ಚಾ.ದೇಗುಲದಲ್ಲಿ ವಿಗ್ರಹಗಳ ಪ್ರತಿಷ್ಠಾಪನೆ
Team Udayavani, Dec 11, 2021, 1:10 PM IST
ನಂಜನಗೂಡು: ಇಲ್ಲಿನ ಕಪಿಲಾ ನದಿ ತೀರದಲ್ಲಿರುವ ಚಾಮುಂಡೇಶ್ವರಿ ದೇಗುಲದಲ್ಲಿ ಅನಂತ ಬಾಲಕೃಷ್ಣ ವಿಗ್ರಹ ಸೇರಿದಂತೆ 200 ನಾಗರ ವಿಗ್ರಹಗಳ ಪುನರ್ ಪ್ರತಿಷ್ಠಾಪನೆ ನಡೆಯಿತು.
ಶ್ರೀಕಂಠೇಶ್ವರಸ್ವಾಮಿ ದೇಗುಲದ ಪ್ರಧಾನ ಆಗಮಿಕ ಜೆ.ನಾಗಚಂದ್ರ ದೀಕ್ಷಿತ್ ನೇತೃತ್ವದ ಅರ್ಚಕ ವೃಂದದವರು ಕಳೆದ ಮೂರು ದಿನಗಳ ಪರ್ಯಂತ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಕೈಗೊಂಡು ಅನಂತ ಬಾಲಕೃಷ್ಣನ ವಿಗ್ರಹ ಸೇರಿದಂತೆ 200ಕ್ಕೂ ಹೆಚ್ಚು ನಾಗರ ಮೂರ್ತಿಗಳನ್ನು ಪ್ರತಿಷ್ಠಾಪಿಸಿದರು.
ಪ್ರತಿಷ್ಠಾಪನೆಗೂ ಮುನ್ನ ಗಣಪತಿ ನವಗ್ರಹ ಹೋಮ ನೆರವೇರಿಸಿ ವಿಗ್ರಹಗಳ ಕಲಾಪೂರ್ಣ ಮಾಡಿ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು. ನಾಡಿ ಸಂಧಾನ, ಪೂರ್ಣಹುಟ್ಟು, ಕುಂಭಾಭಿಷೇಕ ನೆರವೇರಿಸಿ ಮಹಾಮಂಗಳಾರತಿ ಸೇರಿದಂತೆ ಧಾರ್ಮಿಕ ಕೈಂಕರ್ಯಗಳ ನಂತರ ಅನಂತ ಬಾಲಕೃಷ್ಣನ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ಕಲ್ಪಿಸಲಾಯಿತು. ಈ ವೇಳೆ ಶ್ರೀಕಂಠೇಶ್ವರಸ್ವಾಮಿ ದೇಗುಲದ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ, ಎಇಒ ವೆಂಕಟೇಶ್‌ಪ್ರಸಾದ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.