ಸಾಂಸ್ಕೃತಿಕ ನಗರಿಯ ಹೆಮ್ಮೆಯ ಪುತ್ರ


Team Udayavani, May 8, 2018, 3:00 PM IST

m1-samskritika.jpg

ಮೈಸೂರು: ಜಿಲ್ಲೆಯ ಶೈಕ್ಷಣಿಕ ಪ್ರಗತಿ ಬಿಂಬಿಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಟಾಪ್‌-10 ಪಟ್ಟಿಯಲ್ಲಿ ಸ್ಥಾನ ಪಡೆಯುವ ಶಿಕ್ಷಣ ಇಲಾಖೆಯ ಲೆಕ್ಕಾಚಾರ ಈ ಬಾರಿಯೂ ಕನಸಾಗಿಯೇ ಉಳಿದಿದೆ. ಕಳೆದ ಸಾಲಿನಲ್ಲಿ 21ನೇ ಸ್ಥಾನಕ್ಕೆ ಕುಸಿದಿದ್ದ ಮೈಸೂರು ಈ ಬಾರಿ 11ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.

2017-18ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫ‌ಲಿತಾಂಶ ಸೋಮವಾರ ಪ್ರಕಟವಾಗಿದೆ. ಕಳೆದ ಸಾಲಿಗೆ ಹೋಲಿಸಿದರೆ ಈ ಬಾರಿಯ ಫ‌ಲಿತಾಂಶದಲ್ಲಿ ಸ್ವಲ್ಪ ಮಟ್ಟಿಗೆ ಉತ್ತಮವಾಗಿದೆ. ಕಳೆದ ಸಾಲಿನಲ್ಲಿ ಶೇ.72.29 ಫ‌ಲಿತಾಂಶದೊಂದಿಗೆ 21ನೇ ಸ್ಥಾನ ಪಡೆದಿದ್ದ ಮೈಸೂರು ಈ ಬಾರಿ, ಶೇ.10.97 ಹೆಚ್ಚುವರಿ ಫ‌ಲಿತಾಂಶದೊಂದಿಗೆ ಶೇ.82.9 ಫ‌ಲಿತಾಂಶ ಪಡೆಯುವ ಮೂಲಕ 11ನೇ ಸ್ಥಾನಕ್ಕೆ ಏರಿದೆ.

ಜಿಲ್ಲೆಯಲ್ಲಿ ಬಾಲಕ ಹಾಗೂ ಬಾಲಕಿಯರು ಸೇರಿದಂತೆ ಒಟ್ಟು 40,516 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಕಳೆದ 2012ನೇ ಸಾಲಿನಿಂದಲೂ ಎಸ್‌ಎಸ್‌ಎಲ್‌ಸಿ ಫ‌ಲಿತಾಂಶದಲ್ಲಿ ಟಾಪ್‌-10 ಸ್ಥಾನ ಪಡೆಯುವ ನಿರೀಕ್ಷೆ ಹೊಂದಿರುವ ಮೈಸೂರು 2016ರಲ್ಲಿ 8ನೇ ಸ್ಥಾನ ಪಡೆದಿದ್ದು, ಹೊರತುಪಡಿಸಿದರೆ ನಂತರದ ವರ್ಷಗಳಲ್ಲಿ ಟಾಪ್‌-10ನಲ್ಲಿ ಕಾಣಿಸಿಕೊಳ್ಳಲು ವಿಫ‌ಲವಾಗಿದೆ.

ನಂ.1 ಪಡೆದ ಯಶಸ್‌: ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರ ತವರು ಜಿಲ್ಲೆಯಾಗಿರುವ ಮೈಸೂರಿನ ಸದ್ವಿದ್ಯಾ ಶಾಲೆಯ ವಿದ್ಯಾರ್ಥಿ ಎಂ.ಎಸ್‌.ಯಶಸ್‌, ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾನೆ.

ಇವರೊಂದಿಗೆ ಇದೇ ಶಾಲೆಯ ವಿದ್ಯಾರ್ಥಿಗಳಾದ ಅದಿತಿ ರಾವ್‌ ಮತ್ತು ಕೀರ್ತನಾ  625ಕ್ಕೆ 624 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಇದಲ್ಲದೆ ನಗರದ ಮರಿಮಲ್ಲಪ್ಪ ಶಾಲೆಯ ಶಿವಾನಿ ಎಂ.ಭಟ್‌, ವಿವಿಎಸ್‌ ಪಂಡಿತ್‌ ನೆಹರು ಪ್ರೌಢಶಾಲೆಯ ಸ್ಪಂದನ ದೇವ್‌ ಹಾಗೂ ಸೇಂಟ್‌ ಥಾಮಸ್‌ ಪ್ರೌಢಶಾಲೆಯ ಕೆ.ಆರ್‌.ನಂದಿನಿ ಕೂಡ 624 ಅಂಕ ಪಡೆಯುವ ಮೂಲಕ ಜಿಲ್ಲೆ ಹಾಗೂ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.

ಫ‌ಲಿನೀಡಿದ ಪರಿಶ್ರಮ: ಸಿಎಂ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ತನ್ವೀರ್‌ಸೇಠ್ ಅವರ ತವರು ಮೈಸೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫ‌ಲಿತಾಂಶವನ್ನು ಸುಧಾರಿಸಲು ಶಿಕ್ಷಣ ಇಲಾಖೆ ಹಲವು ಪ್ರಯತ್ನಗಳನ್ನು ನಡೆಸಿತ್ತು.

ಪರೀಕ್ಷೆ ಹಿನ್ನೆಲೆಯಲ್ಲಿ 2017ರ ನವೆಂಬರ್‌ನಿಂದಲೇ ಜಿಲ್ಲೆಯ ಎಲ್ಲಾ ಶಾಲೆಗಳಿಗೆ (ಸರ್ಕಾರಿ, ಖಾಸಗಿ ಮತ್ತು ಅನುದಾನ) ಪ್ರತಿ ವಿಷಯಗಳಿಗೆ ಕೆಲಸ ಪುಸ್ತಕಗಳನ್ನು ಒದಗಿಸಿದ್ದು, ಈ ಪುಸ್ತಕಗಳಲ್ಲಿರುವ ಪ್ರಶ್ನೋತ್ತರಗಳನ್ನು ವಿದ್ಯಾರ್ಥಿಗಳು ಚೆನ್ನಾಗಿ ಕಲಿತಿದ್ದಾರೆ. ಇದರ ಫ‌ಲವಾಗಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫ‌ಲಿತಾಂಶದಲ್ಲಿ ಸುಧಾರಣೆ ಉಂಟಾಗಲು ಕಾರಣವಾಗಿದೆ.

ಬಾಲಕಿಯರೇ ಮೇಲುಗೈ: ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫ‌ಲಿತಾಂಶದಲ್ಲಿ ಪ್ರತಿ ಬಾರಿಯಂತೆ ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಜಿಲ್ಲೆಯಲ್ಲಿ ಬಾಲಕ ಹಾಗೂ ಬಾಲಕಿಯರು ಸೇರಿದಂತೆ ಒಟ್ಟು 33,617 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 27,869 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನೂ ಪರೀಕ್ಷೆಗೆ ಹಾಜರಾಗಿದ್ದ 16,917 ಬಾಲಕಿಯರಲ್ಲಿ 14,525 ಮಂದಿ ತೇರ್ಗಡೆಯಾಗಿ ಶೇ.86.41 ಫ‌ಲಿತಾಂಶ ಪಡೆದರೆ,

ಪರೀಕ್ಷೆ ಎದುರಿಸಿದ್ದ 16,700 ಬಾಲಕರಲ್ಲಿ 13,344 ಬಾಲಕರು ಉತ್ತೀರ್ಣರಾಗಿದ್ದು, ಶೇ.82.75 ಫ‌ಲಿತಾಂಶ ಪಡೆದಿದ್ದಾರೆ. ಮೈಸೂರು ಜಿಲ್ಲೆಯ 7 ತಾಲೂಕು ಸೇರಿದಂತೆ ಒಟ್ಟು 9 ವಿಭಾಗಗಳ ಪೈಕಿ ಪಿರಿಯಾಪಟ್ಟಣ ತಾಲೂಕಿನಲ್ಲಿ ಪರೀಕ್ಷೆ ಬರೆದಿದ್ದ 2,743 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.92.64 ಫ‌ಲಿತಾಂಶದೊಂದಿಗೆ ಜಿಲ್ಲೆಗೆ ಅಗ್ರಸ್ಥಾನ ಪಡೆದರೆ, ತಿ.ನರಸೀಪುರ ತಾಲೂಕು ಶೇ.75.78 ಫ‌ಲಿತಾಂಶದೊಂದಿಗೆ 9ನೇ ಸ್ಥಾನ ಪಡೆದಿದೆ.

ಮೈಸೂರು ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫ‌ಲಿತಾಂಶ
2012    12ನೇ ಸ್ಥಾನ
2013    20ನೇ ಸ್ಥಾನ
2014    23ನೇ ಸ್ಥಾನ
2015    10ನೇ ಸ್ಥಾನ
2016    8ನೇ ಸ್ಥಾನ
2017    21ನೇ ಸ್ಥಾನ
2018    11ನೇ ಸ್ಥಾನ

ಪರೀಕ್ಷೆಗೆ ಯಾವುದೇ ವಿಶೇಷ ತಯಾರಿ ಮಾಡದೆ, ಪ್ರತಿದಿನ ಶಾಲೆಯಲ್ಲಿ ಮಾಡಿದ ಪಾಠಗಳನ್ನು ಮನೆಗೆ ಬಂದು ವ್ಯಾಸಂಗ ಮಾಡುತ್ತಿದ್ದೆ. ದಿನದ 24 ಗಂಟೆಗಳ ಕಾಲ ಓದಿನಲ್ಲಿ ತೊಡಗದೆ, ಆಟೋಟಗಳಲ್ಲಿ ಭಾಗವಹಿಸುತ್ತಿದ್ದೆ. ಪರೀಕ್ಷೆ ಸಮಯದಲ್ಲಿ ಮಾತ್ರ ಓದಿನಲ್ಲಿ ತೊಡಗದೆ, ಮೊದಲಿನಿಂದಲೂ ಅಂದಿನ ಪಾಠಗಳನ್ನು ಓದುತ್ತಿದ್ದ ಕಾರಣ ಉತ್ತಮ ಫ‌ಲಿತಾಂಶ ಬರಲು ಸಾಧ್ಯವಾಯಿತು. ಟಾಪ್‌-5ನಲ್ಲಿ ಬರುತ್ತೇನೆಂಬ ನಿರೀಕ್ಷೆ ಇತ್ತು, ಇದೀಗ ಟಾಪ್‌-1 ಬಂದಿರುವುದು ಖುಷಿಯಾಗಿದೆ. ನನ್ನ ಸಾಧನೆಗೆ ತಂದೆ-ತಾಯಿ, ಶಿಕ್ಷಕರು ಸೇರಿದಂತೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದೆ ಏರೋನಾಟಿಕಲ್‌ ಎಂಜಿನಿಯರ್‌ ಆಗುವ ಆಸೆ ಇದ್ದು, ಇದಕ್ಕಾಗಿ ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆಯಬೇಕಿದೆ.
-ಎಂ.ಎಸ್‌.ಯಶಸ್‌, ಟಾಪ್‌-1 ಸ್ಥಾನ ಪಡೆದ ವಿದ್ಯಾರ್ಥಿ.

ರಾಜ್ಯಕ್ಕೆ ಮೊದಲ ಸ್ಥಾನ ಪಡೆಯುವ ನಿರೀಕ್ಷೆ ಹೊಂದಿದ್ದೆ. ಆದರೆ 624 ಅಂಗ ಪಡೆದಿರುವುದು ಸಂತಸ ತಂದಿದೆ. ಶಾಲೆಯಲ್ಲಿ ಪ್ರತಿದಿನ ಮಾಡುವ ಪಾಠಗಳನ್ನು ಅಂದೇ ಓದುತ್ತಿದ್ದ ಕಾರಣ ಪರೀಕ್ಷೆಯಲ್ಲಿ ಅನುಕೂಲವಾಯಿತು. ಅಬ್ದುಲ್‌ ಕಲಾಂ ಅವರಿಂದ ಸ್ಫೂರ್ತಿ ಪಡೆದಿರುವ ತಾವು, ದ್ವಿತೀಯ ಪಿಯುಸಿಯಲ್ಲಿ ಪಿಸಿಎಂಸಿ ವ್ಯಾಸಂಗ ಮಾಡಲಿದ್ದು, ಮುಂದೆ ಏರೋನಾಟಿಕಲ್‌ ಎಂಜಿನಿಯರ್‌ ಆಗುವ ಕನಸು ಹೊಂದಿದ್ದೇನೆ.
-ಆರ್‌.ಕೀರ್ತನಾ, 624 ಅಂಕ ಪಡೆದ ವಿದ್ಯಾರ್ಥಿನಿ

ತರಗತಿ ಆರಂಭದಿಂದಲೂ ಪ್ರತಿದಿನದ ಪಠ್ಯವನ್ನು ಅದೇ ದಿನದಲ್ಲಿ ವ್ಯಾಸಂಗ ಮಾಡುತ್ತಿದ್ದೆ. ನಿತ್ಯವೂ 3 ಗಂಟೆಗಳ ಕಾಲ ಓದುವ ಅಭ್ಯಾಸ ಮಾಡುತ್ತಿದ್ದೆ. ಓದಿನ ಜತೆಗೆ ಹಾಡುಗಾರಿಕೆ ಹಾಗೂ ಚಿತ್ರಕಲೆಯ ಹವ್ಯಾಸ ಹೊಂದಿದ್ದೇನೆ. ಪೋಷಕರು, ಶಿಕ್ಷಕರ ಪೋ›ತ್ಸಾಹ, ಮಾರ್ಗದರ್ಶನ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಾಯಿತು.
-ಶಿವಾನಿ ಎಂ.ಭಟ್‌, ಮರಿಮಲ್ಲಪ್ಪ ಶಾಲೆ ವಿದ್ಯಾರ್ಥಿ

ಟಾಪ್ ನ್ಯೂಸ್

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

12(1

Gudibande: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.