ಹಳ್ಳಿಗಳಿಗೆ ತೆರಳಿ ಸಮಸ್ಯೆ ಆಲಿಸಿದ ಜಿಟಿಡಿ


Team Udayavani, Jan 12, 2019, 6:12 AM IST

m4-halli.jpg

ಮೈಸೂರು: ಸ್ವಕ್ಷೇತ್ರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ.ದೇವೇಗೌಡ ಅವರು, ಜನ ಸಂಪರ್ಕ ಸಭೆಗಳು ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.

ಇಲವಾಲ ಮತ್ತು ಜಯಪುರ ಹೋಬಳಿ ವ್ಯಾಪ್ತಿಗೆ ಒಳಪಡುವ ಶೆಟ್ಟಿನಾಯಕನಹಳ್ಳಿ, ಮಾಣಿಕ್ಯಪುರ, ಕಮರಹಳ್ಳಿ, ದೊಡ್ಡಮಾರಗೌಡನಹಳ್ಳಿ, ಮರಯ್ಯನಹುಂಡಿ, ನುಗ್ಗಹಳ್ಳಿ, ಮಾದಹಳ್ಳಿ, ಅನಗನಹಳ್ಳಿ, ತಿಬ್ಬಯ್ಯನಹುಂಡಿ, ಮೂಗನಹುಂಡಿ, ದೇವಗಳ್ಳಿ, ಮುಳ್ಳೂರು, ಗೋಪಾಲಪುರ ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು ಕಾರ್ಯಕ್ರಮಗಳಲ್ಲಿ ಭಾಗಿಯಾದರು.

ಉದ್ಘಾಟನೆ, ಶಂಕುಸ್ಥಾಪನೆ: ಶೆಟ್ಟಿನಾಯಕನಹಳ್ಳಿಯಲ್ಲಿ 9 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಗ್ರಂಥಾಲಯ ಹಾಗೂ 6 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಅಂಗನವಾಡಿ ಕಟ್ಟಡ ಉದ್ಘಾಟಿಸಿದರು. ಕಟ್ಟೆಹುಂಡಿಯಲ್ಲಿ  ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಮಾದಹಳ್ಳಿಯಲ್ಲಿ 10.6 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಶಾಲಾ ಕಟ್ಟಡದ ಶಂಕುಸ್ಥಾಪನೆಯನ್ನು ನೆರವೇರಿಸಿದ ನಂತರ ಮಾದಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಬೇಕಿರುವ ಎರಡು ಕೊಠಡಿಗಳ ನಿರ್ಮಾಣಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯೊಂದಿಗೆ  ಚರ್ಚಿಸುವುದಾಗಿ ತಿಳಿಸಿದರು.

ಮನೆ ಬಾಗಿಲಿಗೆ ಸರ್ಕಾರ: ನುಗ್ಗಹಳ್ಳಿ ಗ್ರಾಮದಲ್ಲಿ ಜನಸಂಪರ್ಕ ಸಭೆ ನಡೆಸಿ ಮಾತನಾಡಿದ ಸಚಿವರು, ಸರ್ಕಾರ ನಿಮ್ಮ ಸಮಸ್ಯೆಗಳನ್ನು ಆಲಿಸಲು ನಿಮ್ಮ ಮನೆ ಬಾಗಿಲಿಗೇ ಬಂದಿದೆ. ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದರು.

ಕೆರೆ ಭರ್ತಿಗೆ ಸಮೀಕ್ಷೆ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದಲ್ಲದೇ ವೃದ್ಧಾಪ್ಯ ವೇತನವನ್ನು 2019ರ ಆಯವ್ಯಯದಲ್ಲಿ 2000 ರೂ.ಗಳಿಗೆ ಹೆಚ್ಚಿಸಲು ಚಿಂತಿಸಲಾಗುತ್ತಿದೆ. ಈಗಾಗಲೇ ಚಾಮುಂಡೇಶ್ವರಿ ಕ್ಷೇತ್ರದ ಸುತ್ತಮುತ್ತಲಿನ ಗ್ರಾಮಗಳ ರಸ್ತೆಗಳ ಡಾಂಬರೀಕರಣಕ್ಕೆ  8 ಕೋಟಿ ಮೊತ್ತಕ್ಕೆ ಟೆಂಡರ್‌ ಆಗಿದೆ. ಮಾದಹಳ್ಳಿಯ ಸುತ್ತ ಮುತ್ತಲಿನ ಗ್ರಾಮಗಳ ಕೆರೆಗಳಿಗೆ  ಕೆಆರ್‌ಎಸ್‌ ನಿಂದ ನೀರು ತುಂಬಿಸಲು ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.

ಸ್ಥಳದಲ್ಲೇ ಪರಿಹಾರ: ಗ್ರಾಮಗಳಿಗೆ ನಿರಂತರ ಜ್ಯೋತಿ ಒದಗಿಸಲು ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಹೇಳಿದ ಸಚಿವರು, ಜನಸಂಪರ್ಕ ಸಭೆಗಳಲ್ಲಿ ಸ್ವೀಕರಿಸಲಾಗಿರುವ ಅರ್ಜಿಗಳನ್ನು ಸ್ಥಳದಲ್ಲಿಯೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ವರ್ಗಾಯಿಸಿ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ತಾಕೀತು ಮಾಡಿದರು. 

ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಬೀರಿಹುಂಡಿ ಬಸವಣ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮಿತ್‌ ಸಿಂಗ್‌, ಪೊಲೀಸ್‌ ಅಧೀಕ್ಷಕಿ ಪಿ.ವಿ.ಸ್ನೇಹಾ, ಉಪವಿಭಾಗಾಧಿಕಾರಿ ಶಿವೇಗೌಡ, ತಹಶೀಲ್ದಾರ್‌ ರಮೇಶ್‌ ಬಾಬು, ಮೈಸೂರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲಿಂಗರಾಜಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. 

ಟಾಪ್ ನ್ಯೂಸ್

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.