ಸಚಿವರು ಫಾರಿನ್‌ಟೂರ್‌ ಮುನ್ನ ರಾಜ್ಯ ಸುತ್ತಲಿ


Team Udayavani, Nov 24, 2018, 11:58 AM IST

m2-sachivaru.jpg

ಮೈಸೂರು: ಪ್ರಸ್ತುತ ಸಂದರ್ಭದಲ್ಲಿ ಸರ್ಕಾರ ಸೇರಿದಂತೆ ರಾಜ್ಯದ ಜನತೆಯಲ್ಲಿ ಸಮಗ್ರ ಕರ್ನಾಟಕದ ಭಾವನೆಗಳನ್ನು ಬಲಗೊಳಿಸಬೇಕಾದ ಅಗತ್ಯವಿದೆ ಎಂದು ನಾಡೋಜ ಪಾಟೀಲ ಪುಟ್ಟಪ್ಪ ಅಭಿಪ್ರಾಯಪಟ್ಟರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ನಗರದ ಕಲಾಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಕೋಟಿ ನೆನಪು ಕಾರ್ಯಕ್ರಮದಲ್ಲಿ “ಕೋಟಿ ಓದುಗರ ಆಂದೋಲನ’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ರಾಜ್ಯದ ಪ್ರತಿಯೊಬ್ಬರಲ್ಲೂ ಸಮಗ್ರ ಕರ್ನಾಟಕ ಎಂಬ ಭಾವನೆ ಇಲ್ಲದಂತಾಗಿದ್ದು, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ದಕ್ಷಿಣ ಕರ್ನಾಟಕ ಎಂಬ ಭಾವನೆ ಪ್ರತಿಯೊಬ್ಬರಲ್ಲಿದೆ.

ಈ ಭಾವನೆ ಎಲ್ಲರ ಮನಸ್ಸಿನಿಂದ ದೂರವಾಗಿ, ಸಮಗ್ರ ಕರ್ನಾಟನ ಎಂಬ ಭಾವನೆ ಎಲ್ಲರಲ್ಲೂ ಮೂಡಬೇಕಿದೆ ಎಂದು ತಿಳಿಸಿದರು. ಜನರು ಮಾತ್ರವಲ್ಲದೇ ಸರ್ಕಾರ ಮತ್ತು ಪತ್ರಿಕೆಗಳಲ್ಲೂ ಸಮಗ್ರ ಕರ್ನಾಟಕದ ಭಾವನೆ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಈ ನಿಟ್ಟಿನಲ್ಲಿ ಸಮಗ್ರ ಕರ್ನಾಟಕ ನಿರ್ಮಾಣಕ್ಕೆ ಹೋರಾಟ ನಡೆಯಬೇಕಿದೆ ಎಂದರು. 

ಅಲ್ಲದೇ ಭೌಗೋಳಿಕವಾಗಿ ಮಾತ್ರ ಸಮಗ್ರ ಕರ್ನಾಟಕವಾಗದೆ, ಮಾನಸಿಕವಾಗಿಯೂ ಸಮಗ್ರ ಕರ್ನಾಟಕವಾಗಿರಬೇಕಿದೆ. ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದಾಗ ಅದರ ಸಚಿವರು ಅಧ್ಯಯನದ ಹೆಸರಿನಲ್ಲಿ ಹೊರ ದೇಶಗಳಿಗೆ ಹೋಗುತ್ತಾರೆ. ಈ ರೀತಿಯಾಗಿ ಬೇರೆ ದೇಶಗಳಿಗೆ ಹೋಗುವ ಮೊದಲು ಕರ್ನಾಟಕವನ್ನು ಸುತ್ತಾಡಿ ಅಧ್ಯಯನ ನಡೆಸಬೇಕಿದೆ ಎಂದು ಸಲಹೆ ನೀಡಿದರು.

ಅದ್ಭುತ ಪತ್ರಿಕೋದ್ಯಮಿ: ರಾಜಶೇಖರ ಕೋಟಿ ಅದ್ಭುತ ಪತ್ರಿಕೋದ್ಯಮಿಯಾಗಿದ್ದು, ಇಂತಹ ಪತ್ರಿಕೋದ್ಯಮಿಯನ್ನು ಈವರೆಗೂ ಕಂಡಿಲ್ಲ. ತಮ್ಮ ಪತ್ರಿಕೆಯಲ್ಲಿ ಈವರೆಗೂ ಹಲವು ಮಂದಿ ಕೆಲಸ ಮಾಡಿದ್ದು, ನೆನಪಿನಲ್ಲಿ ಉಳಿಯುವ ಕೆಲವೇ ಮಂದಿಯಲ್ಲಿ ರಾಜಶೇಖರ ಕೋಟಿ ಸಹ ಒಬ್ಬರಾಗಿದ್ದಾರೆ. ಅವರು ಆರಂಭಿಸಿದ್ದ ಜಿಲ್ಲಾಮಟ್ಟದ ಪತ್ರಿಕೆಯಾದರೂ ಸಮಸ್ತ ಕರ್ನಾಟಕದ ಭಾವನೆ ಪತ್ರಿಕೆಯಲ್ಲಿತ್ತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನಸು ನನಸಾಗಿಸಿ: ಇದಕ್ಕೂ ಮುನ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ವಿ.ಶ್ರೀನಿವಾಸ್‌ ಪ್ರಸಾದ್‌, ಮಾನವೀಯ ಸಂಬಂಧಗಳನ್ನು ಹೊಂದಿದ್ದ ರಾಜಶೇಖರ ಕೋಟಿ, ಸಮಾಜದ ಎಲ್ಲಾ ವರ್ಗದವರ ಬಗ್ಗೆ ಅಪಾರ ಚಿಂತನೆ ಹೊಂದಿದ್ದರು. ಜಾತಿಯತೆ, ಅಸ್ಪೃಶ್ಯತೆ ಸೇರಿದಂತೆ ಸಮಾಜದ ಅನಿಷ್ಟ ಪದ್ಧತಿಗಳ ವಿರುದ್ಧ ದನಿಯಾಗಿದ್ದ ಅವರ ಆದರ್ಶ ವ್ಯಕ್ತಿತ್ವ ಸದಾ ಕಾಲ ನೆನಪಿನಲ್ಲಿ ಉಳಿಯಲಿದೆ. ರಾಜಶೇಖರ ಕೋಟಿ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನಿಸಬೇಕಿದೆ ಎಂದು ಸಲಹೆ ನೀಡಿದರು.

ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌. ವಿಶ್ವನಾಥ್‌ ಮಾತನಾಡಿ, ತಮ್ಮದೇ ಧಾಟಿಯಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ರಾಜಶೇಖರ ಕೋಟಿ ಎಂದಿಗೂ ರಾಜಕೀಯ ವ್ಯಕ್ತಿಗಳು, ಅಧಿಕಾರಿಗಳ ಎದುರು ಮಂಡಿಯೂರಿ ಕುಳಿತವರಲ್ಲ. ಇತ್ತೀಚಿನ ದಿನಗಳಲ್ಲಿ ಮಾಧ್ಯಮದ ಮೂಲಕ ಸುಳ್ಳು ಸುದ್ದಿಗಳನ್ನು ಹರಡಿಸಿ, ಜಗತ್ತನ್ನೇ ಸುಡುವಂತೆ ಮಾಡಲಾಗುತ್ತಿದೆ. ಆದರೆ, ರಾಜಶೇಖರ ಕೋಟಿ ಅವರು ಇದಕ್ಕೆ ಹೊರತಾಗಿ, ಜನರ ನಡುವೆ ಬೆರೆತು ಬದುಕಿದವರು ಎಂದು ಬಣ್ಣಿಸಿದರು. 

ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಮಾತನಾಡಿ, ಶೋಷಿತರ ದನಿಯಾಗಿದ್ದ ರಾಜಶೇಖರ ಕೋಟಿ ಕಲೆ, ಸಾಹಿತ್ಯ, ಕ್ರೀಡೆ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದರು. ಆದರ್ಶ ವ್ಯಕ್ತಿತ್ವವನ್ನು ಹೊಂದಿದ್ದ ಅವರ ಸೇವೆ, ನೆನಪನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಿದೆ ಎಂದು ಹೇಳಿದರು.

“ಕೋಟಿ ಓದುಗರ ಆಂದೋಲನ’ ಬಿಡುಗಡೆ: ಸಮಾರಂಭದಲ್ಲಿ “ಕೋಟಿ ಓದುಗರ ಆಂದೋಲನ’ ಕೃತಿಯನ್ನು ವಿಶಿಷ್ಟ ರೀತಿಯಲ್ಲಿ ಬಿಡುಗಡೆ ಮಾಡಲಾಯಿತು. ನೆರೆದಿದ್ದ ಗಣ್ಯರೊಂದಿಗೆ ಒಡನಾಡಿ, ಶಕ್ತಿಧಾಮ, ಆರ್‌ಎಲ್‌ಪಿ, ಆಟೋ ಚಾಲಕರು, ತರಕಾರಿ ಮಾರುಕಟ್ಟೆ ಸಂಘದ ಪ್ರತಿನಿಧಿಗಳು, ಪತ್ರಿಕಾ ವಿತರಕರು ಸೇರಿ ಬಿಡುಗಡೆ ಮಾಡಿದರು.

ಬಿಡುಗಡೆಯಾದ “ಕೋಟಿ ಓದುಗರ ಆಂದೋಲನ’ ಕೃತಿಯ ಪ್ರಥಮ ಪ್ರತಿಯನ್ನು ರಾಜಶೇಖರ ಕೋಟಿ ಅವರ ಕುಟುಂಬದವರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸದ ಆರ್‌. ಧ್ರುವನಾರಾಯಣ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌, ಪತ್ರಿಕೋದ್ಯಮಿ ಕೆ.ಬಿ. ಗಣಪತಿ, ಸಮಾಜವಾದಿ ಚಿಂತಕ ಪ.ಮಲ್ಲೇಶ್‌, ಸಂಹವನ ಪ್ರಕಾಶನದ ಡಿ.ಎನ್‌.ಲೋಕಪ್ಪ, ಪತ್ರಕರ್ತ ಅಂಶಿ ಪ್ರಸನ್ನಕುಮಾರ್‌, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ. ಮಹೇಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.