ಬಿಜೆಪಿ ದೂರವಿಡಲು ಚುನಾವಣೆ ಮುಂದೂಡಿಕೆ
Team Udayavani, Jun 24, 2018, 11:51 AM IST
ಮೈಸೂರು: ಕೋರಂ ಕೊರತೆ ಮೈಸೂರು ಜಿಪಂ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗಾಗಿ ಶನಿವಾರ ಕರೆದಿದ್ದ ಚುನಾವಣಾ ಸಭೆ ಮುಂದೂಡಲಾಗಿದೆ. ಅಧ್ಯಕ್ಷೆ ನಯಿಮಾ ಸುಲ್ತಾನ ಅಧ್ಯಕ್ಷತೆಯಲ್ಲಿ ಬೆಳಗ್ಗೆ 11ಗಂಟೆಗೆ ಸಭೆ ಕರೆಯಲಾಗಿತ್ತು.
ಆದರೆ, ರಾಜ್ಯಮಟ್ಟದ ನಾಯಕರ ತೀರ್ಮಾನದಂತೆ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ಕಾಂಗ್ರೆಸ್, ಜಿಪಂನಲ್ಲೂ ಜೆಡಿಎಸ್ ಜೊತೆಗೆ ಮೈತ್ರಿಗೆ ಮುಂದಾಗಿದೆ. ಪಕ್ಷದ ನಾಯಕರ ಸೂಚನೆ ಮೇರೆಗೆ ಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
49 ಸದಸ್ಯ ಬಲದ ಮೈಸೂರು ಜಿಪಂಯಲ್ಲಿ ಇಬ್ಬರು ಸದಸ್ಯರ ರಾಜೀನಾಮೆಯಿಂದ ಎರಡು ಸ್ಥಾನಗಳು ತೆರವಾಗಿರುವುದರಿಂದ 47 ಸದಸ್ಯರಿದ್ದಾರೆ. ಈ ಪೈಕಿ ಕಾಂಗ್ರೆಸ್ 22, ಜೆಡಿಎಸ್ 16, ಬಿಜೆಪಿ 8 ಸದಸ್ಯರನ್ನು ಹೊಂದಿದ್ದು, ಓರ್ವ ಪಕ್ಷೇತರರಿದ್ದಾರೆ.
ಸಂಸದರಾದ ಕಾಂಗ್ರೆಸ್‌ನ ಆರ್.ಧ್ರುವನಾರಾಯಣ, ಬಿಜೆಪಿಯ ಪ್ರತಾಪ್ ಸಿಂಹ, ಜೆಡಿಎಸ್ ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಕಾಂಗ್ರೆಸ್ ಶಾಸಕರಾದ ಅನಿಲ್ ಚಿಕ್ಕಮಾದು, ತನ್ವೀರ್, ಡಾ.ಯತೀಂದ್ರ, ವಿಧಾನಪರಿಷತ್ ಸದಸ್ಯ ಆರ್.ಧರ್ಮಸೇನ, ಜೆಡಿಎಸ್ ಶಾಸಕರಾದ ಅಡಗೂರು ಎಚ್.ವಿಶ್ವನಾಥ್,
ಅಶ್ವಿನ್‌ಕುಮಾರ್, ಕೆ.ಮಹದೇವ, ವಿಧಾನಪರಿಷತ್ ಸದಸ್ಯರಾದ ಸಂದೇಶ್ ನಾಗರಾಜು, ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಬಿಜೆಪಿ ಶಾಸಕರಾದ ಬಿ.ಹರ್ಷವರ್ಧನ, ಎಲ್.ನಾಗೇಂದ್ರ, ಎಸ್.ಎ.ರಾಮದಾಸ್ ಸೇರಿದಂತೆ ಜಿಲ್ಲೆಯ ಏಳು ತಾಪಂ ಅಧ್ಯಕ್ಷರು ಚುನಾವಣೆಯಲ್ಲಿ ಮತದಾನದ ಹಕ್ಕು ಹೊಂದಿದ್ದು, ಒಟ್ಟು 71 ಸದಸ್ಯರಾಗಲಿದ್ದು,
ಸಭೆ ನಡೆಸಲು 36 ಸದಸ್ಯರ ಹಾಜರಿ ಅವಶ್ಯ. ಆದರೆ, ಸಭೆ ಆರಂಭವಾದಾಗ ಹಾಜರಿದ್ದವರು 23 ಸದಸ್ಯರು ಮಾತ್ರ, ಶಾಸಕ, ಸಂಸದರು ಈ ಸಭೆಯತ್ತ ಬರಲೇ ಇಲ್ಲ. ಹೀಗಾಗಿ ಅಧ್ಯಕ್ಷೆ ನಯಿಮಾ ಸುಲ್ತಾನ ಏಕಾಏಕಿ ಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದು ಸ್ವಪಕ್ಷ ಜೆಡಿಎಸ್ ಸದಸ್ಯರನ್ನೇ ಕೆರಳಿಸಿತು.
ಸಾಮಾನ್ಯ ಸ್ಥಾಯಿ ಸಮಿತಿ-6, ಹಣಕಾಸು ಸ್ಥಾಯಿ ಸಮಿತಿ-6, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ-7, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ-7, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ-7 ಸದಸ್ಯರ ಆಯ್ಕೆಗೆ ಬೆಳಗ್ಗೆ 11ಗಂಟೆಗೆ ಸಭೆ ಕರೆಯಲಾಗಿದ್ದರೂ ಸಂಸದ ಆರ್.ಧ್ರುವನಾರಾಯಣ
ನೇತೃತ್ವದಲ್ಲಿ ಜಲದರ್ಶಿನಿ ಅತಿಥಿ ಗೃಹದಲ್ಲಿ ಜಿಪಂ ಕಾಂಗ್ರೆಸ್ ಸದಸ್ಯರ ಸಭೆ ನಡೆದ ಕಾರಣ, 10 ನಿಮಿಷ ತಡವಾಗಿ ಬಂದರು. 11.22ಕ್ಕೆ ಸಭಾಂಗಣಕ್ಕೆ ಆಗಮಿಸಿದ ಅಧ್ಯಕ್ಷೆ ನಯಿಮಾ ಸುಲ್ತಾನ ಕೋರಂ ಅಭಾವವಿರುವುದರಿಂದ ಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿರುವುದಾಗಿ ಪ್ರಕಟಿಸಿದರು.
ಅಧ್ಯಕ್ಷರ ರೂಲಿಂಗ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜೆಡಿಎಸ್‌ನ ಬೀರಿಹುಂಡಿ ಬಸವಣ್ಣ, ಸ್ಥಾಯಿ ಸಮಿತಿ ಸದಸ್ಯರ ಅವಧಿ ಮುಗಿದು ಮೂರು ತಿಂಗಳಾಗಿದೆ. ಏಪ್ರಿಲ್ 29ಕ್ಕೆ ಸ್ಥಾಯಿ ಸಮಿತಿ ಚುನಾವಣೆ ನಿಗಧಿಯಾಗಿತ್ತು. ನೀತಿಸಂಹಿತೆ ಜಾರಿಯಾದ ಕಾರಣದಿಂದ ನಡೆದಿಲ್ಲ. ಹೀಗಾಗಿ ಇಂದೇ ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ದಿನಾಂಕ ನಿಗದಿ ಮಾಡಿ ಎಂದು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನಯಿಮಾ ಸುಲ್ತಾನ, ಪಕ್ಷದ ವರಿಷ್ಠರ ಜೊತೆಗೆ ಮಾತನಾಡಿ, ಒಂದೆರಡು ದಿನಗಳಲ್ಲಿ ದಿನಾಂಕ ತಿಳಿಸುವುದಾಗಿ ಹೇಳಿದರು.
ಜೆಡಿಎಸ್‌ನ ಎಂ.ಪಿ.ನಾಗರಾಜು ಮಾತನಾಡಿ, ಅಧ್ಯಕ್ಷರು ಆಡಳಿತ ನಡೆಸುವಲ್ಲಿ ವಿಫಲರಾಗಿದ್ದೀರಿ, ಮೊದಲೇ ವರಿಷ್ಠರ ಜೊತೆ ಚರ್ಚೆ ನಡೆಸಿ ತೀರ್ಮಾನಿಸಿಕೊಂಡು ಸಭೆಗೆ ಬರಬೇಕೆಂದರು.
ಜಿಪಂ ವ್ಯವಸ್ಥೆಯಲ್ಲೇ ಈ ರೀತಿ ಎಂದೂ ಸಭೆ ನಡೆದಿಲ್ಲ. ಕೋರಂ ಕೊರತೆ ಇದ್ದರೆ ಅರ್ಧ ಗಂಟೆ ಮುಂದೂಡಬೇಕು, ಏಕಾಏಕಿ ಅನಿರ್ದಿಷ್ಟಾವಧಿ ಮುಂದೂಡುವುದಲ್ಲ ಎಂದು ಬೀರಿಹುಂಡಿ ಬಸವಣ್ಣ ಆಕ್ಷೇಪ ವ್ಯಕ್ತಪಡಿಸಿದರು.
ಅಧ್ಯಕ್ಷರು ಮೌನ ವಹಿಸಿದಾಗ ಜಿಪಂ ಸಿಇಒ ಅನುಪಸ್ಥಿತಿಯಲ್ಲಿ ಸಭೆಯಲ್ಲಿದ್ದ ಉಪ ಕಾರ್ಯದರ್ಶಿ ಕೆ.ಶಿವರಾಮೇಗೌಡ, ಸಭೆ ಮುಂದೂಡಿರುವುದನ್ನು ಪ್ರಕಟಿಸಿ ಹೊರ ನಡೆದರು. ಆಗಲೂ ಜೆಡಿಎಸ್ ಸದಸ್ಯರು ಅಧ್ಯಕ್ಷರ ಮೇಲೆ ವಾಗ್ಧಾಳಿ ನಡೆಸಿದ್ದರಿಂದ ಕಾಂಗ್ರೆಸ್‌ನ ಡಿ.ರವಿಶಂಕರ್, ಸಭೆ ಮುಂದೂಡಿ ರೂಲಿಂಗ್ ಕೊಟ್ಟ ಮೇಲೆ ಏಕೆ ಮಾತಾಡ್ತೀರಾ ಎಂದು ಜೆಡಿಎಸ್ ಸದಸ್ಯರೊಂದಿಗೆಗೆ ವಾಗ್ವಾದ ನಡೆಸಿದರು.
ಬಳಿಕ ಮತ್ತೆ ಅಧ್ಯಕ್ಷರನ್ನು ಸಭಾಂಗಣಕ್ಕೆ ಕರೆಸಿ ಅರ್ಧಗಂಟೆ ಸಭೆ ಮುಂದೂಡಿಸಲಾಯಿತು. ಬಳಿಕ ಕೋರಂ ಸೇರದ್ದರಿಂದ 8-10 ದಿನಗಳಲ್ಲಿ ಸಭೆ ಕರೆಯುವುದಾಗಿ ಅಧ್ಯಕ್ಷೆ ನಯಿಮಾ ಸುಲ್ತಾನ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
MUST WATCH
ಹೊಸ ಸೇರ್ಪಡೆ
ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ
Naxal Surrender: ನಕ್ಸಲ್ ಶರಣಾಗತಿ ಪೂರ್ವಯೋಜಿತ ಸ್ಟೇಜ್ ಶೋ ಅಲ್ಲವೇ?
Finance Debt: ಫೈನಾನ್ಸ್ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!
Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ
Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.