ರಾಘವೇಂದ್ರಮಠದ ಸಭಾಭವನ ಉದ್ಘಾಟನೆ


Team Udayavani, Dec 22, 2018, 11:25 AM IST

m2-raghavendara.jpg

ಹುಣಸೂರು: ನಗರದ ಬ್ರಾಹ್ಮಣರ ಬೀದಿಯ ಗುರುರಾಘವೇಂದ್ರ ಮಠದ ಸಭಾ ಭವನವನ್ನು ಉಡುಪಿ ಪೇಜಾವರ ಶ್ರೀ ಹಾಗೂ  ವಿಶ್ವ ಪ್ರಸನ್ನ ತೀರ್ಥ ಸ್ವಾಮಿ ಸಮ್ಮುಖದಲ್ಲಿ ಶುಕ್ರವಾರ ವಿಧ್ಯುಕ್ತವಾಗಿ ಉದ್ಘಾಟಿಸಲಾಯಿತು. ಶುಕ್ರವಾರ ಬೆಳಗಿನ ಜಾವದಿಂದಲೇ ಸಭಾಭವನದಲ್ಲಿ ವಿವಿಧ ಹೋಮ, ಹವನ ನೆರವೇರಿಸಲಾಯಿತು. ಬಳಿಕ ಸ್ವಾಮಿಗಳು ದೇವರಿಗೆ ಸಂಸ್ಥಾನ ಪೂಜೆ ನೆರವೇರಿಸಿದರು. 

ಬಳಿಕ ಧಾರ್ಮಿಕ ಸಭೆಯಲ್ಲಿ ಪ್ರವಚನ ನೀಡಿದ ಪೇಜಾವರ ಶ್ರೀ, ಹುಣಸೂರಲ್ಲಿ ರಾಯರ ಪ್ರೇರಣೆಯಿಂದ ಭಕ್ತರು ಹಾಗೂ ದಾನಿಗಳ ನೆರವಿನಿಂದ ಸುಂದರ ಮೃತಿಕಾ ಬೃಂದಾವನದ ಮಠ ನಿರ್ಮಿಸಿದ್ದಾರೆ. ಇದಕ್ಕೆ ಪೂರಕವಾಗಿ ಸಭಾ ಭವನ ನಿರ್ಮಿಸಿರುವುದು ಹೆಮ್ಮೆಯ ವಿಷಯ.

ಮಠ ದೇವರ ಸೇವೆಗಿದ್ದರೆ, ಸಭಾ ಭವನ ಲೋಕಕಲ್ಯಾಣಕ್ಕಾಗಿ ಬಳಸಿಕೊಳ್ಳಬಹುದು. ಭವನದಲ್ಲಿ ಸಾಮಾಜಿಕ, ಅಧ್ಯಾತ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಬಹುದು. ಒಂದು ದೇವರ ಭವನ ಮತ್ತೂಂದು ಭಕ್ತರ ಭವನ ಒಂದೆಡೆ ನಿರ್ಮಿಸಿರುವುದು ಎರಡೂ ಕಾರ್ಯಗಳಿಗೆ ಪೂರಕವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪೇಜಾವರ ಮಠದ ಕಿರಿಯ ಶ್ರೀ ವಿಶ್ವ ಪ್ರಸನ್ನ ತೀರ್ಥಸ್ವಾಮಿ ಮಾತನಾಡಿ, ಈ ಮಠ, ಸಭಾ ಭವನ ಭಗವಂತನ ಕೃಪೆಯಿಂದ ನಿರ್ಮಾಣವಾಗಿವೆ. ಭಕ್ತರು ಕೈಜೋಡಿಸಿದರೆ ಇಂತಹ ಭವನಗಳು ನಿರ್ಮಾಣಗೊಳ್ಳಲಿವೆ ಎಂದರು. ಬಳಿಕ ಡಾ.ಹ.ರ.ನಾಗರಾಜಾಚಾರ್‌ ಪ್ರವಚನ ನೀಡಿದರು. ಬೆಂಗಳೂರು ನಾಗರಬಾವಿಯ ಅಂಬಿಕಾ ಮತ್ತು ತಂಡದವರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. 

ಈ ವೇಳೆ ನಗರಸಭಾ ಅಧ್ಯಕ್ಷ ಎಚ್‌.ವೈ.ಮಹದೇವ್‌, ಸಮಿತಿ ಕಾರ್ಯದರ್ಶಿ ಎ.ಎಸ್‌.ಸತೀಶ್‌, ಅಧ್ಯಕ್ಷ ವಾದಿರಾಜ ಭಟ್‌, ನಗರಸಭಾ ಸದಸ್ಯೆ ಸುನಿತಾ, ಬ್ಯಾಂಕ್‌ ಸತ್ಯನಾರಾಯಣರಾವ್‌, ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ  ವಕೀಲ ಸಿ.ಎಸ್‌.ಶ್ರೀಧರ್‌, ವಿಪ್ರವನಿತಾ ಸಮಾಜದ ಅಧ್ಯಕ್ಷೆ ಸತ್ಯವತಿ, ಮಠದ ಟ್ರಸ್ಟಿ ನಾಗರಾಜ್‌, ದಾನಿ ವಿದ್ಯಾಪ್ರಕಾಶ್‌, ರಾಜಾರಾಂ, ಸುಬ್ರಹ್ಮಣ್ಯ ಇತರರಿದ್ದರು.

ಟಾಪ್ ನ್ಯೂಸ್

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.