ಪೇದೆಯ ಕಳಪೆ ಹೆಲ್ಮೆಟ್ ಒಡೆದು ಹಾಕಿದ ಸಾರ್ವಜನಿಕರು!
Team Udayavani, Jan 4, 2018, 12:27 PM IST
ಮೈಸೂರು: ಪೊಲೀಸ್ ಪೇದೆಯ ಕಳಪೆ ಹೆಲ್ಮೆಟನ್ನೇ ಕಿತ್ತು ಒಡೆದು ಹಾಕುವ ಮೂಲಕ ಕಳಪೆ ಹೆಲ್ಮೆಟ್‌ಗಳ ವಿರುದ್ಧ ಸಮರ ಸಾರಿರುವ ಪೊಲೀಸರಿಗೇ ಸಾರ್ವಜನಿಕರು ಬಿಸಿ ಮುಟ್ಟಿಸಿದ್ದಾರೆ.
ನಗರದ ಚೆಲುವಾಂಬ ಪಾರ್ಕ್‌ಬಳಿ ಪೊಲೀಸ್ ಪೇದೆ ತನ್ನ ದ್ವಿಚಕ್ರ ವಾಹನದಲ್ಲಿ ಕಳಪೆ ಹೆಲ್ಮೆಟ್ ಇಟ್ಟಿರುವುದನ್ನು ಗಮನಿಸಿದ ಸಾರ್ವಜನಿಕರು, ಪೊಲೀಸರಿಗೊಂದು ನ್ಯಾಯ, ನಮಗೊಂದು ನ್ಯಾಯವೇ ಎಂದು ಪೇದೆಯೊಂದಿಗೆ ಮಾತಿನ ಚಕಮಕಿ ನಡೆಸಿ, ಹೆಲ್ಮೆಟನ್ನು ಒಡೆದು ಹಾಕಿದ್ದಾರೆ.
ಈ ವೇಳೆ ಪೇದೆ ಸಮಜಾಯಿಷಿ ನೀಡಿ ನಾನು ಹೆಲ್ಮೆಟ್ ಧರಿಸಿಲ್ಲ ತನ್ನ ಬೈಕ್‌ನಲ್ಲಿ ಇರಿಸಿದ್ದೇನೆ ಅಷ್ಟೆ ಎಂದು ವಾದಿಸತೊಡಗಿದಾಗ ಹೆಲ್ಮೆಟ್ ಕಿತ್ತು ಒಡೆದು ಹಾಕಿದ ಸಾರ್ವಜನಿಕರು, ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಓಡಿಸುವಂತಿಲ್ಲ. ಈಗ ಹೇಗೆ ಹೋಗುತ್ತೀರಿ ಎಂದು ಪ್ರಶ್ನಿಸಿದಾಗ ಜನರು ಕಣ್ಮರೆಯಾಗುವವರೆಗೂ ಪೊಲೀಸ್ ಪೇದೆ ತನ್ನ ದ್ವಿಚಕ್ರ ವಾಹನವನ್ನು ತಳ್ಳಿಕೊಂಡು ಹೋಗಿರುವ ಘಟನೆ ನಡೆದಿದೆ.
ಐಎಸ್‌ಐ ಮುದ್ರೆ ಇಲ್ಲದ ಅರ್ಧ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಓಡಿಸುವವರ ವಿರುದ್ಧ ಮಂಗಳವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, 15,501 ಕಳಪೆ ಹೆಲ್ಮೆಟ್‌ಗಳನ್ನು ವಶಪಡಿಸಿಕೊಂಡಿದ್ದರು.
ಹೆಲ್ಮೆಟ್ ಖರೀದಿಸಲು ಎರಡು ದಿನ ಕಾಲಾವಕಾಶ
ಮೈಸೂರು: ಗುಣಮಟ್ಟದ ಹೆಲ್ಮೆಟ್ ಖರೀದಿಸಲು ಎರಡು ದಿನಗಳ ಕಾಲಾವಕಾಶ ನೀಡಿರುವ ಪೊಲೀಸರು, ಜನವರಿ 6ರಿಂದ ಆಪರೇಷನ್ ಸೇಫ್ ರೈಡ್ ಕಾರ್ಯಾಚರಣೆಯನ್ನು ಮತ್ತೆ ಆರಂಭಿಸುವುದಾಗಿ ತಿಳಿಸಿದ್ದಾರೆ. ಬಿಐಎಸ್/ಐಎಸ್‌ಐ ಗುಣಮಟ್ಟದ ಹೆಲ್ಮೆಟ್‌ಗಳನ್ನು ಖರೀದಿಸಿ ಇನ್ನು ಮುಂದೆ ಅವುಗಳನ್ನೇ ಕಡ್ಡಾಯವಾಗಿ ಧರಿಸಲು ಜ.5ರವರೆಗೆ ಸಾರ್ವಜನಿಕರಿಗೆ ಕಾಲಾವಕಾಶ ನೀಡಲಾಗಿದೆ.
ಆಪರೇಷನ್ ಸೇಫ್ ರೈಡ್ ಆರಂಭವಾದ ಮೇಲೆ ಸಾರ್ವಜನಿಕರು ಬಿಐಎಸ್/ಐಎಸ್‌ಐ ಗುಣಮಟ್ಟದ ಹೆಲ್ಮೆಟ್‌ಗಳನ್ನು ಹೆಚ್ಚಾಗಿ ಖರೀದಿಸಲು ಅರಂಭಿಸಿರುವ ಹಿನ್ನಲೆಯಲ್ಲಿ ಕೆಲವು ವರ್ತಕರು ಹೆಲ್ಮೆಟ್‌ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆಂದು ದೂರುಗಳು ಕೇಳಿಬರುತ್ತಿದ್ದು, ಈ ರೀತಿ ಕಂಡು ಬಂದಲ್ಲಿ ಸಾರ್ವಜನಿಕರು ಇದರ ಬಗ್ಗೆ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡುವುದು.
ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ಈಗಾಗಲೇ ಕ್ರಮಕೈಗೊಂಡು ಅಂತಹ ಹೆಲ್ಮೆಟ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗುತ್ತಿದೆ. ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿಗಳು ಇದ್ದಲ್ಲಿ ಅಂತಹ ಮಾಹಿತಿಯನ್ನು ಸಾರ್ವಜನಿಕರು ಪೊಲೀಸರಿಗೆ ನೀಡುವುದು.
ಆಪರೇಷನ್ ಸೇಫ್ ರೈಡ್ ಕಾರ್ಯಾಚರಣೆಯು ಸಂಪೂರ್ಣವಾಗಿ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ನಡೆಯುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ನಗರ ಪೊಲೀಸ್ ಆಯುಕ್ತ ಡಾ.ಎ. ಸುಬ್ರಹ್ಮಣ್ಯೇಶ್ವರ ರಾವ್ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
MUST WATCH
ಹೊಸ ಸೇರ್ಪಡೆ
Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.