ಕ್ಷುಲ್ಲಕ ವಿಚಾರಕ್ಕೆ ಪತ್ನಿ ಜತೆ ಜಗಳ ತೆಗೆದು ಕೊಲೆಗೈದವನಿಗೆ ಜೀವಾವಧಿ ಶಿಕ್ಷೆ
Team Udayavani, Jul 6, 2023, 2:55 PM IST
ಮೈಸೂರು: ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಮೈಸೂರಿನ ಐದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮೈಸೂರು ತಾಲೂಕಿನ ನಗರ್ತಹಳ್ಳಿ ಗ್ರಾಮದ ರಮೇಶ ನಾಯಕ ಶಿಕ್ಷೆಗೆ ಗುರಿಯಾದ ಅಪರಾಧಿ.
ಚಾಳಿ ಮುಂದುವರಿಸಿದ್ದ: ಈತ ತನ್ನ ಪತ್ನಿ ಕುಮಾರಿಯನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ. ಕುಡಿತದ ಚಟಕ್ಕೆ ದಾಸನಾಗಿದ್ದ ರಮೇಶ ನಾಯಕ ನಿತ್ಯ ಪತ್ನಿ ಕುಮಾರಿಯೊಂದಿಗೆ ಗಲಾಟೆ ಮಾಡಿ ಹೊಡೆಯುವುದು, ಬಡಿಯುವುದು ಮಾಡುತ್ತಿದ್ದ. ಈ ಬಗ್ಗೆ ನೆರೆ ನಿವಾಸಿಗಳು ಸಾಕಷ್ಟು ಬುದ್ದಿವಾದ ಹೇಳಿದರೂ ಚಾಳಿ ಮುಂದುವರಿಸಿದ್ದ.
ದೋಷಾರೋಪ ಪಟ್ಟಿ ಸಲ್ಲಿಕೆ: ಕಳೆದ 2021 ಫೆ.25 ರಂದು ಮನೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿಕೊಂಡು ಕಬ್ಬಿಣದ ಅಲ್ಲೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಜಯಪುರ ಠಾಣೆ ಪೊಲೀಸರು ಆರೋಪಿ ಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾ ರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಗುರುರಾಜ್ ಸೋಮಕ್ಕಲವರ್ ಅಪರಾಧಿಗೆ ಜೀವಾವಧಿ ಶಿಕ್ಷೆಯೊಂದಿಗೆ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಎಂ.ಎಸ್.ಮಂಜುಳಾ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
Hunsur: ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.