ದೇಶದಲ್ಲಿ ಕಾಂಗ್ರೆಸ್‌ನ ಕೊನೆಯ ಸಿಎಂ ಸಿದ್ದರಾಮಯ್ಯ
Team Udayavani, Apr 6, 2017, 3:45 AM IST
ಮೈಸೂರು: ತಮ್ಮ ತವರು ಜಿಲ್ಲೆಯಲ್ಲೇ ವರ್ಚಸ್ಸು ಕಳೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೇಶದಲ್ಲಿ ಕಾಂಗ್ರೆಸ್ ಪಕ್ಷದ ಕಟ್ಟಕಡೆಯ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.
ನಂಜನಗೂಡು ತಾಲೂಕಿನ ದೇಬೂರು ಗ್ರಾಮದಲ್ಲಿ ಬಹಿರಂಗ ಪ್ರಚಾರ ನಡೆಸಿದ ಅವರು, ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧದ ಅಲೆಯಿದೆ. ನೀರು, ರಸ್ತೆ, ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಇದು ಜನರಿಗೆ ಮನವರಿಕೆಯಾಗಿರುವುದರಿಂದ ಕಾಂಗ್ರೆಸ್ ಮುಖಂಡರು ಬಹಿರಂಗ ಪ್ರಚಾರ ಮಾಡುವುದನ್ನು ನಿಲ್ಲಿಸಿ ಹೋಟೆಲ್‌ಗಳಲ್ಲಿ ಕುಳಿತು ಹಣ ಹಂಚುವ ಕೆಲಸದಲ್ಲಿ ತೊಡಗಿದ್ದಾರೆ. ಜನರಿಗೆ ಹಣ ಹಂಚಿ ಚುನಾವಣೆ ಗೆಲ್ಲಬಹುದು ಎಂಬ ಅಹಂಕಾರ ಅವರಿಗಿದೆ ಎಂದರು.
ಪ್ರಚಾರದಲ್ಲಿ ಪಾಲ್ಗೊಂಡಿದ್ದ ಚಿತ್ರನಟ ಬುಲೆಟ್ ಪ್ರಕಾಶ್ ಮಾತನಾಡಿ, ಬಿಜೆಪಿಗೆ ಜನಬೆಂಬಲ ಚೆನ್ನಾಗಿದ್ದು ಉಪ ಚುನಾವಣೆಯಲ್ಲಿ ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ. ಅಲ್ಲದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲೂ ಸಹ ಬಿಜೆಪಿ ಬಹುಮತ ಪಡೆಯಲಿದೆ ಎಂದು ತಿಳಿಸಿದರು.
ಮೋದಿ ಅಲೆ ಜನಮಾನಸದಲ್ಲಿದೆ: ಮೋದಿ ಅಲೆ ಎಲ್ಲಿಯೂ ಇಲ್ಲ ಎನ್ನುತ್ತಿರುವ ಜನ ಪ್ರತಿನಿಧಿಗಳ ಕ್ಷೇತ್ರಗಳ ಜನರ ಮನಸ್ಸಿನಲ್ಲೇ ಮೋದಿ ಅಲೆ ಎದ್ದಿದೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದರು.
ನಂಜನಗೂಡು ತಾಲೂಕಿನ ಮಾಡ್ರಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ವಿ.ಶ್ರೀನಿವಾಸ ಪ್ರಸಾದ್ ಕಂದಾಯ ಸಚಿವರಾಗಿ ಉತ್ತಮ ಕಾರ್ಯ ಮಾಡಿದ್ದಾರೆ. ಅದರೆ ಇಂದು ಕಾಂಗ್ರೆಸ್‌ನ ಕೆಲವು ಮುಖಂಡರು ಪ್ರಸಾದ್ ಮಾಡಿಸಿದ್ದ ಕೆಲಸಗಳನ್ನೆಲ್ಲಾ ತಾವೇ ಮಾಡಿಸಿದ್ದೆಂದು ಹೇಳಿಕೊಳ್ಳುತ್ತಿದ್ದಾರೆ. ಜನರಿಗೆ ನಿಜಸಂಗತಿ ಏನೆಂಬುದು ಗೊತ್ತಾಗಿದ್ದು ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಅಭಿವೃದ್ಧಿಯ ಹೆಸರಿನಲ್ಲಿ ತಾವು ಹಣ ಮಾಡಿಕೊಂಡವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.