ಕೋವಿಡ್ ಸೋಂಕಿನಿಂದ ಗುಣಮುಖಗೊಂಡಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
Team Udayavani, May 14, 2020, 11:40 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮೈಸೂರು: ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಕೋವಿಡ್ ಸೋಂಕು ಪತ್ತೆಯಾಗಿದ್ದ 74 ವರ್ಷದ ವ್ಯಕ್ತಿ ಕೋವಿಡ್ ನಿಂದ ಗುಣಮುಖನಾಗಿ 16 ದಿನಗಳ ಬಳಿಕ ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಏ.28 ರಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದ ರೋಗಿ ಸಂಖ್ಯೆ. 273 ವ್ಯಕ್ತಿ, ಕೆಲ ದಿನಗಳ ಹಿಂದೆ ತೀವ್ರ ಸ್ವರೂಪದ ಶ್ವಾಸಕೋಶದ ಸಮಸ್ಯೆಯಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಈ ವ್ಯಕ್ತಿ ಗುರವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರಿಗೆ ಸೋಂಕು ತಗುಲುವ ಮೊದಲಿನಿಂದಲು ಕಿಡ್ನಿ, ಲಿವರ್ ಸಮಸ್ಯೆಯಿಂದಲೂ ಬಳಲುತ್ತಿದ್ದರು.
ಮೃತಪಟ್ಟ ವ್ಯಕ್ತಿ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ನಾಲ್ಕು ಬಾರಿ ಸ್ವ್ಯಾಬ್ ಟೆಸ್ಟ್ ಮಾಡಲಾಗಿದ್ದು, ಈ ವರದಿಗಳಲ್ಲಿ ನೆಗೆಟಿವ್ ಬಂದಿತ್ತು. ಹಾಗಾಗಿ ಇವರು ಕೋವಿಡ್ ಸೋಂಕಿನ ಕಾರಣದಿಂದ ಮೃತಪಟ್ಟಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Contractor Case: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ
Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!
KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್ ನಗು
Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.