ಕಬಿನಿ ನಾಲೆಗಳಿಗೆ ನೀರು ಹರಿಸಲು ಆಗ್ರಹ


Team Udayavani, Jul 7, 2018, 2:16 PM IST

m3-kabini.jpg

ಮೈಸೂರು: ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಕಬಿನಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘಗಳ ನೇತೃತ್ವದಲ್ಲಿ ನೂರಾರು ರೈತರು ಶುಕ್ರವಾರ ನಗರದ ಕಾಡಾ ಕಚೇರಿ ಎದುರು ಪ್ರತಿಭಟನೆ ನಡೆಸಿದರು. 

ಕಬಿನಿ ಅಚ್ಚುಕಟ್ಟು ಪ್ರದೇಶದ ರೈತರು ಕಳೆದ ಎರಡು ವರ್ಷಗಳಿಂದ ಬೆಳೆಗಳಿಗೆ ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಿದ್ದರೂ ಕಬಿನಿ ಜಲಾಶಯ ಭರ್ತಿಯಾದಾಗಿನಿಂದ ನಿರಂತರವಾಗಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ.

ಇದರಿಂದ ಈ ಭಾಗದ ರೈತರ ಬೆಳೆಗಳಿಗೆ ನೀರಿಲ್ಲದೆ ಪರದಾಡುವಂತಾಗಿದೆ. ತಮಿಳುನಾಡಿನ ರೈತರಿಗೆ ಮೂರನೇ ಬೆಳೆಗೆ ನೀರು ಪೂರೈಕೆ ಮಾಡಲಾಗುತ್ತಿದೆ. ನಮ್ಮ ರೈತರಿಗೆ ಒಂದು ಬೆಳೆಗೆ ನೀರು ನೀಡಲು ರಾಜ್ಯ ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. 

ಬೆಳೆಗೆ ನೀರು ಹರಿಸಿ: ಕಬಿನಿ ಜಲಾಶಯ ಭರ್ತಿಯಾಗಿ 25 ದಿನಗಳಾಗಿದ್ದು ಜಲಾಶಯದಿಂದ ಇದುವರೆಗೂ 25 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಆದರೆ ಕಬಿನಿ ಅಚ್ಚಕಟ್ಟು ಭಾಗದ ರೈತರ ವ್ಯವಸಾಯಕ್ಕೆ ನೀರು ಬಿಡುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಕಬಿನಿ ಬಲದಂಡೆ ನಾಲೆ ವ್ಯಾಪ್ತಿಯ ರೈತರು ಎರಡು ವರ್ಷದಿಂದ ಯಾವುದೇ ಬೆಳೆ ಬೆಳೆಯದೆ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಈ ವರ್ಷವೂ ಅದೇ ಸ್ಥಿತಿ ಬರದಂತೆ ಎಚ್ಚರ ವಹಿಸಬೇಕಿದೆ ಎಂದು ಎಚ್ಚರಿಸಿದರು. 

ಹೋರಾಟದ ಎಚ್ಚರಿಕೆ: ಅಲ್ಲದೆ ಕೆಆರ್‌ಎಸ್‌ ಜಲಾಯಶ ಭರ್ತಿಯಾಗದಿದ್ದರೂ ಆ ಭಾಗದ ನಾಲೆಗಳಿಗೆ ನೀರು ಹರಿಸಿ ಕೆರೆಕಟ್ಟೆಗಳನ್ನು ತುಂಬಿಸಲಾಗುತ್ತಿದ್ದು, ಕಬಿನಿ ಅಣೆಕಟ್ಟೆಯ ನೀರನ್ನು ತಮಿಳುನಾಡಿಗೆ ನೀರು ಹರಿಸುತ್ತಿರುವುದು ಖಂಡನೀಯ. ಹೀಗಾಗಿ ಸರ್ಕಾರ ಈ ಕೂಡಲೇ ಕಬಿನಿ ಅಚ್ಚಕಟ್ಟು ನಾಲೆಗಳಿಗೆ ನೀರು ಹರಿಸುವ ತೀರ್ಮಾನ ಕೈಗೊಳ್ಳಬೇಕಿದೆ. ಇಲ್ಲವಾದಲ್ಲಿ ರೈತರು ಬೀದಿಗಿಳಿದು ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಲಿದೆ ಎಂದು ಎಚ್ಚರಿಸಿದರು. 

ಪ್ರತಿಭಟನೆಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌, ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸರಗೂರು ಶಂಕರ, ಕೆರೆಹುಂಡಿ ರಾಜಣ್ಣ, ಪರಶಿವಮೂರ್ತಿ, ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್‌ ಇನ್ನಿತರರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

Trinadha Rao Nakkina: ನಟಿಯ ʼಸೈಜ್‌ʼ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿದ ನಿರ್ದೇಶಕ

Trinadha Rao Nakkina: ನಟಿಯ ʼಸೈಜ್‌ʼ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿದ ನಿರ್ದೇಶಕ

Champions Trophy: Australia squad announced with surprise selection

Champions Trophy: ಅಚ್ಚರಿಯ ಆಯ್ಕೆಯೊಂದಿಗೆ ಆಸ್ಟ್ರೇಲಿಯಾ ತಂಡ ಪ್ರಕಟ

IPL 2025: Shreyas Iyer to captain Punjab Kings

IPL 2025: ಪಂಜಾಬ್‌ ಕಿಂಗ್ಸ್‌ ಗೆ ಶ್ರೇಯಸ್‌ ಅಯ್ಯರ್‌ ನಾಯಕ

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

Naringana Kambala 2025 result

Kambala: ದಾಖಲೆ ಜೋಡಿ ಕೋಣಗಳಿಗೆ ಸಾಕ್ಷಿಯಾದ ನರಿಂಗಾನ ಕಂಬಳ: ಇಲ್ಲಿದೆ ಫಲಿತಾಂಶ ಪಟ್ಟಿ

Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು

Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Snaehamayi-krishna-GTD

MUDA: ಮಗಳ-ಅಳಿಯಗೆ ಮುಡಾ ಸೈಟ್‌: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು

Actor Darshan: ನಟ ದರ್ಶನ್‌ ಮೈಸೂರಿಗೆ ಇಂದು ಆಗಮನ

Actor Darshan: ಇಂದು ನಟ ದರ್ಶನ್‌ ಮೈಸೂರಿಗೆ ಆಗಮನ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

4

mangaluru: ಕಬಡ್ಡಿ, ಬ್ಯಾಡ್ಮಿಂಟನ್‌ಗೆ ಸ್ಮಾರ್ಟ್‌ ಕಾಂಪ್ಲೆಕ್ಸ್‌

3

Editorial: ಕುಡಿಯುವ ನೀರಿನ ಪರಿಶುದ್ಧತೆಯ ಪ್ರಶ್ನೆ ಬಾರದಿರಲಿ

Trinadha Rao Nakkina: ನಟಿಯ ʼಸೈಜ್‌ʼ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿದ ನಿರ್ದೇಶಕ

Trinadha Rao Nakkina: ನಟಿಯ ʼಸೈಜ್‌ʼ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿದ ನಿರ್ದೇಶಕ

2

Bantwal: ಜಕ್ರಿಬೆಟ್ಟು ಬ್ಯಾರೇಜ್‌ಗೆ ಶೀಘ್ರ ಗೇಟ್‌!

Champions Trophy: Australia squad announced with surprise selection

Champions Trophy: ಅಚ್ಚರಿಯ ಆಯ್ಕೆಯೊಂದಿಗೆ ಆಸ್ಟ್ರೇಲಿಯಾ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.