ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ಲಕ್ಷದಿಂದಾಗಿ ರಾಜ್ಯದಲ್ಲಿ ರೈತರು ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಕಬಿನಿ ಹಾಗೂ ಕಾವೇರಿ ಜಲಾಶಯದ ನೀರನ್ನು ತಮಿಳುನಾಡಿಗೆ ಹರಿಸಿದ ಪರಿಣಾಮ ಈ ಭಾಗದ ರೈತರು ಇದೀಗ ಬೆಳೆ ನಷ್ಟ ಅನುಭವಿಸುತ್ತಿದ್ದಾರೆ. ಇದಲ್ಲದೆ ಜನಸಾಮಾನ್ಯರು, ಜಾನುವಾರುಗಳು ಸಹ ಕುಡಿಯುವ ನೀರಿಗಾಗಿ ತೊಂದರೆ ಅನುಭವಿಸುವಂತಾಗಿದೆ.

ಹೀಗಿದ್ದರೂ ಈ ಭಾಗದ ರೈತರಿಗೆ ಬೆಳೆನಷ್ಟದ ಪರಿಹಾರ ನೀಡಲು ಸರ್ಕಾರ ವಿಳಂಬ ಮಾಡುತ್ತಿದೆ. ಅಲ್ಲದೆ, ಸರ್ಕಾರದ ಈ ಧೋರಣೆ ಖಂಡಿಸಿ ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಹಲವು ಬಾರಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಕಬಿನಿ ಅಚ್ಚುಕಟ್ಟು ವ್ಯಾಪ್ತಿಯ ರೈತರ ಭತ್ತದ ಬೆಳೆಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು, ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿರುವ ರೈತರಿಗೆ 2015-16ರ ಸಾಲಿನ ಉಪ ಉತ್ಪನ್ನಗಳ ಲಾಭ, ಎಸ್‌ಎಪಿ ದರ ಪ್ರತಿ ಟನ್‌ಗೆ 250 ರೂ. ಹಣವನ್ನು ಕೂಡಲೇ ಕೊಡಿಸಬೇಕು,

ಪ್ರಸಕ್ತ ಸಾಲಿನ ಕಬ್ಬಿನ ದರ ಕನಿಷ್ಠ 9.5 ಸಕ್ಕರೆ ಇಳುವರಿಗೆ 3 ಸಾವಿರ ರೂ. ಜೋಡಿಸಬೇಕು. ಬರ ಪರಿಹಾರ, ಬೆಳೆ ನಷ್ಟಕ್ಕೆ ವೈಜಾnನಿಕ ದರ ನಿಗದಿಗೊಳಿಸಿ ಹಣ ಬಿಡುಗಡೆ ಮಾಡಬೇಕು. ಕಳೆದ ಮೂರು ವರ್ಷದಿಂದ ಬರಗಾಲ ಎದುರಿಸುತ್ತಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದರು.

ಬೃಹತ್‌ ಮೆರವಣಿಗೆ: ಇದಕ್ಕೂ ಮುನ್ನ ನಗರದ ಕಾಡಾ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಪ್ರತಿಭಟನಾಕಾರರು ಬೃಹತ್‌ ಮೆರವಣಿಗೆ ನಡೆಸಿದರು. ಒಕ್ಕೂಟದ ರಾಜಾÂಧ್ಯಕ್ಷ ಕುರುಬೂರು ಶಾಂತಕುಮಾರ್‌ ನೇತೃತ್ವದಲ್ಲಿ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು ನಗರ ಪಾಲಿಕೆ ಸಮೀಪ ರಸ್ತೆತಡೆ ನಡೆಸಿ ಭಾರೀ ಪ್ರತಿಭಟನೆ ನಡೆಸಿದರು.

ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸಿದ ಪ್ರತಿ¸‌ಟನಾಕಾರರು ರಸ್ತೆಯಲ್ಲೇ ಮಲಗಿ ಪೋಲೀಸರ ದೌರ್ಜನ್ಯ ಖಂಡಿಸಿದರಲ್ಲದೆ, ಹಗ್ಗದಲ್ಲಿ ಕೈಬಿಗಿದುಕೊಂಡು ಪ್ರತಿಭಟಿಸಿದರು. ಆದರೆ ಸ್ಥಳದಲ್ಲಿದ್ದ ಹಿರಿಯ ಪೊಲೀಸ್‌ ಅಧಿಕಾರಿಗಳು ಇದಕ್ಕೆ ಅವಕಾಶ ನೀಡಲು ಒಪ್ಪದ ಪರಿಣಾಮ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್‌, ಭಾಗ್ಯರಾಜ್‌ ಇನ್ನಿತರರರು ಭಾಗವಹಿಸಿದ್ದರು.

ರೈತರ ಮನವಿ ಆಲಿಸಿದ ಜಿಲ್ಲಾಧಿಕಾರಿ
ಮೈಸೂರು:
ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ತಿಂಗಳಾಂತ್ಯದಿಂದ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ರೈತರು ಹಾಗೂ ಅಧಿಕಾರಗಳ ಸಭೆ ನಡೆಸುವು ದಾಗಿ ಜಿಲ್ಲಾಧಿಕಾರಿ ಡಿ. ರಂದೀಪ್‌ ಭರವಸೆ ನೀಡಿದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂದರ್ಭ ಪ್ರತಿಭಟನಾ ಕಾರರ ಮನವಿ ಸ್ವೀಕರಿಸಿ ಮಾತನಾಡಿದರು. ಕಬಿನಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ವಿಶೇಷ ವರದಿ ನೀಡಲು ಸರ್ಕಾರ ಸೂಚಿಸಿದೆ. ಅದರಂತೆ ವರದಿ ತಯಾರಿಸು ವಲ್ಲಿ ಅಧಿಕಾರಿಗಳು ನಿರತ ವಾಗಿದ್ದಾರೆ.

ಬರಗಾಲದ ಹಿನ್ನೆಲೆಯಲ್ಲಿ ಕೇಂದ್ರದ ಎರಡು ತಂಡಗಳು ಹಾಗೂ ಸಚಿವ ಸಂಪುಟ ಉಪ ಸಮಿತಿ ಜಿಲ್ಲೆಯಲ್ಲಿ ಪ್ರವಾಸ ಮಾಡಿ ಪರಿಸ್ಥಿತಿ ಅವಲೋಕಿಸಿದೆ. ಈ ಸಂದರ್ಭದಲ್ಲಿ 91 ಕೋಟಿ ರೂ. ಪರಿಹಾರ ನೀಡುವಂತೆ ಕೇಂದ್ರದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಈ ಹಣ ಬಂದೊಡನೆ ನೇರವಾಗಿ ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. ಉಳಿದಂತೆ ಪಡಿತರ ವಿತರಣೆ, ವಿದ್ಯುತ್‌, ಗೋಶಾಲೆ ತೆರೆಯುವುದು ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ನಿಗಾವಹಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.