ಪ್ರಸ್ತುತ ಇತಿಹಾಸ ಅಧ್ಯಯನಕ್ಕೆ ಮಹತ್ವ ಅವಶ್ಯ
Team Udayavani, Mar 14, 2018, 12:34 PM IST
ಮೈಸೂರು: ಪ್ರಸ್ತುತ ಸಂದರ್ಭದಲ್ಲಿ ಇತಿಹಾಸ ತಿಳಿಯುವುದಕ್ಕೆ ಜನರು ಹೆಚ್ಚಿನ ಮಹತ್ವ ನೀಡಬೇಕಿದ್ದು, ಹೀಗಾಗಿ ಇತಿಹಾಸದ ಘಟನೆಗಳನ್ನು ಗುರುತಿಸುವ ಬಗ್ಗೆ ಹೆಚ್ಚು ಸಂಶೋಧನೆಗಳು ನಡೆಯಬೇಕಿದೆ ಎಂದು ಮೈಸೂರು ವಿವಿ ಪ್ರಭಾರ ಕುಲಪತಿ ಪೊ›.ಸಿ.ಬಸವರಾಜು ತಿಳಿಸಿದರು.
ಮೈಸೂರು ವಿವಿ ಇತಿಹಾಸ ಅಧ್ಯಯನ ವಿಭಾಗದಿಂದ ಮಾನಸಗಂಗೋತ್ರಿ ರಾಣಿ ಬಹುದ್ದೂರ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕರ್ನಾಟಕದಲ್ಲಿ ಪ್ರಾಚೀನ ಮತ್ತು ಮಧ್ಯಯುಗದ ಇತಿಹಾಸ ಪ್ರವೃತ್ತಿಗಳು ಕುರಿತ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಇತಿಹಾಸವನ್ನು ತಿಳಿದವರು ಮಾತ್ರ ಇತಿಹಾಸ ಬರೆಯಲು ಸಾಧ್ಯವಿದ್ದು, ಆದ್ದರಿಂದ ಪ್ರಸ್ತುತದಲ್ಲಿ ಇತಿಹಾಸ ತಿಳಿಯಲು ಜನರು ಹೆಚ್ಚು ಮಹತ್ವ ನೀಡಬೇಕಿದೆ. ನಮ್ಮ ಸುತ್ತಮುತ್ತಲೂ ದಿನನಿತ್ಯ ಸಾಕಷ್ಟು ಘಟನಾವಳಿಗಳು ನಡೆಯುತ್ತಿದ್ದರೂ, ಈ ಹಿಂದೆ ನಮ್ಮನ್ನಾಳಿದ ಅನೇಕ ಮಹನೀಯರು ಬಿಟ್ಟು ಹೋಗಿರುವ ಇತಿಹಾಸದ ಕುರುಹುಗಳು,
ಆಡಳಿತ ಮಾರ್ಗಗಳು ಹಾಗೂ ನಾಗರೀಕತೆ ಇಂದಿಗೂ ಸಾರ್ವಜನಿಕರ ಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಹಿಂದಿನ ಅಭಿವೃದ್ಧಿಶೀಲ ಕಾರ್ಯಗಳು ಹಾಗೂ ಇತಿಹಾಸದ ಘಟನೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಹೆಚ್ಚಿನ ಸಂಶೋಧನೆಗಳು ನಡೆಯಬೇಕಿದೆ ಎಂದರು.
ಈ ಸಂಶೋಧನೆಗಳು ಸಾರ್ವಜನಿಕರಿಗೆ ಮಾಹಿತಿ ನೀಡುವುದರ ಜತೆಗೆ ನಾಗರೀಕತೆಯ ವಿಧಾನಗಳನ್ನು ತಿಳಿಸಬೇಕಿದೆ. ಅಲ್ಲದೆ ಹಿಂದಿನಿಂದ ಕೊಡುಗೆಯಾಗಿ ಬಂದ ನಮ್ಮ ಪರಿಸರವನ್ನು ಅಭಿವೃದ್ಧಿ ಮಾಡುವ ಮೂಲಕ ಪರಿಸರ ಸಂರಕ್ಷಣೆಯಲ್ಲೂ ಕಾಳಜಿವಹಿಸಬೇಕಿದೆ.
ಈ ಕಾರ್ಯಗಳ ಮೂಲಕ ಪರಿಸರವನ್ನು ಬೆಳೆಸದಿದ್ದರೆ ನಮ್ಮ ಕಾಯಕಲ್ಪ ಮುಂದಿನ ಪೀಳಿಗೆಗೆ ಮಾರಕವಾಗಲಿದೆ. ಆದರೆ, ಇತಿಹಾಸದ ಪ್ರಾಚೀನತೆ ಹಾಗೂ ಐತಿಹಾಸಿಕ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಕಾರ್ಯ ನಿರ್ವಹಿಸುತ್ತಿದ್ದು, ಆಡಳಿತದಲ್ಲಿ ಬದಲಾವಣೆಯನ್ನು ಕಂಡುಕೊಂಡಿದೆ ಎಂದು ತಿಳಿಸಿದರು.
ವಿಚಾರ ಸಂಕಿರಣದಲ್ಲಿ ಆಧುನಿಕ ಕರ್ನಾಟಕ ಇತಿಹಾಸ ಲೇಖನ, ಹೈದರಾಬಾದ್ ಕರ್ನಾಟಕ ಇತಿಹಾಸ ಮೇಲಿನ ಬರವಣಿಗೆಗಳು ಸೇರಿದಂತೆ ಇನ್ನಿತರ ವಿಷಯಗಳ ಕುರಿತು ವಿಚಾರ ಮಂಡಿಸಲಾಯಿತು. ಕಾರ್ಯಕ್ರಮದಲ್ಲಿ ಕುವೆಂಪು ವಿವಿಯ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ ಅಧ್ಯಕ್ಷ ಪೊ›. ರಾಜಾರಾಮ್ ಹೆಗ್ಡೆ, ಮೈಸೂರು ವಿವಿ ಇತಿಹಾಸ ವಿಭಾಗದ ಮುಖ್ಯಸ್ಥ ಪೊ›.ವೈ.ಎಚ್.ನಾಯಕ್‌ವಾಡಿ, ಮೈಸೂರು ವಿವಿಯ ಪೊ›.ಜಿ. ಹೇಮಂತ್‌ಕುಮಾರ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.