ಡಿಸ್ನಿಲ್ಯಾಂಡ್ ವಿರೋಧಿಸಿ ತಮಟೆ ಚಳವಳಿ
Team Udayavani, Jan 14, 2019, 7:00 AM IST
ಮೈಸೂರು: ವಿಶ್ವವಿಖ್ಯಾತ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ಬಳಿ ರಾಜ್ಯ ಸರ್ಕಾರ ಸಹಸ್ರಾರು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಡಿಸ್ನಿಲ್ಯಾಂಡ್ ಯೋಜನೆಯನ್ನು ಕೈಬಿಡದಿದ್ದಲ್ಲಿ ಕರ್ನಾಟಕ ಬಂದ್ ಮಾಡಬೇಕಾಗುತ್ತದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.
ಮೈಸೂರು ನಗರ ರೈಲು ನಿಲ್ದಾಣದ ಬಳಿ ಭಾನುವಾರ ತಮಟೆ ಚಳವಳಿ ನಡೆಸಿದ ಅವರು, ಕೆಆರ್‌ಎಸ್‌ನಲ್ಲಿ ರಾಜ್ಯ ಸರ್ಕಾರ ಡಿಸ್ನಿಲ್ಯಾಂಡ್ ಮಾಡಲು ಹೊರಟಿರುವುದು ಸರಿಯಲ್ಲ. ಈ ಕಾಮಗಾರಿಯಿಂದ ಕೆಆರ್‌ಎಸ್ ಜಲಾಶಯದ ತಳಪಾಯಕ್ಕೆ ಧಕ್ಕೆಯಾಗುತ್ತದೆ. ಹೀಗಾಗಿ ಸರ್ಕಾರ ಕೂಡಲೇ ಈ ಯೋಜನೆಯನ್ನು ಕೈ ಬಿಡಬೇಕು. ಇಲ್ಲವಾದಲ್ಲಿ ಹಂತ ಹಂತವಾಗಿ ಹೋರಾಟ ನಡೆಸಲಾಗುವುದು.
ಕರ್ನಾಟಕ ಬಂದ್, ಕೆಆರ್‌ಎಸ್‌ಗೆ ಮುತ್ತಿಗೆಯಂತಹ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಕನ್ನಡ ಪರ ಹೋರಾಟಗಾರರಾದ ಮೂಗೂರು ನಂಜುಂಡಸ್ವಾಮಿ, ಎಂ.ಚಂದ್ರಶೇಖರ್, ಗಿರೀಶ್ ಗೌಡ ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
MUST WATCH
ಹೊಸ ಸೇರ್ಪಡೆ
Chandan Shetty: ಕಾಟನ್ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Sullia: ಅಸ್ವಸ್ಥ ಮಹಿಳೆ ಸಾವು
ITF Open: ಬೆಂಗಳೂರು ಐಟಿಎಫ್ ಟೆನಿಸ್‌ಗೆ ಅಗ್ರ 100 ರ್‍ಯಾಂಕ್‌ನ ನಾಲ್ವರು
Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.